ಡಾ ರಾಜ್‌ ಗೆ ಅವಮಾನ-ಚೇತನ್‌ ಅಹಿಂಸಾ ಗಡೀಪಾರಿಗೆ ಸಾರಾ ಗೋವಿಂದು ಆಗ್ರಹ

Date:

ನಿನ್ನೆ ನಾಡು ಡಾ ರಾಜ್‌ಕುಮಾರ್‌ ಜನ್ಮದಿನದ ಸಂಭ್ರಮದಲ್ಲಿದ್ದಾಗ ನಟ ಚೇತನ್‌ ಅವರು ಮಾಡಿದ ಫೇಸ್‌ಬುಕ್‌ ಪೋಸ್ಟ್‌ ಒಂದು ರಾಜ್‌ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್‌ಕುಮಾರ್‌ ಅವರ ಸಮಾಧಿಗಾಗಿ ಸರ್ಕಾರ ಎರಡೂವರೆ ಎಕರೆ ಜಮೀನು ನೀಡಿರುವುದು ಸರಿಯಲ್ಲ. ಅದನ್ನು ಸಾರ್ವಜನಿಕ ಉಪಯೋಗಕ್ಕೆ ಹಂಚಬೇಕು ಎಂದು ಚೇತನ್‌ ಹಾಕಿರುವ ಪೋಸ್ಟ್‌ ವಿವಾದಕ್ಕೆ ಕಾರಣವಾಗಿದೆ.

- Advertisement -

“ನಾವು ರಾಜಕುಮಾ‌ರ್ ಅವರನ್ನು ಒಬ್ಬ ಮಹಾನ್ ಕಲಾವಿದರಾಗಿ ಗೌರವಿಸುತ್ತೇವೆ. ಆದರೆ, ಬೆಂಗಳೂರು ನಗರ ಮಧ್ಯದಲ್ಲಿ 2006ರಲ್ಲಿ ಒಬ್ಬ ನಟನ ‘ಸಮಾಧಿ ಕಾಂಪ್ಲೆಕ್ಸ್’ಕ್ಕಾಗಿ 2.5 ಎಕರೆ ಭೂಮಿಯನ್ನು ನೀಡುವುದು ತಿಳುವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ. 21ನೇ ಶತಮಾನದ ಭಾರತದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರವು ಅದನ್ನು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸಾರ್ವಜನಿಕ ಉಪಯೋಗಕ್ಕೆ ತಕ್ಕಂತೆ ಹಂಚಬೇಕು. ಮತಗಳ ಲಾಭದ ಅವಕಾಶವಾದಿ ಉದ್ದೇಶದಿಂದ ಅಲ್ಲ” ಎಂದು ಬರೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದು ರಾಜ್‌ ಅಭಿಮಾನಿಗಳನ್ನು ಕೆರಳಿಸಿದೆ. ಇರಲಾರದೇ ಇರುವೆ ಬಿಟ್ಟುಕೊಂಡ ಎನ್ನುವಂತೆ 20 ವರ್ಷಗಳ ಹಿಂದೆ ನೀಡಿದ್ದ ಜಮೀನಿನ ಬಗ್ಗೆ ಮಾತನಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ರಾಜ್‌ ನಿಧನರಾದಾಗ ಸಾರ್ವಜನಿಕರ ಒತ್ತಾಯದ ಮೇರೆಗೆ ಸರ್ಕಾರ ರಾಜ್‌ ಸಮಾಧಿಗೆ ಕಂಠೀರವ ಸುಡಿಯೋದ ಬಳಿ ಎರಡೂವರೆ ಎಕರೆ ಜಾಗ ನೀಡಿತ್ತು. ಆ ಬಗ್ಗೆ ಯಾರದ್ದೂ ತಕರಾರು ಇರಲಿಲ್ಲ. ಆದರೆ, ಪದೇ ಪದೇ ಇಂತಹ ಎಡವಟ್ಟು ಹೇಳಿಕೆ ಕೊಡುವ ಚಾಳಿ ಹೊಂದಿರುವ ಚೇತನ್‌ ಅವರ ಈ ಪೋಸ್ಟ್‌ ಅನಗತ್ಯ ವಿವಾದಕ್ಕೆ ಕಾರಣವಾಗಿದೆ.

ರಾಜ್‌ ಅಭಿಮಾನಿಗಳು ಚೇತನ್‌ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಇಂದು ಬೆಳಿಗ್ಗೆ ರಾಜ್‌ ಅಭಿಮಾನಿಗಳ ಸಂಘದ ಸದಸ್ಯರು ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಚೇತನ್‌, ಕ್ಷಮೆ ಕೇಳಲ್ಲ ಎಂದು ಹೇಳಿ ಇನ್ನಷ್ಟು ಸಿಟ್ಟಿಗೆಬ್ಬಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹಿರಿಯ ಚಿತ್ರ ನಿರ್ಮಾಪಕ ಸಾ ರಾ ಗೋವಿಂದು, ”ಚೇತನ್‌ ಕ್ಷಮೆ ಕೇಳುವ ಅಗತ್ಯ ಇಲ್ಲ. ಆತನ ಕೊಡುಗೆ ಈ ನಾಡಿಗೆ ಏನೂ ಇಲ್ಲ. ಆತನನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆ ನಟಿ ಜಯಮಾಲಾ ಕೂಡ ಪ್ರತಿಕ್ರಿಯೆ ನೀಡಿದ್ದು, “ಚೇತನ್‌ ಹೇಳಿಕೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ರಾಜ್‌ ಕುಟುಂಬದವರು ಜಮೀನು ನೀಡುವಂತೆ ಕೇಳಿಲ್ಲ. ಸಾರ್ವಜನಿಕರ ಒತ್ತಾಸೆಯಂತೆ ಸರ್ಕಾರ ಜಮೀನು ನೀಡಿದೆ. ಚೇತನ್‌ ಹೇಳಿಕೆ ರಾಜ್‌ ಅಭಿಮಾನಿಗಳಿಗೆ ನೋವುಂಟು ಮಾಡಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...