ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂ. ದರೋಡೆ; ಎಟಿಎಂ ಹಾಕುವ ಹಣ ಕದ್ದ ಕಳ್ಳರು

Date:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದೆ.

- Advertisement -

ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್​​ನ ಬಳಿ ತಡೆದು ಹಣ ದೋಚಿಕೊಂಡು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು. ಈ ವೇಳೆ ಜಯದೇವ ಡೇರಿ ಸರ್ಕಲ್​ನಲ್ಲಿ ಇನ್ನೋವಾದಲ್ಲಿ ಬಂದ ಆರೇಳು ಜನರ ಗ್ಯಾಂಗ್, ಎಟಿಎಂ ವಾಹನ ತಡೆದು ನಾವು ಆರ್​​ಬಿಐನವರು ಎಂದು ಹೇಳಿಕೊಂಡು ಹೆದರಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಪಾಠವಾಗಲಿದೆಯೇ?

ಗನ್​​ಮ್ಯಾನ್​​ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್​ಗೆ ಕರೆದೊಯ್ದಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಟಿಎಂ ವಾಹನದಲ್ಲಿ ಒಟ್ಟು ನಾಲ್ಕು ಜನ ಸಿಎಂಎಸ್ ಸಿಬ್ಬಂದಿ ಇದ್ದರು. ಓರ್ವ ಡ್ರೈವರ್,ಇಬ್ಬರು ಗನ್ ಮ್ಯಾನ್ ಹಾಗೂ ಮತ್ತೊಬ್ಬ ಹಣ ಹಾಕುವ ಸಿಬ್ಬಂದಿ ಇದ್ದು, ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಇವರ ವಿಚಾರಣೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...