ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

Date:

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ ವಿರೋಧಿಸಿ ಬಿಡದಿಯಲ್ಲಿ ರೈತರು ಅಹೋರಾತ್ರಿ ಉಪವಾಸ ಧರಣಿ ನಡೆಸುತ್ತಿದ್ದಾರೆ. ರೈತರ ಉಪವಾಸ ಸತ್ಯಾಗ್ರಹವು 2ನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸವಿದ್ದ ರೈತರಲ್ಲಿ ನಾಗೇಶ್, ಕೃಷ್ಣಪ್ಪ ಹಾಗೂ ವೀರೇಶ್ ಎಂಬವರು ಮಂಗಳವಾರ ಮಧ್ಯಾಹ್ನ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

 ಯೋಜನೆ ಮತ್ತು ಭೂಸ್ವಾಧೀನದ ವಿರುದ್ಧ ರೈತರು ಅನ್ನ-ನೀರು ತೊರೆದು, ಉರಿಬಿಸಿಲಿನಲ್ಲಿ ನಿರಂತರ ಪ್ರತಿಭಟನೆ ನಡೆಸಿದ್ದರಿಂದ ನಿರ್ಜಲೀಕರಣ ಮತ್ತು ಆಯಾಸದಿಂದ ಕುಸಿದುಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಧಾವಿಸಿದ ವೈದ್ಯರ ತಂಡವು ತಕ್ಷಣವೇ ಅಸ್ವಸ್ಥಗೊಂಡಿದ್ದ ರೈತರಿಗೆ ಹಣ್ಣಿನ ರಸ ಕುಡಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಬಿಡದಿ ಟೌನ್‌ಶಿಪ್‌ ಯೋಜನೆಯಡಿ ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಕಳೆದ 18 ತಿಂಗಳುಗಳಿಂದ ನಿರಂತರ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಇತ್ತೀಚೆಗೆ, ಸರ್ಕಾರವು ಯೋಜನೆಯನ್ನು ಸ್ಥಗಿತಗೊಳಿಸುವುದಾಗಿ ಮತ್ತು ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಾಗಿ ಭರವಸೆ ನೀಡಿತ್ತು. ಆದರೂ, ಸರ್ಕಾರ ತನ್ನ ಭರವಸೆಯಂತೆ ನಡೆದುಕೊಳ್ಳುತ್ತಿಲ್ಲ ಎಂದು ರೈತರು ಆರೋಪಿಸಿ, ಮತ್ತೆ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಯೋಜನೆಯ ರದ್ದತಿಗಾಗಿ ಅಗ್ರಹಿಸಿ ಕೆಲವು ರೈತರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಹಲವಾರು ರೈತರು ತಮ್ಮ ಜಾನುವಾರುಗಳು, ಎತ್ತಿನಗಾಡಿಗಳು ಹಾಗೂ ಟ್ರ್ಯಾಕ್ಟರ್‌ಗಳೊಂದಿಗೆ ಬೈರಮಂಗಲ ವೃತ್ತದಲ್ಲಿ ಜಮಾಯಿಸಿ, ರಸ್ತೆ ತಡೆ ನಡೆಸಿ, ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ‘ನಮ್ಮ ಭೂಮಿ ನಮ್ಮ ಹಕ್ಕು’ ಎಂದು ಘೋಷಣೆ ಕೂಗಿದ್ದಾರೆ. ಮಾತ್ರವಲ್ಲದೆ, ರಸ್ತೆಯಲ್ಲೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ನಡೆಸಿದ್ದಾರೆ.

ರಸ್ತೆಯಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರು ರೈತರು ಪೆಂಡಾಲ್ ಹಾಕುವುದನ್ನು ತಡೆಯಲು ಯತ್ನಿಸಿದ್ದಾರೆ. ಪೊಲೀಸರ ನಡೆಗೆ ಆಕ್ರೋಶಗೊಂಡ ರೈತರು ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರ ಮನವಿಗೆ ಬಗ್ಗದ ರೈತರು, ಸುಡುವ ಬಿಸಿಲನ್ನೂ ಲೆಕ್ಕಿಸದೆ ರಸ್ತೆಯಲ್ಲೇ ಕುಳಿತು ರಾಜ್ಯ ಸರ್ಕಾರ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

