ಬೆಂಗಳೂರು ನಗರದ ಯಶವಂತಪುರ ಸರ್ಕಲ್ ಬಳಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.
ಮುಂಜಾನೆ ಸುಮಾರು 3.45ರ ವೇಳೆಗೆ, ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಕಾರೊಂದು ಬೈಕ್‌ಗೆ ಗುದ್ದಿ ಫ್ಲೈಓವರ್ನಿಂದ ಕೆಳಕ್ಕುರುಳಿದೆ. ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯ ಬರ್ಬರ ಹತ್ಯೆ
ಗಾಯಾಳುಗಳನ್ನು ಸ್ಥಳೀಯರು ಮತ್ತು ಪೊಲೀಸರು ಸೇರಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಐವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ, ಇನ್ನುಳಿದ ಇಬ್ಬರಿಗೆ ಗಂಭೀರ ಗಾಯವಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾರು ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ. ಕಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಡಿವೈಡರ್ನಿಂದ ಹಾರಿ ಕೆಳಕ್ಕೆ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದೆ.
