ಬೆಂಗಳೂರು | ಅಪಹರಿಸಿ ಹಣಕ್ಕೆ ಬೇಡಿಕೆ: 13 ವರ್ಷದ ಬಾಲಕ ಶವವಾಗಿ ಪತ್ತೆ, ಆರೋಪಿಗಳ ಬಂಧನ

Date:

ಹಣಕ್ಕಾಗಿ ಅಪಹರಿಸಲ್ಪಟ್ಟ 13 ವರ್ಷದ ಬಾಲಕನ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಅಪಹರಣಕ್ಕೆ ಒಳಗಾಗಿದ್ದ ಬಾಲಕನ ಮೃತದೇಹ ಕಗ್ಗಲೀಪುರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಸದ್ಯ ಅಪಹರಣಕಾರರನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

- Advertisement -

ಮೃತ ಬಾಲಕ ಕ್ರೈಸ್ಟ್ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿದ್ದ ನಿಶ್ಚಿತ್ ಬುಧವಾರ ಸಂಜೆ ಐದು ಗಂಟೆಯಿಂದ ನಾಪತ್ತೆಯಾಗಿದ್ದ. ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಾಲಕನ ಅಪಹರಣ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಬೆಂಗಳೂರು | ಅಪಹರಣ​ ಪ್ರಕರಣ; ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್​ಐಆರ್

ಬಾಲಕನ ತಂದೆ ಜೆ.ಸಿ.ಅಚ್ಯುತ್ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸಂಜೆ 7.30 ಕಳೆದರೂ ಟ್ಯೂಷನ್‌ನಿಮದ ಮಗ ವಾಪಸ್ ಬರದ ಕಾರಣ ತಾಯಿ ಟ್ಯೂಷನ್ ಶಿಕ್ಷಕರಿಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಬಾಲಕ ಟ್ಯೂಷನ್‌ನಿಂದ ತೆರಳಿರುವುದಾಗಿ ಶಿಕ್ಷಕರು ಹೇಳಿದ್ದಾರೆ.

ಅರಕೆರೆ ಫ್ಯಾಮಿಲಿ ಪಾರ್ಕ್ ಬಳಿ ಬಾಲಕನ ಸೈಕಲ್ ಪತ್ತೆಯಾಗಿದ್ದು ಅಚ್ಯುತ್ ಪೊಲೀಸರಿಗೆ ದೂರು ನೀಡಿದ್ದರು. ಈ ನಡುವೆಯೇ ಬಾಲಕನ ಬಿಡುಗಡೆಗಾಗಿ 5 ಲಕ್ಷ ರೂಪಾಯಿ ನೀಡುವಂತೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು. ಈ ಸಂಬಂಧ ಹುಳಿಮಾವು ಠಾಣೆಯಲ್ಲಿ ನಾಪತ್ತೆ ಮತ್ತು ಅಪಹರಣ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳ ಆದರೆ ಗುರುವಾರ ಬಾಲಕನ ಶವ ಪತ್ತೆಯಾಗಿದೆ.

ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ಅಪಹರಣಕಾರರಾದ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಅವರು ತಪ್ಪಿಸಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಈ ಪೈಕಿ ಗುರುಮೂರ್ತಿ ಅಚ್ಯುತ್ ಅವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡಿದ್ದ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...