ಫೆ.7ಕ್ಕೆ ಎನ್‌ಪಿಎಸ್ ರದ್ದತಿ ಕೋರಿ & ಒಪಿಎಸ್‌ ಹಕ್ಕೊತ್ತಾಯ ಧರಣಿಗೆ ಸಂಘ ತೀರ್ಮಾನ

Date:

ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘವು ಎನ್‌ಪಿಎಸ್ ಯೋಜನೆಯ ರದ್ದತಿಗೆ ಒತ್ತಾಯಿಸಿ‌ ಮತ್ತು ಒಪಿಎಸ್‌ ಹಕ್ಕೊತ್ತಾಯಕ್ಕೆ ಫೆ.7 ಧರಣಿ ನಡೆಸಲು ತೀರ್ಮಾನಿಸಿದೆ.

- Advertisement -

ಎನ್‌ಪಿಎಸ್‌ ಯೋಜನೆಯನ್ನು 2025-26ನೇ ಸಾಲಿನ ಆಯವ್ಯಯದಲ್ಲಿ ರದ್ದುಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಒಪಿಎಸ್‌ ಹಕ್ಕೊತ್ತಾಯ ಧರಣಿ ನಡೆಸಲು ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘವು 13.10.2022 ರಿಂದ ಒಂದು ತಿಂಗಳು ಒಪಿಎಸ್‌ ಸಂಕಲ್ಪ ಯಾತ್ರೆಯನ್ನು ಹಾಗೂ 14 ದಿನಗಳ ಕಾಲ ಒಪಿಎಸ್‌ ಜಾರಿಗಾಗಿ ಪ್ರೀಡಂ ಪಾರ್ಕ್‌ಲ್ಲಿ ಅಹೋರಾತ್ರಿ ಧರಣಿ ನಡೆಸಿತ್ತು. ಹಾಗೂ ಜನವರಿ ತಿಂಗಳಿಂದ ಮೂರು ತಿಂಗಳ ಕಾಲ Vote for OPS ಅಭಿಯಾನ ಕೂಡ ನಡೆಸಿತ್ತು.

ಆಗ ವಿರೋಧಪಕ್ಷದಲ್ಲಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎನ್‌ಪಿಎಸ್‌ ಯೋಜನೆಯನ್ನು ರದ್ದುಗೊಳಿಸುವ ಭರವಸೆಯನ್ನು ತನ್ನ ಪುಣಾಳಿಕೆಯಲ್ಲಿ ಸೇರಿಸಿತ್ತು. ಮುಂದುವರಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡ ತಕ್ಷಣ ಸಂಘದ ಪದಾಧಿಕಾರಿಗಳೊಂದಿಗೆ 13.06.2023 ರಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಎನ್‌ಪಿಎಸ್‌ ರದ್ದತಿ ಭರವಸೆ ನೀಡಿದ್ದರು.

ಈಗ ಮುಖ್ಯಮಂತ್ರಿಗಳು ಎನ್‌ಪಿಎಸ್‌ ಯೋಜನೆಯನ್ನು ರದ್ದುಗೊಳಿಸುವ ಕುರಿತು ಕ್ರಮಕೈಗೊಳ್ಳುವುದಾಗಿ ತಿಳಿಸಿ, ಈವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಒಪಿಎಸ್‌ ಹಕ್ಕೊತ್ತಾಯಕ್ಕೆ ಫೆ.7 ಧರಣಿ ನಡೆಸಲು ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘ ತೀರ್ಮಾನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...