ಬಾಲಕಿ ಮೇಲೆ ಅತ್ಯಾಚಾರ | ಶಾಲೆ ಮುಚ್ಚುವಂತೆ ಶಿಫಾರಸು ಮಾಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

Date:

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ 10 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲನೇ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯನ್ನು ಮುಚ್ಚುವಂತೆ ಶಿಕ್ಷಣ ಇಲಾಖೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಪಿಸಿಆರ್) ಶಿಫಾರಸು ಮಾಡಿದೆ.

ವರ್ತೂರು ಠಾಣೆಯ ಪೊಲೀಸರು ಶಾಲಾ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ (65) ಅವರನ್ನು ಬಂಧಿಸಿದ್ದಾರೆ. ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾರೆ.  

ನಗರದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ 10 ವರ್ಷದ ಬಾಲಕಿಯನ್ನು ಶಾಲಾ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ (65) ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ ಹಾಗೂ ಸದಸ್ಯ ಶಶಿಧರ ಕೋಸಂಬಿ ನೇತೃತ್ವದ ತಂಡ ಶಾಲೆಗೆ ಹಾಗೂ ಬಾಲಕಿ ಮನೆಗೆ ಭೇಟಿ ನೀಡಿದರು. ಘಟನೆಯ ಬಗ್ಗೆ ಈ ತಂಡಕ್ಕೆ ವರ್ತೂರು ಠಾಣೆಯ ಪಿಎಸ್‌ಐ ಶ್ರೀನಿವಾಸ್ ಶಿರೂರ್ ಮಾಹಿತಿ ನೀಡಿದರು. ಈ ಬಗ್ಗೆ ತಂಡದ ಸದಸ್ಯರು ಮಾಹಿತಿ ದಾಖಲಿಸಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ, ಬೆಂಗಳೂರು ಪೂರ್ವ ತಾಲ್ಲೂಕಿನ ದಕ್ಷಿಣ ವಲಯ–4ರ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್. ರಾಮಮೂರ್ತಿ, ಮಕ್ಕಳ ಕಲ್ಯಾಣ ಅಧಿಕಾರಿ ಶಿವಕುಮಾರ್ ಜೊತೆಗಿದ್ದರು.

ಈ ಸುದ್ದಿ ಓದಿದ್ದೀರಾ? ಬಿಪಿಎಲ್​ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಬೇಕೆ? ಸರ್ಕಾರದ ಮಾನದಂಡಗಳೇನು? ಇಲ್ಲಿವೆ ನೋಡಿ…

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ, “ಕೃತ್ಯ ನಡೆದಿರುವ ಶಾಲೆ ಮುಚ್ಚುವಂತೆ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ. ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

“ಏಕಾಏಕಿ ಶಾಲೆ ಮುಚ್ಚುವುದರಿಂದ ಇನ್ನುಳಿದ ಮಕ್ಕಳಿಗೆ ಸಮಸ್ಯೆಯಾಗುತ್ತದೆ. ಹಾಗಾಗಿ, ಶಿಕ್ಷಣ ಇಲಾಖೆಯ ಸಮ್ಮುಖದಲ್ಲಿ ಸೋಮವಾರ ಪೋಷಕರ ಸಭೆ ನಡೆಸಲಾಗುತ್ತದೆ. ಈ ಶಾಲೆಯಲ್ಲಿ 1 ರಿಂದ 10 ನೇ ತರಗತಿಯವರೆಗೆ ಒಟ್ಟು 140 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಕ್ಕಳನ್ನು ಬೇರೆ ಶಾಲೆಗಳಿಗೆ ಸೇರಿಸಲು ಎಲ್ಲ ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು.

“ಆರೋಪಿ ಪ್ರಾಶುಂಪಾಲನ ಮನೆ ಶಾಲಾ ಕಟ್ಟಡದ ಮೇಲೆ ಇದೆ. ಶಾಲೆಯ ಮೇಲೆಯೇ ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಇದೆ ಎಂಬ ಬಗ್ಗೆ ಶಿಕ್ಷಣ ಇಲಾಖೆಗೆ ಪ್ರಶ್ನೆ ಮಾಡಲಾಗಿದೆ. ಶಾಲೆಯನ್ನು ತ್ವರಿತವಾಗಿ ಮುಚ್ಚಲು ಕ್ರಮ ಕೈಗೊಳ್ಳಿ” ಎಂದು ಶಿಫಾರಸು ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಾಸೀರ್ ಸಾಬ್ ಜಿಂದಾಬಾದ್’ ಘೋಷಣೆ ತಿರುಚಿದ ಬಿಜೆಪಿ; ಆದರೂ, ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್‌

ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ನ ಅಜಯ್‌ ಮಾಕನ್‌, ಸೈಯದ್‌ ನಾಸಿರ್‌ ಹುಸೇನ್‌,...

ಬೆಂಗಳೂರು | ಮಹಿಳೆಗೆ ಬೆದರಿಸಿ ಹಣ ಸುಲಿಗೆ; ನಾಲ್ವರು ಪೊಲೀಸರ ಅಮಾನತು

ಇತ್ತೀಚಿಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವುದಾಗಿ ಬೆದರಿಸಿ ಮಹಿಳೆಯೊಬ್ಬರಿಂದ ₹8,000...

ಬೆಂಗಳೂರು | ಚಿನ್ನಾಭರಣಕ್ಕಾಗಿ ಮಹಿಳೆಯ ಬರ್ಬರ ಕೊಲೆ; ಆರೋಪಿಯ ಬಂಧನ

ಚಿನ್ನಾಭರಣಕ್ಕಾಗಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್...

ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ; ಪ್ರಕರಣ ಭೇಧಿಸಿದ ರೈಲ್ವೆ ಪೊಲೀಸರು

ಯಲಹಂಕ ರೈಲ್ವೆ ಟ್ರ್ಯಾಕ್ ಬಳಿ ಸುಟ್ಟ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿತ್ತು. ಇದೀಗ...