ಗಣರಾಜ್ಯೋತ್ಸವ ದಿನ | ಮಾಣಿಕ್ ಷಾ ಪರೇಡ್ ಮೈದಾನದ ಸುತ್ತ-ಮುತ್ತ ಪೊಲೀಸ್ ಬಂದೋಬಸ್ತ್

Date:

“ಜನವರಿ 26ರಂದು ರಾಜ್ಯ ರಾಜಧಾನಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ, ಕಳೆದ 15 ದಿನಗಳಿಂದ ಮೈದಾನದ ಭದ್ರತೆಯ ಸಲುವಾಗಿ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಜತೆಗೆ, ನಗರದ ಎಲ್ಲ ಹೋಟೆಲ್, ಲಾಡ್ಜ್‌ ಗಳು, ತಂಗುದಾಣಗಳು ಹಾಗೂ ಇನ್ನಿತರೆ ಸ್ಥಳಗಳಲ್ಲಿ ಅನುಮಾನಾಸ್ಪದವಾಗಿ ವಾಸ್ತವ್ಯ ಹೂಡುವವರ ಮೇಲೆ ನಿಗಾವಹಿಸಲಾಗಿದೆ” ಎಂದು ಬೆಂಗಳೂರು ಪೊಲೀಸ್ ಇಲಾಖೆ ತಿಳಿಸಿದೆ.

“ಕಾರ್ಯಕ್ರಮದ ಆಚರಣೆಯು ಸುಲಲಿತವಾಗಿ ನಡೆಯಲು ಹಾಗೂ ಮೈದಾನದ ಭದ್ರತೆಯ ಸಲುವಾಗಿ ಮುಂಜಾಗ್ರತಾ ಕ್ರಮಗಳಾಗಿ ಕಳೆದ 15 ದಿನಗಳಿಂದ ಮೈದಾನಕ್ಕೆ ಪೊಲೀಸರನ್ನು ಕಣ್ಣಾವಲು ಕರ್ತವ್ಯಕ್ಕೆ ನಿಯೋಜಿಸಲಾಗಿದೆ” ಎಂದು ತಿಳಿಸಿದೆ.

“ಜನವರಿ 26ರಂದು ನಡೆಯುವ ಧ್ವಜಾರೋಹಣ, ಕವಾಯತು ಹಾಗೂ ಸಾಂಸ್ಕೃತಿಕ ಸಮಾರಂಭದ ಉದ್ಘಾಟನೆಯನ್ನು ಕರ್ನಾಟಕದ ರಾಜ್ಯಪಾಲರು ನೆರವೇರಿಸಲಿದ್ದು, ಈ ಸಂಬಂಧ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲ ವಿಭಾಗಗಳಿಂದ 9 ಡಿಸಿಪಿ, 16 ಎಸಿಪಿ, 46 ಪಿಐ, 109 ಪಿಎಸ್‌ಐ, 77 ಎಎಸ್‌ಐ, 594 ಹೆಚ್‌ಸಿ/ಪಿಸಿ, 87 ಮಹಿಳಾ ಸಿಬ್ಬಂದಿಗಳೊಂದಿಗೆ 184 ಸಾದಾ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ 56 ಜನ ಕ್ಯಾಮರಾ ಸಿಬ್ಬಂದಿ ಬಂದೋಬಸ್ತ್‌ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ” ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂಚಾರ ನಿರ್ವಹಣೆಗಾಗಿ 4 ಡಿಸಿಪಿ, 6 ಎಸಿಪಿ, 21 ಪಿಐ, 33 ಪಿಎಸ್‌ಐ, 97 ಎಎಸ್‌ಐ, 414 ಹೆಚ್‌ಸಿ/ಪಿಸಿ ಒಟ್ಟಾರೆ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದ ಪ್ರಯುಕ್ತ ಒಟ್ಟು 575 ಅಧಿಕಾರಿ ಹಾಗೂ ಸಿಬ್ಬಂದಿ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಗಣರಾಜ್ಯೋತ್ಸವ ದಿನ | ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ: ಎಲ್ಲೆಲ್ಲಿ? ಇಲ್ಲಿದೆ ನೋಡಿ

“ಇದಲ್ಲದೇ, ಮೈದಾನದ ಬಂದೋಬಸ್ತ್ ಕರ್ತವ್ಯಕ್ಕೆ 10-ಕೆ.ಎಸ್.ಆರ್.ಪಿ/ಸಿ.ಎ.ಆರ್. ತುಕಡಿಗಳನ್ನು, 2-ಅಗ್ನಿಶಾಮಕ ವಾಹನಗಳು, 2-ಆಂಬುಲೆನ್ಸ್ ವಾಹನಗಳು, 4 ಖಾಲಿ ವಾಹನಗಳು, 1 ಕ್ಷಿಪ್ರ ಕಾರ್ಯಾಚರಣೆ ಪಡೆ 1 ಡಿ-ಸ್ವಾಟ್, 1 ಆರ್‌ಐವಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಗರುಡ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗಿದೆ. ಮೈದಾನದ ಸುತ್ತ ಎಲ್ಲ ಘಟನೆಗಳನ್ನು ಸೂಕ್ಷ್ಮವಾಗಿ ನಿಗಾವಹಿಸಲು 100 ಸಿ.ಸಿ.ಟಿ.ವಿ ಕ್ಯಾಮರಾ ಮತ್ತು ಮೈದಾನದಲ್ಲಿ ಆಗಮಿಸುವವರ ತಪಾಸಣೆಗೆ 3 ಬ್ಯಾಗೇಜ್ ಸ್ಕ್ಯಾನರ್, 20-ಡಿಎಫ್‌ಎಂಡಿ ಮತ್ತು 40-ಹೆಚ್.ಹೆಚ್.ಎಂ.ಡಿ.ಗಳನ್ನು ಅಳವಡಿಸಲಾಗಿದೆ” ಎಂದು ತಿಳಿಸಿದೆ.

