ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ: ಹವಾಮಾನ ಇಲಾಖೆ

Date:

  • ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರು ಮಳೆ ಸಾಧ್ಯತೆ
  • ಕರಾವಳಿ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-45 ಕಿ.ಮೀ

ಮುಂಗಾರು ಮಳೆ ಇದೀಗ ಚುರುಕಾಗಿದ್ದು, ರಾಜ್ಯದ ಹಲವೆಡೆ ಜೋರು ಮಳೆಯಾಗುತ್ತಿದೆ. ಬುಧವಾರದಿಂದ ಇನ್ನೂ ಮೂರು ದಿನಗಳ ಕಾಲ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಜುಲೈ 19ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ‘ಆರೆಂಜ್‌ ಅಲರ್ಟ್’ ನೀಡಿದೆ. ಬೀದರ್, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜುಲೈ 20 ಮತ್ತು 21ರಂದು ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದ್ದು, ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂ. ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ, ಹಾವೇರಿ, ಧಾರವಾಡ, ರಾಯಚೂರು, ಯಾದಗಿರಿ, ಕೊಪ್ಪಳದಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ. ಕರಾವಳಿ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-45 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ಹಾಗಾಗಿ, ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಎಲ್ಲೆಲ್ಲಿ ಮಳೆಯಾಗಿದೆ?

ಮಂಗಳವಾರ ಬೆಳಗಾವಿಯ ಕಣಬರ್ಗಿ, ಚಿಕ್ಕಮಗಳೂರಿನ ಮೂಡಿಗೆರೆ, ಹಾವೇರಿಯ ಹನುಮಾನ್‌ ಮಟ್ಟಿ, ಕೊಡಗಿನ ಗೋಣಿಕೊಪ್ಪ, ಬಾಗಲಕೋಟೆ ಮತ್ತು ಯಾದಗಿರಿ ಸೇರಿ ಹಲವು ಭಾಗಗಳಲ್ಲಿ ಜೋರು ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ನಲ್ಲಿ 12 ಸೆಂ.ಮೀ ಮಳೆಯಾಗಿದೆ.

ಮಲಪ್ರಭೆಯಲ್ಲಿ ಮುಳುಗಿದ ಹೆಬ್ಬಾನಟ್ಟಿ ಮಾರುತಿ ಮಂದಿರ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಜಿಲ್ಲೆಯ ಖಾನಾಪುರ ತಾಲೂಕಿನ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿ ಉಕ್ಕಿ ಹರಿಯುತ್ತಿರುವುದರಿಂದ ಹೆಬ್ಬಾನಟ್ಟಿ ಗ್ರಾಮದಲ್ಲಿರುವ ಮಾರುತಿ ಮಂದಿರ ಮತ್ತು ರಾಮಮಂದಿರಗಳು ಮುಕ್ಕಾಲು ಭಾಗದಷ್ಟು ಮುಳುಗಡೆಯಾಗಿವೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆ, ಕಳಸ, ಕೊಪ್ಪ, ಎನ್‌.ಆರ್‌.ಪುರ ತಾಲೂಕಿನಲ್ಲಿ ಬುಧವಾರ ಮುಂಜಾನೆಯಿಂದ ಜೋರು ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್​ನಲ್ಲಿ ವಾಹನಗಳ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.

ಗದಗ-ಬೆಟಗೇರಿ ಜಿಲ್ಲೆಯಲ್ಲಿ‌ ಮುಂಜಾನೆಯಿಂದಲೇ ಬಿಟ್ಟು ಬಿಡದೇ ಜಿಟಿ ಜಿಟಿ ಮಳೆ ಶರುವಾಗಿದೆ. ಮಳೆಗೆ ಜನರು ಮನೆಯಿಂದ ಹೊರ ಬರುತ್ತಿಲ್ಲ. ನಗರಗಳಲ್ಲಿ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದೆ.

ಈ ಸುದ್ದಿ ಓದಿದ್ದೀರಾ? ಈಜಿಪುರ ಮೇಲ್ಸೇತುವೆ ನಿರ್ಮಾಣ ನಿಧಾನಗತಿ ಅಣಕಿಸಿ ಟ್ವೀಟ್: ಕಂಬಗಳ ಮೇಲೆ ಕಾಣಿಸಿಕೊಂಡ ವಿದ್ಯುತ್ ದೀಪ!

ಮಳೆ ಕೊರತೆ ಎಲ್ಲೆಲ್ಲಿ?

ಮುಂಗಾರು ರಾಜ್ಯಕ್ಕೆ ವಾಡಿಕೆಯಂತೆ ಆಗಮನವಾಗದಿದ್ದರೂ ಜುಲೈ ತಿಂಗಳಿನಲ್ಲಿ ಮುಂಗಾರು ಚುರುಕಾಗಿದೆ. ರಾಜ್ಯದ ಕೆಲವೆಡೆ ಜೋರು ಮಳೆ ಸುರಿಯುತ್ತಿದ್ದರೆ, ಇನ್ನೂ ಕೆಲವೆಡೆ ಮಳೆಯ ಕೊರತೆ ಉಂಟಾಗಿದೆ.

ರಾಜ್ಯದ ಒಟ್ಟು 21 ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿದೆ. ರಾಜ್ಯಾದ್ಯಂತ ವಾಡಿಕೆಯಂತೆ ಜೂನ್ 1 ರಿಂದ ಜುಲೈ 18ರವರೆಗೆ 356 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 234 ಮಳೆಯಾಗಿ ಶೇ. 34ರಷ್ಟು ಮಳೆ ಕೊರತೆ ಉಂಟಾಗಿದೆ.

ದಕ್ಷಿಣ ಒಳನಾಡಿನಲ್ಲಿ ಶೇ.13, ಉತ್ತರ ಒಳನಾಡಿನಲ್ಲಿ ಶೇ.36, ಮಲೆನಾಡಲ್ಲಿ ಶೇ.54 ಹಾಗೂ ಕರಾವಳಿಯಲ್ಲಿ ಶೇ.25 ಮಳೆ ಅಭಾವ ಉಂಟಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...