ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯಕ್ಕೆ ಮಳೆ ಆತಂಕ; ರಾಜ್ಯದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Date:

ಐಪಿಎಲ್‌ 2025ರ ಟೂರ್ನಿ ನಡೆಯುತ್ತಿದೆ. ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ ನಡುವೆ ಬುಧವಾರ (ಏಪ್ರಿಲ್ 2) ಸಂಜೆ ಬೆಂಗಳೂರಿನಲ್ಲಿ ಪಂದ್ಯ ನಡೆಯಲಿದೆ. ಪಂದ್ಯಕ್ಕೆ ಮಳೆ ಅಡ್ಡಿ ಮಾಡಬಹುದು ಎಂಬ ಆತಂಕ ಅಭಿಮಾನಿಗಳಲ್ಲಿ ಕಾಡುತ್ತಿದೆ. ಹವಾಮಾನ ಇಲಾಖೆ ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

- Advertisement -

ಬುಧವಾರ ಬೆಳಗ್ಗೆಯೇ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ರಾತ್ರಿ ವೇಳೆಗೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು, ಬೆಂಗಳೂರಿನ ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.

ಈ ವರದಿ ಓದಿದ್ದೀರಾ?: ನಿತೀಶ್ ಕುಮಾರ್ ವಕ್ಫ್ ಮಸೂದೆ ವಿರೋಧಿಸಬಹುದೆಂಬ ಭರವಸೆ ಈಗಲೂ ಇದೆ: ಕಾಂಗ್ರೆಸ್ ನಾಯಕ ತಾರಿಕ್

ಮುಂಗಾರು ಪೂರ್ವ ಮಳೆಯು ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗುವಂತೆ ಮಾಡಿದ್ದರೆ, ಇತ್ತ, ಆರ್‌ಸಿಬಿ ಅಭಿಮಾನಿಗಳು ಆತಂಕದಲ್ಲಿದ್ದಾರೆ. ಈಗಾಗಲೇ ಎರಡು ಪಂದ್ಯಗಳನ್ನು ಆಡಿರುವ ಆರ್‌ಸಿಬಿ ತಂಡ, ಎರಡೂ ಪಂದ್ಯಗಳನ್ನು ಗೆದ್ದಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆರ್‌ಸಿಬಿಯ ಆರಂಭಿಕ ಗೆಲುವುಗಳು ಅಭಿಮಾನಿಗಳಲ್ಲಿ ಈ ಬಾರಿ ಆರ್‌ಸಿಬಿ ಕಪ್‌ ಗೆಲ್ಲುತ್ತದೆ ಎಂಬ ವಿಶ್ವಾಸ ಮೂಡಿಸಿದೆ.

ಆದರೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಮಳೆ ಅಡ್ಡಿಯಾಗಬಹುದು ಎಂದು ಹೇಳಲಾಗುತ್ತಿದೆ. ಮಳೆಯಿಂದಾಗಿ ಪಂದ್ಯ ರದ್ದಾದರೆ ಅಥವಾ ಆರಂಭವಾಗಿ ಅರ್ಧಕ್ಕೆ ಸ್ಥಗಿತಗೊಂಡರೆ, ಆರ್‌ಸಿಬಿಗೆ ಅಂಕ ಗಳಿಕೆಯಲ್ಲಿ ನಷ್ಟವಾಗಹುದು ಎಂಬ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತ್ರ ಮಳೆಯಾಗದಿರಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...