“ಟೌನ್‌ಶಿಪ್ ವಿರೋಧಿ ಹೋರಾಟದ ಹಿನ್ನೆಲೆಯಲ್ಲಿ ಜುಲೈ 14ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರೈತ ಮುಖಂಡರ ಸಭೆ ಕರೆದಿದ್ದರು. ಜಮೀನು ಕೊಡಲು ಇಷ್ಟವಿಲ್ಲದವರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ, ಅವರ ಭರವಸೆ ಈಗ ಹುಸಿಯಾಗಿದೆ. ಅಲ್ಲದೆ, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಒಂದು ತಿಂಗಳಲ್ಲಿ ವರದಿ ಪಡೆಯಲಾಗುವುದು ಎಂದು ಹೇಳಿದ್ದರು. ಆದರೆ, ತಿಂಗಳಾದರೂ ಸಮಿತಿಯು ಸ್ಥಳಕ್ಕೆ ಬಂದಿಲ್ಲ. ಸಿಎಂ ತಮ್ಮ ಮಾತನ್ನು ತಪ್ಪಿದ್ದಾರೆ, ನಮಗೆ ಗ್ಯಾರಂಟಿ ಸಿಗುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದು ರೈತ ಮುಖಂಡರಾದ ಹೊಸೂರು ಪ್ರಕಾಶ್ ಹಾಗೂ ಯಶವಂತ್ ಹೇಳಿದ್ದಾರೆ.

ರೈತರ ಪ್ರತಿಭಟನೆ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, “ಕರ್ನಾಟಕದಲ್ಲಿ ನಾಗರಿಕ ಸರ್ಕಾರವಿದೆಯೋ ಅಥವಾ ರಾಕ್ಷಸ ಸರ್ಕಾರವಿದೆಯೋ? ತಮ್ಮ ಭೂಮಿ ಉಳಿಸಿಕೊಳ್ಳಲು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಅನ್ನದಾತರನ್ನು ಉರಿಬಿಸಿಲಿನಲ್ಲಿ ಕೂರಿಸಿ ದಬ್ಬಾಳಿಕೆ ನಡೆಸಿರುವುದು ದೈವದ್ರೋಹಕ್ಕೂ ಮೀರಿದ್ದು. ಬಿಡದಿಯ ಫಲವತ್ತಾದ ಭೂಮಿ ‘ರಿಯಲ್ ಎಸ್ಟೇಟ್ ವ್ಯಾಪಾರಿ’ಯ ಕಪಿಮುಷ್ಟಿಗೆ ಸಿಲುಕಿದೆ, ನೆನಪಿರಲಿ ‘ಹಿರಣ್ಯಾಕ್ಷ’ನ ಪಾಪದ ಕೊಡ ತುಂಬುತ್ತಿದೆ” ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು, ಕೇರಳದ ಸಿಪಿಐ(ಎಂ) ಮಾಜಿ ಶಾಸಕ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರೀಯ ಕಾರ್ಯದರ್ಶಿ ಪಿ ಕೃಷ್ಣಪ್ರಸಾದ್ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಗ್ರಾಮಗಳ ಕೃಷಿ ಭೂಮಿಯನ್ನು ನಗರಾಭಿವೃದ್ಧಿ ಕಾಯ್ದೆಯಡಿ ಸ್ವಾಧೀನಪಡಿಸಿಕೊಳ್ಳುವುದು ಕಾನೂನುಬಾಹಿರ. ದೇಶಾದ್ಯಂತ ಬಿಡದಿ ರೈತರ ಪರ ಬೆಂಬಲ ಕ್ರೋಡಿಕರಿಸಲಾಗುವುದು ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳ್ಳಿ ಮಕ್ಕಳಿಗೆ ‘ಎಐ’ ತಂತ್ರಜ್ಞಾನ, ಉದ್ಯಮ ಆಧಾರಿತ ಪಠ್ಯಕ್ರಮಕ್ಕೆ ಒತ್ತು: ಡಿ ಕೆ ಶಿವಕುಮಾರ್

ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ‘ಕಿಯೋ’ ಕಂಪ್ಯೂಟರ್‌ಗಳ ಮೂಲಕ ಗ್ರಾಮೀಣ ಭಾಗದ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ ನಿರೀಕ್ಷೆ

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು......

ಈ ದಿನ ಸಂಪಾದಕೀಯ | ನಕಲಿ ಆಹಾರ ಮತ್ತು ಔಷಧ: ಜನರ ಜೀವದ ಜೊತೆ ಚೆಲ್ಲಾಟ

ಆಹಾರ ಮತ್ತು ಔಷಧಗಳ ಉತ್ಪಾದನೆ, ಸಂಗ್ರಹಣೆ ಹಾಗೂ ವಿತರಣಾ ವ್ಯವಸ್ಥೆಯಲ್ಲಿ ನಡೆಯುವ...