ಮತದಾರರ ದತ್ತಾಂಶ ಮಾರಾಟ: ಖಾಸಗಿ ಸಂಸ್ಥೆಯ ವೆಬ್‌ಸೈಟ್ ದೆಹಲಿ ವಿಳಾಸದಲ್ಲಿ ನೋಂದಣಿ

Date:

  • ಜಾಲತಾಣದ ಮೂಲಕ ₹25,000 ಬೆಲೆಗೆ ಮತದಾರರ ಮಾಹಿತಿ ಮಾರಾಟಕ್ಕೆ ಇರಿಸಿದ ಖಾಸಗಿ ಸಂಸ್ಥೆ
  • ವಿಧಾನಸಭಾ ಕ್ಷೇತ್ರದ ದತ್ತಾಂಶ ಖರೀದಿಸಿ, 2023ರ ಚುನಾವಣೆಯಲ್ಲಿ ಗೆಲ್ಲಿ ಎಂದು ಜಾಹೀರಾತು

ಮತದಾರರ ದತ್ತಾಂಶ ಕಳ್ಳತನ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ, ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಯ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಖಾಸಗಿ ಸಂಸ್ಥೆಯ ವೆಬ್‌ಸೈಟ್ ದೆಹಲಿ ವಿಳಾಸದಲ್ಲಿ ನೋಂದಣಿಯಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

- Advertisement -

ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು, ಮತದಾರರ ದತ್ತಾಂಶ ಮಾರಾಟಕ್ಕೆ ಇರಿಸಿದ್ದ ವೆಬ್‌ಸೈಟ್‌ನ ಸರ್ವರ್ ಬಗ್ಗೆ ತಾಂತ್ರಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಬಗ್ಗೆ ಇನ್ನೂ ಕೆಲವೇ ದಿನಗಳಲ್ಲಿ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಪ್ರಸ್ತುತವಾಗಿ ದತ್ತಾಂಶ ಮಾರಾಟ ಮಾಡುತ್ತಿದ್ದ ಖಾಸಗಿ ಸಂಸ್ಥೆಯ ವಿರುದ್ಧ ತನಿಖೆ ಕೈಗೊಂಡಿರುವುದರಿಂದ ಖಾಸಗಿ ಸಂಸ್ಥೆಯ ಹೆಸರು ಸದ್ಯಕ್ಕೆ ಬಹಿರಂಗ ಪಡಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

“ಈ ಖಾಸಗಿ ಸಂಸ್ಥೆಯೂ ಬೆಂಗಳೂರು ದಕ್ಷಿಣ ಸೇರಿದಂತೆ ನಗರದ ಹಲವು ವಿಧಾನಸಭಾ ಕ್ಷೇತ್ರಗಳ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿದೆ. ಕಲೆ ಹಾಕಿದ ಸಂಪೂರ್ಣ ಮಾಹಿತಿಯನ್ನು ತನ್ನ ಸರ್ವರ್‌ನಲ್ಲಿ ಅಪಲೋಡ್ ಮಾಡಿದ್ದು, ಜಾಲತಾಣದ ಮೂಲಕ ₹25,000 ಬೆಲೆಗೆ ಮಾಹಿತಿಯನ್ನು ಮಾರಾಟಕ್ಕೆ ಇರಿಸಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

“ಖಾಸಗಿ ಕಂಪನಿಯೂ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಪ್ರಕಟಿಸಿದ್ದು, ವಿಧಾನಸಭಾ ಕ್ಷೇತ್ರದ ದತ್ತಾಂಶವನ್ನು ₹25,000 ಬೆಲೆಗೆ ಖರೀದಿ ಮಾಡಿ, 2023ರ ಚುನಾವಣೆಯಲ್ಲಿ ಗೆಲ್ಲಿ ಎಂದು ಹೇಳಿದೆ. ಜಾಲತಾಣದಲ್ಲಿ ಲಾಗಿನ್ ಆಗಿ ಹಣ ಪಾವತಿ ಮಾಡಿದ ಬಳಿಕ ದತ್ತಾಂಶ ಡೌನ್‌ಲೋಡ್‌ ಮಾಡಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಈ ಖಾಸಗಿ ಸಂಸ್ಥೆಯ ವೆಬ್‌ತಾಣದಲ್ಲಿ ಏನಿದೆ?

ಈ ಖಾಸಗಿ ಸಂಸ್ಥೆಯ ವೆಬ್‌ತಾಣದಲ್ಲಿ ಒಟ್ಟು 6.50 ಲಕ್ಷ ಮತದಾರರ ಮಾಹಿತಿ ಲಭ್ಯವಿದೆ. ಸಂಪೂರ್ಣ ಮತದಾರರ ಪಟ್ಟಿಯನ್ನು ನೀಡಿದ್ದು, 3,45,089 ಪುರುಷರು, 2,93,000 ಮಹಿಳೆಯರು ಹಾಗೂ 5,630 ಇತರರ ವೈಯಕ್ತಿಕ ಮಾಹಿತಿ ಇದೆ.

ಈ ವೆಬ್‌ಸೈಟ್‌ನಲ್ಲಿ ಮತದಾರರ ದೂರವಾಣಿ ಸಂಖ್ಯೆ, ಸಾಮಾಜಿಕ ಮಾಧ್ಯಮ ಖಾತೆಗಳ ಮಾಹಿತಿ ಇದೆ. ಕನ್ನಡ, ತಮಿಳು ಹಾಗೂ ಇಂಗ್ಲಿಷ್‌ನಲ್ಲಿ ದತ್ತಾಂಶವಿದೆ ಎಂಬ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ ಎಂದು ಮೂಲಗಳು ಹೇಳಿವೆ.

ಈ ಸುದ್ದಿ ಓದಿದ್ದೀರಾ? ₹25 ಸಾವಿರಕ್ಕೆ ಮತದಾರರ ಮಾಹಿತಿ ಮಾರಾಟ; ಎಫ್‌ಐಆರ್ ದಾಖಲು

ದತ್ತಾಂಶ ಮಾರಾಟಕ್ಕೆ ಇರಿಸಿರುವ ಖಾಸಗಿ ಸಂಸ್ಥಯ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು, 2023ರ ಏಪ್ರಿಲ್‌ನಲ್ಲಿ ದೆಹಲಿ ವಿಳಾಸದಲ್ಲಿ ಈ ವೆಬ್‌ಸೈಟ್ ಅನ್ನು ಖರೀದಿಸಿದ್ದಾರೆ. ಯುಪಿಐ ಮೂಲಕ ಖರೀದಿ ಮಾಡಿರುವುದಕ್ಕೆ ಹಣ ಪಾವತಿ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪುರಾವೆಗಳು ಲಭಿಸಿವೆ. ಎಚ್‌ಡಿಎಫ್‌ಸಿ, ಐಸಿಐಸಿಐ ಹಾಗೂ ಆ್ಯಕ್ಸಿಸ್ ಬ್ಯಾಂಕ್ ಖಾತೆಗಳನ್ನು ಬಳಸಿದ್ದು, ಈ ಮೂರು ಬ್ಯಾಂಕ್ ಖಾತೆಗಳು ಒಬ್ಬನೇ ವ್ಯಕ್ತಿ ಹೆಸರಿನಲ್ಲಿವೆ. ಆ ವ್ಯಕ್ತಿಯ ಪತ್ತೆಗಾಗಿ ವಿಶೇಷ ತಂಡ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...