ಸಿಸಿಟಿವಿ ಸ್ಥಗಿತಗೊಳಿಸಿ ಹೈಕೋರ್ಟ್ ನೆಲ ಮಹಡಿಯಲ್ಲಿ ಹುಟ್ಟುಹಬ್ಬ ಆಚರಣೆ: ಇಂಜಿನಿಯರ್​​ಗಳು ಸೇರಿ ಐವರ ಅಮಾನತು

Date:

ಕರ್ನಾಟಕ ಹೈಕೋರ್ಟ್‌ನ ಸರ್ಕಾರಿ ಕಚೇರಿಯೊಂದರಲ್ಲಿ ತಮ್ಮ ಇಲಾಖೆಯ ಸಹೋದ್ಯೋಗಿಗಳು ಮತ್ತು ಸ್ನೇಹಿತರ ಜೊತೆಗೂಡಿ ಹುಟ್ಟುಹಬ್ಬ ಆಚರಿಸಿದ ಆರೋಪದ ಮೇಲೆ ನಾಲ್ವರು ಇಂಜಿನಿಯರ್​ಗಳು ಹಾಗೂ ಓರ್ವ ಪ್ರಥಮ ದರ್ಜೆ ಸಹಾಯಕರೊಬ್ಬರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

- Advertisement -

ಸಹಾಯಕ ಇಂಜಿನಿಯರ್​​ಗಳಾದ ಲಾವಣ್ಯ, ಮೀನಾ ಎ.ಟಿ., ನವೀನ್, ಅಮೀನ್ ಎಸ್.ಆನದಿನ್ನಿ ಮತ್ತು ಪ್ರಥಮ ದರ್ಜೆ ಸಹಾಯಕರಾದ ಜಿ.ಹೆಚ್.ಚಿಕ್ಕಪ್ಪೇಗೌಡ ಎಂಬುವರು ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ...

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ ಜಾಗತಿಕವಾಗಿ ತಲೆ ಎತ್ತುತ್ತಿರುವ ಫ್ಯಾಸಿಸಂ ಪ್ರವೃತ್ತಿಗಳಿಗೆ ಪರ್ಯಾಯ ಆರ್ಥಿಕ ಮಾರ್ಗವನ್ನು ಡಾ. ಇಸಬೆಲ್ಲಾ ವೆಬರ್ ಇಲ್ಲಿ ಚರ್ಚಿಸಿದ್ದಾರೆ. ಜರ್ಮನಿಯ ಪ್ರಖ್ಯಾತ ಅರ್ಥಶಾಸ್ತ್ರಜ್ಞೆ...

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಹೈಕೋರ್ಟ್ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯ ವಿಶೇಷ ಕಟ್ಟಡದ ಉಪ ವಿಭಾಗದ ಕಚೇರಿಯಲ್ಲಿ ಕಳೆದ ತಿಂಗಳು ಮಾರ್ಚ್ 10ರಂದು ನಗರಾಭಿವೃದ್ಧಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿರುವ ಮೀನಾ ಎ.ಟಿ. ಅವರ ಹುಟ್ಟುಹಬ್ಬ ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರದ ಬೇರೆ ಕಚೇರಿಗಳಲ್ಲಿ ಸಹಾಯಕ ಇಂಜಿನಿಯರ್​​ಗಳಾಗಿ ಕಾರ್ಯನಿರ್ವಹಿಸುತ್ತಿದ್ದ ನವೀನ್, ಅಮೀನ್ ಎಸ್. ಆನದಿನ್ನಿ ಮತ್ತು ಇತರರು ಪಾಲ್ಗೊಂಡಿದ್ದರು.

ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಒಳಪಡುವ ಹೈಕೋರ್ಟ್ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆ ಕಟ್ಟಡದಲ್ಲಿ ಮೇಲಧಿಕಾರಿಗಳ ಅನುಮತಿ ಪಡೆಯದೇ ಹುಟ್ಟುಹಬ್ಬ ಆಚರಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು, ಈ ಬಗ್ಗೆ ತನಿಖೆ ನಡೆಸಿ ವರದಿ ಪಡೆದಿದ್ದರು. ಸರ್ಕಾರಿ ಕಚೇರಿಯಲ್ಲಿ ನಿರ್ದಿಷ್ಟಪಡಿಸಿದ ಗಣ್ಯ ವ್ಯಕ್ತಿಗಳ ಜಯಂತಿ ಮತ್ತು ಕಾರ್ಯಕ್ರಮ ನಡೆಸಲು ಮಾತ್ರ ಅವಕಾಶವಿದ್ದು, ಇತರರ ಜಯಂತಿ ಆಚರಣೆಗೆ ಅವಕಾಶ ಇರುವುದಿಲ್ಲ ಆದೇಶದಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ಯಾಚಾರ ಯತ್ನ ಮಾಮೂಲು ಸಂಗತಿಯೇ ಗೃಹಸಚಿವರೇ?

