ಬೆಂಗಳೂರಿಗೆ ಮಳೆ ಸಮಸ್ಯೆಗಳು ಹೊಸದಲ್ಲ, ಶಾಶ್ವತ ಪರಿಹಾರಕ್ಕೆ ಶ್ರಮಿಸುವೆ:‌ ಡಿಸಿಎಂ ಡಿ ಕೆ ಶಿವಕುಮಾರ್

Date:

ಬೆಂಗಳೂರಿನ ಬಹುತೇಕ ಕಡೆ ಭಾನುವಾರ ತಡ ರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಂಗಳೂರಿನಲ್ಲಿನ ಮಳೆ ಆರ್ಭಟದ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, “ಬೆಂಗಳೂರಿನಲ್ಲಿ ಮಳೆಯಿಂದ ಎಲ್ಲೆಲ್ಲಿ ಏನಾಗಿದೆ ಎಂದು ನಮ್ಮ ಅಧಿಕಾರಿಗಳ ತಂಡ ಮಾಹಿತಿ ಕಲೆಹಾಕುತ್ತಿದೆ. ನಗರದಲ್ಲಿ ಮಳೆಯ ಪರಿಸ್ಥಿತಿಯನ್ನು ನಿಭಾಯಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಉಂಟಾದ ಹಾನಿಯಿಂದ ತೀವ್ರ ಕಳವಳಗೊಂಡಿದ್ದೇನೆ. ನಾನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ನಾನು ಬೆಂಗಳೂರಿನ ಸಮಸ್ಯೆಗಳ ಪರಿಹಾರಕ್ಕೆ ಬದ್ಧನಾಗಿರುತ್ತೇನೆ. ಸವಾಲುಗಳನ್ನು ಎದುರಿಸಲು ಮತ್ತು ಪರಿಹಾರವನ್ನು ಖಚಿತಪಡಿಸಿಕೊಳ್ಳಲು 24/7 ಶ್ರಮಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.

“ಬಿಬಿಎಂಪಿ ವಾರ್ ರೂಮ್ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ವಾಸ್ತವಿಕವಾಗಿ ಮಾಹಿತಿ ಪಡೆಯುತ್ತೇನೆ. ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳು ಹೊಸದಲ್ಲ. ಹಿಂದಿನ ಸರ್ಕಾರಗಳು ಅವುಗಳನ್ನು ವರ್ಷಗಳಿಂದ ನಿರ್ಲಕ್ಷಿಸಲಾಗಿದೆ. ಈಗ ಒಂದೇ ವ್ಯತ್ಯಾಸವೆಂದರೆ – ನಾವು ಅವುಗಳನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

“ತಾತ್ಕಾಲಿಕ ಪರಿಹಾರಗಳೊಂದಿಗೆ ಅಲ್ಲ, ಆದರೆ ದೀರ್ಘಕಾಲೀನ, ಸುಸ್ಥಿರ ಪರಿಹಾರಗಳೊಂದಿಗೆ ಎಂಬುದು ಸ್ಪಷ್ಟ ಪಡಿಸುತ್ತೇನೆ. ನಾನು ಸಹ ಬೆಂಗಳೂರಿಗ. ನಿಮ್ಮ ಕಳವಳಗಳನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ನಿಮ್ಮ ಹತಾಶೆಯನ್ನು ಹಂಚಿಕೊಳ್ಳುತ್ತೇನೆ ಮತ್ತು ಅವುಗಳನ್ನು ಪರಿಹರಿಸುವತ್ತ ಗಮನ ಕೊಡುವೆ” ಡಿ ಕೆ ಶಿವಕುಮಾರ್‌ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...