ರೈಲ್ವೆ | 5,696 ಸಹಾಯಕ ಲೋಕೋ ಪೈಲಟ್​​ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Date:

Advertisements

ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ನೇಮಕಾತಿ ಮಂಡಳಿ ಇದೀಗ ದೇಶದ ಹಲವು ರೈಲ್ವೆ ವಲಯಗಳಲ್ಲಿ ಬರೋಬ್ಬರಿ 5696 ಸಹಾಯಕ ಲೋಕೋ ಪೈಲಟ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಪುರುಷರು, ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ 10ನೇ ತರಗತಿ ಜತೆಗೆ ಐಟಿಐ ಪದವಿ ಪಡೆದಿರಬೇಕು ಅಥವಾ 10ನೇ ತರಗತಿ ಜತೆಗೆ ಡಿಪ್ಲೊಮಾ ಪದವಿ/10+2 ಅನ್ನು ಭೌತಶಾಸ್ತ್ರ/ಗಣಿತದೊಂದಿಗೆ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಜನವರಿ 20ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಫೆಬ್ರುವರಿ 19 ಕಡೆಯ ದಿನವಾಗಿದೆ.

ಕನಿಷ್ಠ 18ರಿಂದ ಗರಿಷ್ಠ 30 ವರ್ಷದ ವಯೋಮಿತಿವರೆಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಎಸ್‌.ಸಿ/ಎಸ್‌.ಟಿ ಅವರಿಗೆ 5ವರ್ಷ ಮತ್ತು ಒಬಿಸಿ ಅವರಿಗೆ 3 ವರ್ಷ ವಯೋಮಾನದಲ್ಲಿ ಸಡಿಲಿಕೆ ಇದೆ. ಜತೆಗೆ ನಿವೃತ್ತ ಸೈನಿಕರಿಗೂ ಸಡಿಲಿಕೆ ಇದೆ. ಕಂಪ್ಯೂಟರ್​ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ದೈಹಿಕ ಅರ್ಹತೆ ಜತೆಗೆ ವೈದ್ಯಕೀಯ ಪರೀಕ್ಷೆ ಇರಲಿದೆ. ಪ್ರಾರಂಭಿಕ ವೇತನ ಮಾಸಿಕ ₹19,900 ಇರಲಿದೆ.

Advertisements

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ₹250 ಶುಲ್ಕ ನಿಗದಿಸಲಾಗಿದೆ. ಇತರೆ ಅಭ್ಯರ್ಥಿಗಳಿಗೆ ₹500 ಶುಲ್ಕ ಪಾವತಿಸಬೇಕಿದೆ.  ಈ ನೇಮಕಾತಿಯು 21 ರೈಲ್ವೆನೇಮಕಾತಿ ಮಂಡಳಿಗಳಿಂದ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 9 ತಾಲ್ಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಅಭ್ಯರ್ಥಿಗಳು ಆರ್​ಆರ್​ಬಿಯ ಸಿಇಎನ್​ ನಂ ಆಧಾರಿತವಾಗಿ ಆ ರಾಜ್ಯಗಳಿಗೆ ನೀಡಿರುವ ಅಧಿಕೃತ ವೆಬ್​ಸೈಟ್​ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಅದರನುಸಾರ ಕರ್ನಾಟಕದ ಅಭ್ಯರ್ಥಿಗಳು www.rrbbnc.gov.in ಇಲ್ಲಿ ಅರ್ಜಿ ಸಲ್ಲಿಸಬೇಕಿದೆ. ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗೆ indianrailways.gov.in ಇಲ್ಲಿಗೆ ಭೇಟಿ ನೀಡಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X