ಹುಟ್ಟುಹಬ್ಬ ಆಚರಣೆ ವೇಳೆ ಹೈಕೋರ್ಟ್​​ನಲ್ಲಿ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾವನ್ನು ಸ್ವಿಚ್ ಆಫ್ ಮಾಡಿರುವುದು ಸಹ ಗಂಭೀರ ಸ್ವರೂಪದ ಕರ್ತವ್ಯಲೋಪವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಮೇಲಧಿಕಾರಿಗಳ ಅನುಮತಿ ಪಡೆಯದೇ ಸಿಸಿ ಕ್ಯಾಮರಾ ಬಂದ್ ಮಾಡಿದ್ದು ಮತ್ತು ನಿಯಮಬಾಹಿರವಾಗಿ ಹುಟ್ಟುಹಬ್ಬ ಆಚರಿಸಿರುವುದು ಕರ್ನಾಟಕ ರಾಜ್ಯ ನಾಗರಿಕ (ನಡತೆ) ನಿಯಮಗಳು-2021ರ ನಿಯಮ 3(1)(1ರಿಂದ4) ಉಲ್ಲಂಘನೆಯಾಗಿದೆ ಎಂದು ತಿಳಿಸಿ ಈ ಎಲ್ಲ ಇಂಜಿನಿಯರ್​ಗಳು ಹಾಗೂ ಪ್ರಥಮ ದರ್ಜೆ ಸಹಾಯಕರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಸರ್ಕಾರದ ಆದೇಶದಂತೆ ಶಿವಮೊಗ್ಗದ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ (ಸಂಪರ್ಕ ಮತ್ತು ಕೇಂದ್ರ) ಅವರು ಸರ್ಕಾರಿ ಕಚೇರಿಯಲ್ಲಿ ಹುಟ್ಟುಹಬ್ಬದ ಆಚರಣೆ ಪ್ರಕರಣದ ಬಗ್ಗೆ ತನಿಖೆ ನಡೆಸಿ, ಶಿಸ್ತುಕ್ರಮ ಜರುಗಿಸುವಂತೆ ಶಿಫಾರಸು ಮಾಡಿದ್ದರು. ಹುಟ್ಟುಹಬ್ಬದ ಸಂದರ್ಭದಲ್ಲಿ ಹೈಕೋರ್ಟ್​​ನ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾ ಸ್ವಿಚ್ ಆಫ್ ಮಾಡಿದ್ದನ್ನು ಗಂಭೀರ ಸ್ವರೂಪದ ಕರ್ತವ್ಯಲೋಪವೆಂದು ಪರಿಗಣಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆಟ್ರೋಲ್‌ನಲ್ಲಿ ಶೇ 31.2ರವರೆಗೆ ಎಥೆನಾಲ್ ಮಿಶ್ರಣ: ಕೇಂದ್ರಕ್ಕೆ ರಾಜ್ಯದ ಪತ್ರ

ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಯೋಜನೆಯ ಅನುಷ್ಠಾನದ ಬಗ್ಗೆ...

ಬೆಂಗಳೂರು ಟೆಕ್ ಸಮಿಟ್-2026; ಸ್ಟಾರ್ಟ್‌ಅಪ್‌ಗಳಿಗೆ ಸರ್ಕಾರವೇ ಮೊದಲ ಗ್ರಾಹಕ: ಸಚಿವ ಪ್ರಿಯಾಂಕ್ ಖರ್ಗೆ

ನವೋದ್ಯಮಗಳು ರೂಪಿಸುವ ನವೀನ ಆವಿಷ್ಕಾರಗಳನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳುವ ಮೂಲಕ, ದೇಶದಲ್ಲೇ ಮೊದಲ...

ಮೋದಿ ಸರ್ಕಾರದಿಂದ ಅನುದಾನ ಅನ್ಯಾಯ: ಹಕ್ಕಿಗಾಗಿ ಮತ್ತೆ ಸುಪ್ರೀಂ ಅಂಗಳಕ್ಕೆ ಕರ್ನಾಟಕ!

ರಾಜ್ಯದ ಆರ್ಥಿಕ ಹಕ್ಕುಗಳನ್ನು ಕೇಂದ್ರ ಸರ್ಕಾರವು ಕಸಿದುಕೊಳ್ಳುವ ವಿಚಾರದಲ್ಲಿ ಈ ಹಿಂದೆ...