ಗಣರಾಜ್ಯೋತ್ಸವದ ಆಚರಣೆ ಸಂಬಂಧ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಗೇಟ್ ನಂ.2ರಲ್ಲಿ ಬಿಳಿ ಬಣ್ಣದ ವಿ.ಐ.ಪಿ. ಪಾಸ್ ಹೊಂದಿರುವವರಿಗೆ, ಗೇಟ್ ನಂ-03 ರಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಗೇಟ್ ನಂ-04 ರಲ್ಲಿ ವಿ.ವಿ.ಐ.ಪಿ ಮತ್ತು ಪಿಂಕ್ ಕಲರ್ ಪಾಸ್ ಹೊಂದಿರುವವರಿಗೆ ಪ್ರವೇಶವಿದ್ದು, ಗೇಟ್ ನಂ-5 ರಲ್ಲಿ ಹಸಿರು ಬಣ್ಣದ ಸಾರ್ವಜನಿಕ ಪಾಸ ಹೊಂದಿರುವವರಿಗೆ ಪ್ರವೇಶವಿದೆ. ಕಾರ್ಯಕ್ರಮದ ಭದ್ರತಾ ದೃಷ್ಟಿಯಿಂದ ಗೇಟ್‌ಗಳ ಬಳಿ ತಪಾಸಣೆಗೆ ಒಳಪಟ್ಟು ಪೊಲೀಸರೊಂದಿಗೆ ಸಹಕರಿಸುವಂತೆ ಕೋರಿದೆ.

ಕಾರ್ಯಕ್ರಮಕ್ಕೆ ಆಗಮಿಸುವವರಲ್ಲಿ ಮನವಿ

  • ಸಮಾರಂಭಕ್ಕೆ ಆಗಮಿಸುವವರು ಬೆಳಗ್ಗೆ 8:30ರ ಒಳಗಾಗಿ ತಮ್ಮ ಆಸನಗಳಲ್ಲಿ ಆಸೀನರಾಗತಕ್ಕದ್ದು. ಯಾವುದೇ ಕಾರಣಕ್ಕೂ ಮೈದಾನದದೊಳಗೆ ಪ್ರವೇಶಿಸತಕ್ಕದ್ದಲ್ಲ.
  • ಸಮಾರಂಭಕ್ಕೆ ಆಗಮಿಸುವ ಸಾರ್ವಜನಿಕರು ಮಣಿಪಾಲ್ ಸೆಂಟರ್ ಕಡೆಯಿಂದ ಕಬ್ಬನ್ ರಸ್ತೆ ಮೂಲಕ ಗೇಟ್ ನಂ.05ಕ್ಕೆ ಆಗಮಿಸಲು ಸೂಚಿಸಲಾಗಿದೆ.
  • ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ತಮ್ಮೊಂದಿಗೆ ಅನಗತ್ಯವಾದ ಲಗೇಜು ಹಾಗೂ ಇತರೆ ವಸುಗಳನ್ನು ತರುವಂತಿಲ್ಲ.
  • ಯಾವುದಾದರೂ ಅನುಮಾನಾಸ್ಪದ ವಸ್ತುಗಳು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲ ಕೂಡಲೇ ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವುದು.
  • ಭದ್ರತೆಯ ಅಂಗವಾಗಿ ಮೈದಾನಕ್ಕೆ ಆಗಮಿಸುವವರು ಗೇಟ್‌ಗಳ ಬಳಿ ತಪಾಸಣೆಗೆ ಪೊಲೀಸರೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

ನಿಷಿದ್ಧ ವಸ್ತುಗಳು

ಸಿಗರೇಟ್, ಬೆಂಕಿ ಪೆಟ್ಟಿಗೆ, ಕರಪತ್ರಗಳು, ಬಣ್ಣದ ದ್ರಾವಣಗಳು, ಹರಿತವಾದ ವಸ್ತು ಹಾಗೂ ಚಾಕು-ಚೂರಿಗಳು, ಕಪ್ಪು ಕರವಸ್ತ್ರಗಳು, ತಿಂಡಿ, ತಿನಿಸುಗಳು, ನೀರಿನ ಬಾಟಲ್‌ಗಳು ಹಾಗೂ ಕ್ಯಾನ್‌ಗಳು, ಪಟಾಕಿ ಮತ್ತು ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ...

ದಾವಣಗೆರೆ | ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾ

ಎಲ್ಲ ಸಮುದಾಯಗಳ ಮಾನವರು ಒಂದೇ. ನಾವೆಲ್ಲ ಕೂಡಿ ಸಹೋದರತ್ವ ಭಾವನೆಯಿಂದ ಬದುಕಬೇಕೆಂಬ...

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ...

ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು,...