ರಾಜಧಾನಿಗೆ ಪ್ರಧಾನಿ ಆಗಮನ; ಎಲ್ಲೆಲ್ಲಿ ಸಂಚಾರ ನಿರ್ಬಂಧ

Date:

  • ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ
  • ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ

ರಾಜಧಾನಿ ಬೆಂಗಳೂರಿನಲ್ಲಿ ಮಾರ್ಚ್ 25ರಂದು ವೈಟ್ ಫಿಲ್ಡ್ – ಕೆ.ಆರ್.ಪುರ ನಡುವಿನ ಮೆಟ್ರೋಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ, ನಗರದ ಕೆಲವೆಡೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ವೈಟ್ ಫೀಲ್ಡ್ –ಕೆ.ಆರ್.ಪುರ ನೂತನ ಮೆಟ್ರೋ ಮಾರ್ಗದ ಉದ್ಘಾಟನೆಯ ನಂತರ ಮಹದೇವಪುರ ಕ್ಷೇತ್ರದ ಸತ್ಯ ಸಾಯಿ ಆಶ್ರಮದಿಂದ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಮೆಟ್ರೋ ಸುತ್ತಮುತ್ತ 5 ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಮಾ.25ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಯಾವ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ?

• ವರ್ತೂರು ಕೋಡಿಯಿಂದ ಹೋಫ್ ಫಾರಂ ಜಂಕ್ಷನ್ ಮೂಲಕ ಕನ್ನಮಂಗಲ ಗೇಟ್ ವರೆಗೆ
• ಚನ್ನಸಂದ್ರದಿಂದ ಹೋಫ್ ಫಾರಂ ಮೂಲಕ ಹೂಡಿ ಸರ್ಕಲ್ ವರೆಗೆ
• ಕುಂದಲಹಳ್ಳಿ ರಸ್ತೆಯಿಂದ ವೈದೇಹಿ ಆಸ್ಪತ್ರೆ ಮೂಲಕ ಹೋಫ್ ಫಾರಂ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧ

ಸಂಚಾರ ಮಾರ್ಪಾಡು ಮಾಡಿದ ರಸ್ತೆಗಳು

• ವರ್ತೂರು ಕೋಡಿಯಿಂದ ಕುಂದಲಹಳ್ಳಿ ಬ್ರಿಡ್ಜ್ ಮೂಲಕ ಹಳೇ ಏರ್ ಪೋರ್ಟ್ ರಸ್ತೆ ತಲುಪುವುದು
• ಚನ್ನಸಂದ್ರ ಸರ್ಕಲ್ ನಿಂದ ನಾಗೊಂಡನಹಳ್ಳಿ, ಇಮ್ಮಡಿಹಳ್ಳಿ ಹಗದೂರು ಮೂಲಕ ವರ್ತೂರು ಕೋಡಿ ತಲುಪುವುದು
• ಕಾಟಂನಲ್ಲೂರು ಕ್ರಾಸ್ ನಿಂದ ಶೀಗೆಹಳ್ಳಿ ಗೇಟ್, ಕಾಡುಗೋಡಿ ನಾಲಾ ರಸ್ತೆ ಮೂಲಕ ಚನ್ನಸಂದ್ರ
• ಹೂಡಿ ಸರ್ಕಲ್ ನಿಂದ ಗ್ರಾಫೈಟ್ ರಸ್ತೆ ಮೂಲಕ ಕುಂದಲಹಳ್ಳಿ ತಲುಪುವುದು
• ಹೂಡಿ ಸರ್ಕಲ್ ನಿಂದ ಅಯ್ಯಪ್ಪನಗರ, ಭಟ್ಟರಹಳ್ಳಿ-ಮೇಡಹಳ್ಳಿ ಮೂಲಕ ಕಾಟಂನಲ್ಲೂರು ಕ್ರಾಸ್ ತಲುಪುವುದು.

