ಶಾಲೆ ಆರಂಭದ ದಿನ | ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಸಿಹಿ ತಿನಿಸು ಕಡ್ಡಾಯ

Date:

Advertisements
  • ಹೊಸ ಶೈಕ್ಷಣಿಕ ವರ್ಷದಲ್ಲಿ 224 ದಿನ ಕಾರ್ಯನಿರ್ವಹಿಸಲಿರುವ ಶಾಲೆಗಳು
  • ಜೂನ್ 1ರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ

ಬೇಸಿಗೆ ರಜೆ ಮುಗಿಸಿ ವಿದ್ಯಾರ್ಥಿಗಳು ಸೋಮವಾರದಿಂದ ಶಾಲೆಗೆ ಮರಳುತ್ತಿದ್ದಾರೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆ ಆರಂಭದ ದಿನ ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡುವಂತೆ ಸರ್ಕಾರ ಸೂಚನೆ ನೀಡಿದೆ.

ಈ ಕುರಿತಂತೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, “ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳು ಶಾಲೆ ಆರಂಭವಾದ ಮೊದಲ ದಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡಬೇಕು. ಮಕ್ಕಳು ಶಾಲೆಗೆ ಬರುವ ಮುನ್ನ ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು, ನೀರಿನ ಸಂಪ್‌ಗಳು, ಅನಗತ್ಯ ವಸ್ತುಗಳ ವಿಲೇವಾರಿ, ಶಾಲೆ ಆವರಣ ಸ್ವಚ್ಛಗೊಳಿಸಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ.

224 ದಿನ ಕಾರ್ಯನಿರ್ವಹಿಸಲಿರುವ ಶಾಲೆಗಳು

Advertisements

2023-24ರ ಹೊಸ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು 224 ದಿನ ಕಾರ್ಯನಿರ್ವಹಿಸಲಿದ್ದು, ಪ್ರತಿ ತರಗತಿಗೆ ವೇಳಾಪಟ್ಟಿಯನ್ನು ಸಿದ್ಧವಾಗಿರಿಸಬೇಕು ಎಂದು ಹೇಳಿದೆ.

ಜೂನ್‌ 1ರಿಂದ ರಿಂದ ಅಕ್ಟೋಬರ್‌ 7ರವರೆಗೆ ಶಾಲೆಗಳು ಕಾರ್ಯನಿರ್ವಹಿಸುತ್ತವೆ. ಅಕ್ಟೋಬರ್ 8 ರಿಂದ ಅಕ್ಟೋಬರ್ 24 ರವರೆಗೆ ದಸರಾ ರಜೆ ನೀಡಲಾಗುತ್ತದೆ.

ಅಕ್ಟೋಬರ್ 25 ರಂದು ಎರಡನೇ ಅವಧಿಗೆ ಶಾಲೆಗಳು ಪ್ರಾರಂಭವಾಗಿ 2024ರ ಏ. 10ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಜೂನ್ 1ರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಾಗಿದ್ದು, ಬೋಧನೆ ಪ್ರಾರಂಭವಾಗಲಿದೆ.

ಶಾಲಾ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ

ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಶಾಲೆಗಳ ಆರಂಭದ ದಿನವೇ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ಕಡ್ಡಾಯವಾಗಿ ವಿತರಿಸಬೇಕು ಎಂದು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಇನ್ನುಳಿದಂತೆ ಬಾಕಿ ಇರುವ ವಿದ್ಯಾರ್ಥಿಗಳಿಗೆ ಆಧಾರ್ ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೆಐಎನಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ವಶ

‘ಪ್ರಮೋಷನ್‌ನೊಂದಿಗೆ ಪ್ರವೇಶ’ ಪ್ರಕ್ರಿಯೆ ‘ವಿದ್ಯಾ ಪ್ರವೇಶ’ ಅಥವಾ ಮೊದಲ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ತಯಾರಿ ಮಾಡ್ಯೂಲ್ ಚಟುವಟಿಕೆಗಳು ಜೂನ್ 1 ರಂದು ಪ್ರಾರಂಭವಾಗುತ್ತವೆ ಮತ್ತು 40 ದಿನಗಳ ಅವಧಿಯವರೆಗೆ ಮುಂದುವರಿಯುತ್ತವೆ.

‘ಬಡ್ತಿಯೊಂದಿಗೆ ಪ್ರವೇಶ’ ಪ್ರಕ್ರಿಯೆಯಡಿ ಮುಂದಿನ ತರಗತಿಗಳಿಗೆ ಎಲ್ಲ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಸೇರಿಸಿಕೊಳ್ಳಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ.

‘ಮಿಂಚಿನ ಸಂಚಾರ’ ಅಭಿಯಾನದಡಿ ಜಾರಿ ಅಧಿಕಾರಿಗಳು ಜೂನ್ 1 ರಿಂದ ಜೂನ್ 15ರ ನಡುವೆ ಎಲ್ಲ ಶಾಲೆಗಳಿಗೆ ಭೇಟಿ ನೀಡಿ ನಾನಾ ಕಲಿಕಾ ಕಾರ್ಯಕ್ರಮಗಳು, ಮೂಲಸೌಕರ್ಯ ಮತ್ತು ಶಾಲೆಗಳ ಇತರ ಅಂಶಗಳನ್ನು ಪರಿಶೀಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X