ಬೆಂಗಳೂರು | ಸರ್ಕಾರದ ಧೋರಣೆ ಖಂಡಿಸಿ, ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಇಂದು ಪ್ರತಿಭಟನೆ

Date:

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್‌ನನ್ನು ಬಂಧಿಸುವಂತೆ ಆಗ್ರಹಿಸಿ, ರಾಜ್ಯ ಸರ್ಕಾರದ ಬೇಜವಾಬ್ದಾರಿ ಧೋರಣೆಯನ್ನು ಖಂಡಿಸಿ ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರು ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ (ಇಂದು) ಸಂಜೆ 4 ಗಂಟೆಗೆ ಜನಾಕ್ರೋಶ ಪ್ರತಿಭಟನೆ ನಡೆಯಲಿದೆ.

- Advertisement -

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಭಾನುವಾರ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್‌ ಗಂಡನನ್ನು ಕೊಟ್ಟಿದ್ದು ಮೋದಿ” ಎಂದು ಹೇಳಿದ್ದರು. ಮುಸ್ಲಿಮ್‌ ಮಹಿಳೆಯರ ಕುರಿತು ಆತನ ಅವಹೇಳನಕಾರಿ ಹೇಳಿಕೆ ಶ್ರೀರಂಗಪಟ್ಟಣ ನಗರ ಠಾಣೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ದೂರು ದಾಖಲಿಸಿದ್ದರು. ಅವರ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಎಫ್‌ಐಆರ್‌ ರದ್ದು ಕೋರಿ ಕಲ್ಲಡ್ಕ ಪ್ರಭಾಕರ್‌ ಭಟ್‌ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರ, “ಕಲ್ಲಡ್ಕ ಪ್ರಭಾಕರ್‌ ಭಟ್‌ ಹೇಳಿಕೆಯ ಬಗ್ಗೆ ತನಿಖೆ ನಡೆಸಲಾಗುವುದು. ಸದ್ಯಕ್ಕೆ ಅವರನ್ನು ನಾವು ಬಂಧಿಸುವುದಿಲ್ಲ” ಎಂದು ಹೇಳಿದೆ.

ಸರ್ಕಾರದ ನಡೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಡೆಯನ್ನು ಖಂಡಿಸಿ, ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...