ಸ್ಲಂ ಜನರ ಅಭಿವೃದ್ಧಿ ತಾರತಮ್ಯ ವಿರೋಧಿಸಿ ಪ್ರತಿಭಟನೆ- ಹಕ್ಕೊತ್ತಾಯ ಮಂಡನೆ

Date:

- Advertisement -

ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಫೆಬ್ರವರಿ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸ್ಲಂ ಜನರ ಮೇಲಿನ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಹಾಗೂ ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

2025-26ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು ನೀಡಬೇಕು. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸಬೇಕು ಹಾಗೂ ಸ್ಲಂ ಜನರಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ ಯೋಜನೆ ಘೋಷಣೆ ಸೇರಿದಂತೆ ನಿವೇಶನ ರಹಿತರಿಗೆ ವಸತಿ ಕಲ್ಪಿಸುವ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಈಡೇರಿಕೆಗೆ ಒತ್ತಾಯಿಸಲಾಯಿತು.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಕಾರ್ಯಕರ್ತರು ಫ್ರೀಡಂ ಪಾರ್ಕ್‌ನಲ್ಲಿ ಸೇರಿದ್ದರು. ಆದರೆ, ಸಚಿವರು ಬರದಿದ್ದ ಕಾರಣ, ಕರ್ನಾಟಕ ಸ್ಲಂ ಡೆವಲಪ್ಮೆಂಟ್ ಬೋರ್ಡ್‌ನ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ ಅವರು ಮತ್ತು ಆಯುಕ್ತರಾದ ಡಾ. ಅಶೋಕ್ ಅವರು ಮನವಿಯನ್ನು ಸ್ವೀಕರಿಸಿದರು.

ಕರ್ನಾಟಕ ರಾಜ್ಯದ ನಗರ ಜನಸಂಖ್ಯೆಯಲ್ಲಿ ಶೇ.40% ರಷ್ಟು ಸ್ಲಂ ನಿವಾಸಿಗಳಾಗಿ ಪರಿಶಿಷ್ಟ ಜಾತಿ/ಪಂಗಡ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಅಲೆಮಾರಿ ಸಮುದಾಯಗಳನ್ನೊಳಗೊಂಡ ನಗರವಂಚಿತ ಸಮುದಾಯಗಳು ಸಾಮಾಜಿಕ ಅಸಮಾನತೆಯ ಭಾಗವಾಗಿ ಬದುಕು ಕಟ್ಟಿಕೊಡುತ್ತಿದ್ದು ಕೊಳಗೇರಿಗಳಲ್ಲಿರುವ ಜನರನ್ನು ನಾಗರಿಕರನ್ನಾಗಿ ಪರಿಗಣಿಸದೇ ತಾರತಮ್ಯವೆಸಗಲಾಗುತ್ತಿದೆ. ಅಂದರೆ ಭೂಮಿ ವಸತಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ ಬೀದಿ ದೀಪ ಶೌಚಾಲಯ ಜೀವನೋಪಾಯದಂತಹ ಕನಿಷ್ಠ ಸೌಲಭ್ಯಗಳನ್ನು ನೀಡದೇ ಅಭಿವೃದ್ಧಿಯಿಂದ ದೂರ ಇಡುವ ಮೂಲಕ ಸಂವಿಧಾನದ ಖಾತ್ರಿಗಳನ್ನು ದೊರಕದಂತೆ ಮಾಡಲಾಗಿದೆ. ಹಾಗಾಗಿ ಸಂವಿಧಾನದ ಸಾಮಾಜಿಕ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕ ಸರ್ಕಾರ ನಮ್ಮ ಪರವಾದ ನಿಲುವಿಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಯಿತು.

ಪ್ರಮುಖ ಹಕ್ಕೊತ್ತಾಯಗಳು :
1. 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ 5 ಸಾವಿರ ಕೋಟಿ ಹಣ ಮೀಸಲಿಡಬೇಕು.

2. ಖಾಸಗಿ ಸ್ಲಂಗಳ ಘೋಷಣೆಗೆ ತೊಡಕಾಗಿರುವ ವಸತಿ ಇಲಾಖೆ ಸುತ್ತೋಲೆಯನ್ನು ಹಿಂಪಡೆದು ಭೂಸ್ವಾಧೀನಕ್ಕೆ ಸರ್ಕಾರ ಹಣ ನೀಡಬೇಕು.

3. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ 50ನೇ ವರ್ಷದ ಸುವರ್ಣ ಸಂಭ್ರಮದ ನೆನಪಿಗಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾಯಿದೆಯನ್ನು ತಿದ್ದುಪಡಿ ಮಾಡಬೇಕು.

4. ಸ್ಲಂ ನಿವಾಸಿಗಳ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಬೇಕು.

5. ನಗರಗಳಲ್ಲಿ ಸಾಮಾಜಿಕ ಅಸಮಾನತೆಯ ಭಾಗವಾಗಿರುವ ಸ್ಲಂ ಜನರ ಆರ್ಥಿಕ ಅಭಿವೃದ್ಧಿ ಮತ್ತು ಜೀವನೋಪಾಯಕ್ಕಾಗಿ ನಗರ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೊಳಿಸಬೇಕು.

6. ನಿವೇಶನ ರಹಿತರಿಗೆ ಚಿತ್ರದುರ್ಗ ಘೋಷಣೆಯಂತೆ ವಸತಿ ಕಲ್ಪಿಸಲು 2017-18ರ ಬಜೆಟ್ ಘೋಷಣೆಯಂತೆ ನಗರ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸಬೇಕು.

7. ಪ್ರಧಾನಮಂತ್ರಿ ಆವಾಸ್ ಯೋಜನೆ ಫಲಾನುಭವಿ ಶುಲ್ಕವನ್ನು ಎಸ್‌ಸಿ/ಎಸ್‌ಟಿಗಳಿಗೆ ಉಚಿತ ಇತರೆ ಸಮುದಾಯಗಳಿಗೆ 25 ಸಾವಿರ ಪಾವತಿಸಲು ಅವಕಾಶ ಕಲ್ಪಿಸಬೇಕು.

8. ಬೆಂಗಳೂರು ಸ್ಲಂ ನಿವಾಸಿಗಳ ಪುನರ್‌ವಸತಿಗಾಗಿ ಭೂ ಮಂಜೂರಾತಿ ನೀಡಬೇಕು ಹಾಗೂ ನೆಲಬಾಡಿಗೆ ಸ್ಲಂಗಳಿಗೆ ನೀತಿಯನ್ನು ರೂಪಿಸಬೇಕು.

ಸಾವಿತ್ರಿ ಬಾಯಿ ಪುಲೆ ಮಹಿಳಾ ಸಂಘಟನೆಯ ಸಂಚಾಲಕಿ ಚಂದ್ರಮ್ಮ, ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರ ಎ.ನರಸಿಂಹಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...