ಅತ್ಯಾಚಾರದ ಆರೋಪಿಗಳಾದ ಪ್ರಜ್ವಲ್‌, ಎಚ್‌ ಡಿ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Date:

ಅತ್ಯಾಚಾರದ ಆರೋಪಿಗಳಾದ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌ ಡಿ ರೇವಣ್ಣ ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ʼನಾವೆದ್ದು ನಿಲ್ಲದಿದ್ದರೆ, ಕರ್ನಾಟಕʼ ಸಂಘಟನೆಯಡಿ ಹಲವು ಪ್ರಗತಿಪರ ಚಿಂತಕರು, ಹೋರಾಟಗಾರರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

- Advertisement -

ನೂರಾರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೊ ಮಾಡಿದ್ದು ಅಕ್ಷಮ್ಯ. ಅಷ್ಟೇ ಅಲ್ಲ ಅಂತಹ ಅಶ್ಲೀಲ ವಿಡಿಯೊ, ಚಿತ್ರಗಳು ಬಹಿರಂಗಗೊಂಡು ಮಹಿಳೆಯರ ಘನತೆಗೆ ಧಕ್ಕೆಯಾಗಿದೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಹೊಳೆನರಸೀಪುರದ ದೂರಿಗೆ ಸಂಬಂಧಿಸಿದಂತೆ ಎ 1 ಆರೋಪಿ ಎಚ್‌ ಡಿ ರೇವಣ್ಣ ಅವರು ಹೈಕೋರ್ಟ್‌ಗೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿನ ಅರ್ಜಿ ವಾಪಸ್‌ ತೆಗೆದುಕೊಳ್ಳಲು ಕಾರಣವಾಗಿದ್ದು ಆತನನ್ನು ಬಂಧಿಸುವುದಿಲ್ಲ ಎಂದು ಕೋರ್ಟ್‌ಗೆ ಸರ್ಕಾರ ತಿಳಿಸಿದ್ದು. ಇದು ಅಕ್ಷಮ್ಯ, ಗಂಭೀರವಲ್ಲದ ಕಲಂನಡಿ ಎಫ್‌ಐಆರ್‌ ದಾಖಲಿಸಿ ಆರೋಪಿಯನ್ನು ಸರ್ಕಾರ ರಕ್ಷಿಸುತ್ತಿದೆ” ಎಂದು ಎಂದು ಹೋರಾಟಗಾರ್ತಿ ಕೆ ಎಸ್‌ ವಿಮಲಾ ಆರೋಪಿಸಿದರು.

ಈ ದಿನ.ಕಾಮ್‌ ಜೊತೆ ಮಾತನಾಡಿದ ಹಿರಿಯ ಪತ್ರಕರ್ತೆ ಎಸ್‌ ಸತ್ಯಾ, ಎಚ್‌ ಡಿ ದೇವೇಗೌಡರ ಕುಟುಂಬದ  ಫ್ಯೂಡಲ್‌ ಮನಸ್ಥಿತಿಯೇ, ರೇವಣ್ಣ ಮತ್ತು ಪ್ರಜ್ವಲ್‌ ಈ ರೀತಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಲು ಕಾರಣ. ಪ್ರಜ್ವಲ್‌ ಸಂಸದ, ತಂದೆ ಶಾಸಕ, ಸಹೋದರ ಎಂಎಲ್‌ಸಿ, ತಾತ ಮಾಜಿ ಪ್ರಧಾನಿ, ಚಿಕ್ಕಪ್ಪ ಶಾಸಜ, ಮಾಜಿ ಮುಖ್ಯಮಂತ್ರಿ. ಇಷ್ಟೆಲ್ಲ ಅಧಿಕಾರ ತಮ್ಮ ಬಳಿ ಇರುವ ಕಾರಣ ಏನೇ ಮಾಡಿದರು ನಡೆಯುತ್ತದೆ ಎಂಬ ದರ್ಪ ಎದ್ದು ಕಾಣುತ್ತದೆ ಎಂದರು. ಈ ಪ್ರಕರಣದಲ್ಲಿ ಹಲವು ಮಹಿಳೆಯರ ವಿಡಿಯೋಗಳು ಸಾರ್ವಜನಿಕರಿಗೆ ಸಿಕ್ಕಿರುವುದು ಗಂಭೀರ ಲೋಪ. ಹದಿಹರೆಯದ ಯುವಕರು ಈ ವಿಡಿಯೊಗಳನ್ನು ನೋಡಿ ತಾವೂ ತಪ್ಪು ಹಾದಿಗೆ ಇಳಿಯುವ ಅಪಾಯವಿದೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ಸಾಮಾಜಿಕ ಹೋರಾಟಗಾರ್ತಿ ಅಕ್ಕೈ ಮಾತನಾಡಿ, ಮಹಿಳೆಯ ದೇಹ ನಿಮ್ಮ ರಾಜಕೀಯದ ರಣರಂಗವಲ್ಲ. ಮಹಿಳೆಯ ಒಪ್ಪಿಗೆ ಇಲ್ಲದೇ ನಡೆಸುವ ಲೈಂಗಿ, ಕ್ರಿಯೆ ಆತ್ಯಾಚಾರಕ್ಕೆ ಸಮ. ಈ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ಹೋರಾಟಗಾರರಾದ ಅಖಿಲಾ ವಿದ್ಯಾಸಂದ್ರ, ಜ್ಯೋತಿ ಅನಂತ ಸುಬ್ಬರಾವ್‌, ಸುರೇಂದ್ರ ರಾವ್‌, ನ್ಯಾಯವಾದಿ ವೆಂಕಟೇಶ್‌, ಕವಿ ದಾದಾಫಿರ್‌, ವಕೀಲೆ ಪೂರ್ಣಾ, ವಿಜ್ಞಾನಿ ಪ್ರಜ್ವಲಾ ಸೇರಿದಂತೆ ಹವಲರು ಉಪಸ್ಥಿತರಿದ್ದರು. ಲಿಂಗತ್ವ ಅಲ್ಪಸಂಖ್ಯಾತರು, ಹಲವು ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಿರು ನಾಟಕವನ್ನು ಪ್ರದರ್ಶಿಸಲಾಯಿತು. ಅತ್ಯಾಚಾರಿಗಳನ್ನು ಬಂಧಿಸಿ ಎಂಬ ಘೋಷಣೆ ಕೂಗಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...