ಬೆಂಗಳೂರು ಪೊಲೀಸರ ದೈಹಿಕ, ಮಾನಸಿಕ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’- ಏನಿದು ಯೋಜನೆ?

Date:

ಹಗಲು-ರಾತ್ರಿಯೆನ್ನದೆ ಸಾರ್ವಜನಿಕರ ರಕ್ಷಣೆಗಾಗಿ ಶ್ರಮಿಸುವ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿ ‘ಪ್ರಾಜೆಕ್ಟ್ ಖುಷಿ’ ಎಂಬ ವಿಶೇಷ ಆರೋಗ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ‘ಹ್ಯಾಪಿಯೆಸ್ಟ್ ಹೆಲ್ತ್’ (Happiest , ಟೈಟಾನ್ ಕಂಪನಿ ಲಿಮಿಟೆಡ್ (CSR) ಹಾಗೂ ರೋಟರಿ ಇಂದಿರಾನಗರ ಸಹಯೋಗದೊಂದಿಗೆ ಬೆಂಗಳೂರು ನಗರ ಪೊಲೀಸ್ ಇಲಾಖೆ ಈ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.

- Advertisement -

ನಿರಂತರ ಕೆಲಸದ ಒತ್ತಡ, ಸರಿಯಾದ ನಿದ್ರೆಯ ಅಭಾವ, ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದಿರುವುದು ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗದ ಸ್ಥಿತಿಯಿಂದಾಗಿ ಅನೇಕ ಪೊಲೀಸ್ ಸಿಬ್ಬಂದಿ ಬಿಪಿ, ಮಧುಮೇಹ ಹಾಗೂ ಮಾನಸಿಕ ಒತ್ತಡಕ್ಕೆ ತುತ್ತಾಗುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಬೆಂಗಳೂರು ನಗರ ಪೊಲೀಸ್ ಇಲಾಖೆಯು ಈ ಯೋಜನೆಯನ್ನು ಜಾರಿಗೊಳಿಸಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಎಲೆಕ್ಟ್ರಾನಿಕ್ ಸಿಟಿ ವಿಭಾಗದಲ್ಲಿ ಈ ಯೋಜನೆಯನ್ನು ಉದ್ಘಾಟಿಸಿದ್ದು, ಮುಂದಿನ 3 ವರ್ಷಗಳಲ್ಲಿ ಒಟ್ಟು 600 ಪೊಲೀಸ್ ಸಿಬ್ಬಂದಿಗೆ ಈ ಕಾರ್ಯಕ್ರಮದ ಪ್ರಯೋಜನ ಸಿಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನೂ ಓದಿ: ಜುಲೈ 20ರ ಪೊಲೀಸ್ ದೌರ್ಜನ್ಯ ತನಿಖೆ: ‘ಮಾಜಿ ಸಿಜೆಐ’ ನೇತೃತ್ವದಲ್ಲಿ ಸಮಿತಿ ಪುನರ್‌ರಚನೆಗೆ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್

“ಪೋಲಿಸ್ ಸಿಬ್ಬಂದಿ ಕೇವಲ 90 ದಿನಗಳ ತಾತ್ಕಾಲಿಕ ಬದಲಾವಣೆಯಷ್ಟೇ ಅಲ್ಲದೆ, ಜೀವನಪರ್ಯಂತ ಆರೋಗ್ಯಕರ ಜೀವನಶೈಲಿಯನ್ನು ಮೈಗೂಡಿಸಿಕೊಳ್ಳಬೇಕು ಎಂಬುದು ಈ ಯೋಜನೆಯ ಮೂಲ ಉದ್ದೇಶ” ಎಂದು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಏನಿದು ಯೋಜನೆ, ಸಿಗುವ ಪ್ರಮುಖ ಸೌಲಭ್ಯಗಳು

ಪ್ರತಿಯೊಂದು ಬ್ಯಾಚ್‌ನ ಸಿಬ್ಬಂದಿಗೆ 90 ದಿನಗಳ (3 ತಿಂಗಳು) ಸಮಗ್ರ ಆರೋಗ್ಯ ಶಿಬಿರ ನೀಡಲಾಗುತ್ತದೆ. ಇದರಲ್ಲಿ ಪ್ರತ್ಯಕ್ಷ ಹಾಗೂ ಡಿಜಿಟಲ್ ಮಾರ್ಗದರ್ಶನ ಎರಡೂ ಸೇರಿವೆ. ರಕ್ತ ಪರೀಕ್ಷೆ, BMI (ಬಾಡಿ ಮಾಸ್ ಇಂಡೆಕ್ಸ್), ಸೊಂಟ-ಕಿಬ್ಬೊಟ್ಟೆಯ ಅನುಪಾತ (Hip-Waist Ratio) ಹಾಗೂ ತೂಕ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಸಿಬ್ಬಂದಿಗೆ ಸೂಕ್ತ ಆಹಾರ ಕ್ರಮ, ಯೋಗ, ಧ್ಯಾನ ಹಾಗೂ ಮನಸ್ಸಿನ ನೆಮ್ಮದಿಗೆ ತಜ್ಞರಿಂದ ತರಬೇತಿ ಸಿಗಲಿದೆ. ಹೃದ್ರೋಗ ತಡೆ, ಮಧುಮೇಹ ನಿಯಂತ್ರಣ, ಉತ್ತಮ ನಿದ್ರೆ ಹಾಗೂ ವೃತ್ತಿಜೀವನದ ಒತ್ತಡ ಕಡಿಮೆ ಮಾಡುವ ಕೌನ್ಸೆಲಿಂಗ್ ಸೌಲಭ್ಯ ಕಲ್ಪಿಸಲಾಗಿದೆ.

ಪೈಲಟ್ ಪ್ರಾಜೆಕ್ಟ್‌ನಲ್ಲಿ ಸಿಕ್ಕ ಯಶಸ್ಸು ಎಷ್ಟು?

ಈ ಯೋಜನೆಯನ್ನು ಆರಂಭಿಕವಾಗಿ ಜಾರಿಗೆ ತಂದಾಗ ಸಿಬ್ಬಂದಿಯ ಆರೋಗ್ಯದಲ್ಲಿ ಯಶಸ್ಸು ಕಂಡಿದೆ. ಶೇಕಡ 61 ಸಿಬ್ಬಂದಿಯಲ್ಲಿ ರಕ್ತದಲ್ಲಿನ ಸಕ್ಕರೆ (ಬ್ಲಡ್ ಶುಗರ್) ಪ್ರಮಾಣ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಶೇಕಡ 70 ಮಂದಿಯಲ್ಲಿ ಕಂಡುಬಂದಿದ್ದ ‘ವಿಟಮಿನ್ ಬಿ12’ ಕೊರತೆ ನಿವಾರಣೆಯಾಗಿದೆ. ಶೇಕಡ 59ರಷ್ಟು ಪೊಲೀಸರು 0.5 ಕೆಜಿಯಿಂದ 6.1 ಕೆಜಿವರೆಗೆ ತೂಕ ಇಳಿಸಿಕೊಂಡು ಫಿಟ್‌ನೆಸ್ ಸಾಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...