ಗಣರಾಜ್ಯೋತ್ಸವ ದಿನ | ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ: ಎಲ್ಲೆಲ್ಲಿ? ಇಲ್ಲಿದೆ ನೋಡಿ

Date:

Advertisements

ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ರಾಜ್ಯ ಸಿದ್ದವಾಗುತ್ತಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕಬ್ಬನ್‌ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಕರ್ನಾಟಕದ ರಾಜ್ಯಪಾಲರು ಧ್ವಜಾರೋಹಣ ಮಾಡಲಿದ್ದಾರೆ. ಈ ಹಿನ್ನೆಲೆ, ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ ಮುತ್ತಲಿನ ರಸ್ತೆಗಳಲ್ಲಿ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿರ್ಬಂಧ

ಜನವರಿ 26 ರಂದು ಬೆಳಗ್ಗೆ 8:30 ಗಂಟೆಯಿಂದ ಬೆಳಗ್ಗೆ 10:30ರ ವರೆಗೆ ಕಬ್ಬನ್‌ ರಸ್ತೆಯಲ್ಲಿ ಬಿ.ಆ‌ರ್.ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರ ನಿರ್ಬಂಧಿಸಲಾಗಿದೆ.

Advertisements

ಪರ್ಯಾಯ ಮಾರ್ಗ

  • ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್ ಫೆಂಟ್ರಿ ರಸ್ತೆ ಸಫೀನಾ ಪ್ಲಾಜಾ – ಎಡ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲೀಸ್ ಸರ್ಕಲ್‌- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು. ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
  • ಕಬ್ಬನ್‌ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಬಂಧಿಸಿದ್ದು. ಸದರಿ ವಾಹನಗಳು ವೆಬ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ.ರಸ್ತೆಯ ಮುಖಾಂತರ ಮೆಯೋಹಾಲ್, ಕಾವೇರಿ ಎಂಪೋರಿಯಂ, ಅನಿಲ್‌ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.

  • ಅನಿಲ್‌ ಕುಂಬ್ಳೆ ವೃತ್ತದಿಂದ ಕಬ್ಬನ್‌ ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್‌ ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ – ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

ವಾಹನ ನಿಲುಗಡೆ

  • ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಳ್ಳಬೇಕು ಹಾಗೂ ಪಾಸ್‌ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು ಎಂದು ಹೇಳಿದೆ.
  • ತುರ್ತು ಸೇವಾ ವಾಹನಗಳಾದ ಆಂಬುಲೆನ್ಸ್, ಅಗ್ನಿ ಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಸಿ.ಆರ್.ಟಿ., ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂ.ಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 29ನೇ ಮಹಡಿಯಿಂದ ಜಿಗಿದು12 ವರ್ಷದ ಬಾಲಕಿ ಆತ್ಮಹತ್ಯೆ

  • ಕಾರ್ಯಕ್ರಮಕ್ಕೆ ಬರುವ ಎಲ್ಲ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ 3 ರ ಮೂಲಕ ಒಳಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.
  • ಭದ್ರತಾ ದೃಷ್ಟಿಯಿಂದ ಪೆರೇಡ್‌ಗೆ ಬರುವ ಎಲ್ಲ ಆಹ್ವಾನಿತರು ಮೊಬೈಲ್ ಫೋನ್, ಹೆಲೈಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ಹೇಳಿದೆ. ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡಲಾಗುವುದಿಲ್ಲ. ಎಲ್ಲರೂ ಬೆಳಗ್ಗೆ 8 ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಕೋರಿದೆ.

ವಾಹನ ನಿಲುಗಡೆ ನಿಷಿದ್ದ ರಸ್ತೆಗಳು

  • ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ
  • ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ ಕೆ.ಆರ್.ರಸ್ತೆ & ಕಬ್ಬನ್ ರಸ್ತೆ ಜಂಕ್ಷನ್ ವರೆಗೆ
  • ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ

ವಿಶೇಷ ಮನವಿ

ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ, ಅಥವಾ 112 ಗೆ ಕರೆಮಾಡಿ. ಗಣರಾಜ್ಯೋತ್ಸವ ದಿನಾಚರಣೆಯನ್ನು ಯಶಸ್ವಿಗೊಳಿಸಲು ಸಹಕರಿಸಿ ಎಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X