ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ದಾಂಧಲೆ, ಗಲಾಟೆ (ರೋಜ್ ರೇಜ್) ಪ್ರಕರಣಗಳು ಹೆಚ್ಚುತ್ತಲೇ ಇವೆ. ಇತ್ತೀಚೆಗೆ, ಬೆಂಗಳೂರಿನ ಕೋರಮಂಗಲದಲ್ಲಿ ರೋಡ್ ರೇಜ್ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ.
ಕೋರಮಂಗಲದಲ್ಲಿ ನಡುರಸ್ತೆಯಲ್ಲಿಯೇ ಬೈಕ್ ಸವಾರಬೊಬ್ಬ ಕಾರಿನ ಬಾನೆಲ್ ಮೇಲೆ ಹತ್ತಿ, ವಿಂಡ್ ಶೀಲ್ಡ್‌ಗೆ ಒದ್ದು ದಾಂಧಲೆ ನಡೆಸಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ಕಾರು ಚಾಲಕ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದ ಆರೋಪದ ಮೇಲೆ ಬೈಕ್ ಸವಾರ ಗಲಾಟೆ ಮಾಡಿದ್ದಾನೆ ಎಂದು ಹೇಳಲಾಗಿದೆ.
The cab driver took off at the end 🙏 @blrcitytraffic @adugoditrfps pic.twitter.com/XE36dIggBe
— ThirdEye (@3rdEyeDude) January 8, 2025
ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಾರ್ವಜನಿಕರೊಬ್ಬರು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.