https://twitter.com/blrcitytraffic/status/1639166956291932161?s=20

ಐದು ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ಕೂಡ ನಿರ್ಬಂಧ

• ಕಾಟಂನಲ್ಲೂರು ಕ್ರಾಸ್ ನಿಂದ ಕಾಡುಗೋಡಿ, ಹೋಫ್ ಫಾರಂ ಜಂಕ್ಷನ್-ವರ್ತೂರು ಕೋಡಿವರೆಗೆ
• ಗುಂಜೂರುನಿಂದ ವರ್ತೂರು, ವೈಟ್ ಫೀಲ್ಡ್, ಕಾಡುಗೋಡಿ, ಕಾಟಂನಲ್ಲೂರು ಕ್ರಾಸ್ ವರೆಗೆ.
• ತಿರುಮಲಶೆಟ್ಟಿಹಳ್ಳಿ ಕ್ರಾಸ್ ನಿಂದ ಚನ್ನಸಂದ್ರ, ಹೋಫ್ ಫಾರಂ ಜಂಕ್ಷನ್ ವರೆಗೆ
• ಟಿನ್ ಫ್ಯಾಕ್ಟರಿಯಿಂದ ಹೂಡಿ, ಐಟಿಪಿಎಲ್, ಹೋಫ್ ಫಾರಂ ಜಂಕ್ಷನ್ ವರೆಗೆ.
• ಮಾರತ್ತಹಳ್ಳಿ ಬ್ರಿಡ್ಜ್ ನಿಂದ ಕುಂದಲಹಳ್ಳಿ, ವರ್ತೂರು ಕೋಡಿ, ವೈಟ್ ಫೀಲ್ಡ್ ವರೆಗೆ ಭಾರೀ ವಾಹನಗಳ ಸಂಚಾರ ನಿರ್ಬಂಧ.

ಭಾರೀ ವಾಹನಗಳ ಸಂಚಾರ ಮಾರ್ಪಾಡು

• ಹೊಸಕೋಟೆಯಿಂದ ದೊಡ್ಡಗಟ್ಟಿಗನಬ್ಬೆ, ತಿರುಮಲಶೆಟ್ಟಿಹಳ್ಳಿ, ಚಿಕ್ಕತಿರುಪತಿ ಮೂಲಕ ಸರ್ಜಾಪುರ ತಲುಪುವುದು
• ಸರ್ಜಾಪುರದಿಂದ ಗುಂಜೂರು, ನೆರಿಗೆರಸ್ತೆ, ತಿರುಮಲಶೆಟ್ಟಿಹಳ್ಳಿ ಮೂಲಕ ಹೊಸಕೋಟೆ
• ಟಿನ್ ಫ್ಯಾಕ್ಟರಿಯಿಂದ ಕೆ ಆರ್ ಪುರ, ಭಟ್ಟರಹಳ್ಳಿ ಮೂಲಕ ಹೊಸಕೋಟೆ.
• ಮಾರತ್ತಹಳ್ಳಿಯಿಂದ ದೊಡ್ಡನೆಕ್ಕುಂದಿ ಮಹದೇವಪುರ ಟಿನ್ ಫ್ಯಾಕ್ಟರಿ ಮೂಲಕ ಭಟ್ಟರಹಳ್ಳಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು ಟೌನ್‌ಹಾಲ್...

ಬೆಂಗಳೂರು | ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ನಿವಾಸಿಗಳು : ಎಫ್‌ಐಆರ್‌ ದಾಖಲು

ಬುಧವಾರ ಬೆಳಗ್ಗೆಯಿಂದ ಜ್ವರ ಹಾಗೂ ವಾಂತಿ–ಭೇದಿಯಿಂದ ಬಳಲಿದ ಮಕ್ಕಳು 140 ಜನರನ್ನು ಮತ್ತೆ...

‘ನಮ್ಮ ಮೆಟ್ರೋ’ ಯೋಜನೆಗಾಗಿ 203 ಮರ ಕಡಿಯಲು ಅನುಮತಿ ನೀಡಿದ ಹೈಕೋರ್ಟ್‌

ನಮ್ಮ ಮೆಟ್ರೋ ಕಾಮಗಾರಿ ವಿಳಂಬವಾದರೆ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆ ನಮ್ಮ ಮೆಟ್ರೋ ಸಾರ್ವಜನಿಕ...

ಬೆಂಗಳೂರು | ವಾಹನ ಕಳ್ಳರನ್ನು ಬಂಧಿಸಿದ ಪೊಲೀಸರು

10 ದ್ವಿಚಕ್ರ ವಾಹನಗಳೊಂದಿಗೆ ಜೂ. 3ರಂದು ಆರೋಪಿಗಳ ಬಂಧನ ವಾಹನಗಳನ್ನು ಕಡಿಮೆ ಬೆಲೆಗೆ...