ಐಶ್ವರ್ಯ ಗೌಡಗೆ ಸಂಬಂಧಿಸಿದ ಕೋಟ್ಯಾಂತರ ರೂ. ಮೌಲ್ಯದ ಆಸ್ತಿ ಇ.ಡಿಯಿಂದ ಮುಟ್ಟುಗೋಲು

Date:

ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತಿರುವ ಐಶ್ವರ್ಯಾ ಗೌಡ ಅವರಿಗೆ ಸಂಬಂಧಿಸಿದ 3.98 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಐಶ್ವರ್ಯಗೌಡ ಅವರಿಗೆ ಸೇರಿದ ಅಂದಾಜು 2.01 ಕೋಟಿ ರೂ. ಸ್ಥಿರಾಸ್ತಿ ಮತ್ತು ಅಂದಾಜು 1.97 ಕೋಟಿ ರೂ. ಮೌಲ್ಯದ ಚರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಐಶ್ವರ್ಯಗೌಡ ಅವರಿಗೆ ಸಂಬಂಧಿಸಿದ ಒಟ್ಟು 3.98 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

- Advertisement -

ಐಶ್ವರ್ಯ ಗೌಡ ಅವರ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲಾಟ್​ ಮೇಲೆ ಇ.ಡಿ ಅಧಿಕಾರಿಗಳು ಏಪ್ರಿಲ್​​ 24 ರಂದು ದಾಳಿ ಮಾಡಿದ್ದರು. ಐಶ್ವರ್ಯ, ಆಕೆಯ ಪತಿ ಹರೀಶ್ ಮತ್ತು ಇತರರ ವಿರುದ್ಧ ತನಿಖೆ ನಡೆಸಿದ್ದ ಇ.ಡಿ ಆರೋಪಿಗಳು ಹೆಚ್ಚಿನ ಲಾಭ ನೀಡುವುದಾಗಿ ಹಣ ಪಡೆದಿದ್ದರು. ಆದರೆ ಪಡೆದ ಹಣವನ್ನು ವಾಪಸ್ ನೀಡದೆ ವಂಚಿದ್ದರು. ಆರೋಪಿಗಳ ವಿರುದ್ಧ ಹಣ ನೀಡಿದವರಿಗೆ ದೊಡ್ಡ ರಾಜಕಾರಣಿಗಳ ಹೆಸರು ಹೇಳಿ ಬೆದರಿಕೆ ಹಾಕಿದ್ದ ಆರೋಪ ಇತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | 1180 ದಿನಗಳ ಚನ್ನರಾಯಪಟ್ಟಣ ಚಳವಳಿಗೆ ಸರ್ಕಾರ ಸ್ಪಂದಿಸಲಿ

ಪ್ರಕರಣ ಸಂಬಂಧ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇ.ಡಿ ದಾಳಿ ಮಾಡಿತ್ತು. ದಾಳಿ ವೇಳೆ ಅಕ್ರಮ ಹಣ ವರ್ಗಾವಣೆ ಸಂಬಂಧ ದಾಖಲೆಗಳು ಸಿಕ್ಕಿದ್ದವು. ತನಿಖೆ ವೇಳೆ ಅಕ್ರಮ ಹಣ ವರ್ಗಾವಣೆ ಕಂಡುಬಂದ ಹಿನ್ನೆಲೆಯಲ್ಲಿ ಐಶ್ವರ್ಯ ಮತ್ತು ಇತರರಿಗೆ ಸಂಬಂಧಿಸಿದ ಆಸ್ತಿಗಳನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ.

ಬೆಂಗಳೂರು ನಗರ ಸೆಷನ್ಸ್ ನ್ಯಾಯಾಲಯ ಐಶ್ವರ್ಯಾ ಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ನ್ಯಾಯಾಲಯ ಐಶ್ವರ್ಯ ಗೌಡ ಅವರಿಗೆ ಐದು ಲಕ್ಷ ರೂ. ಮೌಲ್ಯದ ಶ್ಯೂರಿಟಿ ಬಾಂಡ್‌ ಹಾಗೂ ಹಲವು ಷರತ್ತುಗಳನ್ನು ವಿಧಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...