ಬಾಲಕಿ ಮೇಲೆ ಅತ್ಯಾಚಾರ | ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಶಾಲೆ ಬಂದ್

Date:

ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ಬಾಲಕಿ ಮೇಲೆ ಪ್ರಾಂಶುಪಾಲ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶದ ಮೇರೆಗೆ ಶಾಲೆ ಬಂದ್ ಮಾಡಲಾಗಿದೆ.

- Advertisement -

ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ ​ಕೋರಮಂಗಲದಲ್ಲಿ ಶಾಲೆ ಕಟ್ಟಲು ಅನುಮತಿ ಪಡೆದಿದ್ದನು. ಆದರೆ, ಅನಧಿಕೃತವಾಗಿ ಬೆಂಗಳೂರಿನ ವರ್ತೂರು ಸಮೀಪ ಶಾಲೆ ನಿರ್ಮಾಣ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅನಧಿಕೃತವಾಗಿ ಶಾಲೆ ನಿರ್ಮಾಣ ಮಾಡಿದ ಹಿನ್ನೆಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆ ಬಂದ್ ಮಾಡುವಂತೆ ಆದೇಶಿಸಿದ್ದಾರೆ. ಇದರಿಂದ 140ಕ್ಕೂ ಹೆಚ್ಚಿನ ಮಕ್ಕಳ ಮುಂದಿನ ಶಿಕ್ಷಣದ ಭವಿಷ್ಯ ಅತಂತ್ರವಾಗಿದೆ.

“ಮಕ್ಕಳ ಮುಂದಿನ ಶಿಕ್ಷಣದ ಭವಿಷ್ಯಕ್ಕೆ ಯಾವುದೇ ತೊಂದರೆ ಉಂಟಾಗಬಾರದು. ಹಾಗಾಗಿ, ಪಾಲಕರು ಹೇಳಿದ ಶಾಲೆಯಲ್ಲಿ ಸರ್ಕಾರದಿಂದ ದರ ನಿಗದಿ ಮಾಡಿ ಸೀಟ್‌ ವ್ಯವಸ್ಥೆ ಮಾಡಲಾಗುವುದು” ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರಾಳ ಶನಿವಾರ | ರಾಜ್ಯದಲ್ಲಿ ಅಪಘಾತಗಳಿಂದ 37 ಸಾವು ; ಎಡಿಜಿಪಿ ಟ್ವೀಟ್

ಏನಿದು ಪ್ರಕರಣ?

ನಗರದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ 10 ವರ್ಷದ ಬಾಲಕಿಯನ್ನು ಶಾಲಾ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ (65) ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು.

ಬೆಂಗಳೂರಿನ ವರ್ತೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ನರ ದೌರ್ಬಲ್ಯ ಖಾಯಿಲೆಯಿಂದ ಬಳಲುತ್ತಿದ್ದಳು. ಆಗಸ್ಟ್ 3ರ ಬೆಳಗ್ಗೆ 8.30ಕ್ಕೆ ಬಾಲಕಿ ಶಾಲೆಗೆ ತೆರಳಿದ್ದಾಳೆ. 11.30ಕ್ಕೆ ಶಾಲೆಯಿಂದ ತನ್ನ ಕೊಠಡಿಗೆ ಕರೆದೊಯ್ದ ಪ್ರಾಂಶುಪಾಲ‌‌ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಐಸ್‌ಕ್ರೀಂ ಕೊಟ್ಟು ಕಳುಹಿಸಿದ್ದನು.

ಮಧ್ಯಾಹ್ನ 3.30ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದ ಬಾಲಕಿ, ತಾಯಿಗೆ ಹೊಟ್ಟೆ ನೋವು ಎಂದು ಹೇಳಿದ್ದಳು. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಇದೇ ವಿಚಾರವಾಗಿ ಮಗುವನ್ನು ತಾಯಿ ಕೇಳಿದಾಗ ನಡೆದ ಘಟನೆ ಬಗ್ಗೆ ವಿವರಿಸಿದ್ದಾಳೆ.

ಈ ಘಟನೆ ಸಂಬಂಧ ಬಾಲಕಿ ತಾಯಿ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...