ದ್ವಿತೀಯ ಪಿಯುಸಿ ಪರೀಕ್ಷೆ-2 ಅಂತಿಮ ವೇಳಾಪಟ್ಟಿ ಬಿಡುಗಡೆ

Date:

2023-24ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಬಿಡುಗಡೆಯಾದ ಬೆನ್ನಲ್ಲೇ, ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಏಪ್ರಿಲ್ 29ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವರ್ಷ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು 1, 2 ಹಾಗೂ 3 ಪರೀಕ್ಷೆಗಳಾಗಿ ನಡೆಸುತ್ತಿದೆ. ಮೊದಲನೇ ಹಂತದ ಪರೀಕ್ಷೆ ಮಾರ್ಚ್‌ 1 ರಿಂದ 22ರ ವರೆಗೆ ನಡೆದಿತ್ತು. 2ನೇ ಹಂತದ ಪರೀಕ್ಷೆ ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ನಡೆಯಲಿದೆ. ಮೂರನೇ ಹಂತದ ಪರೀಕ್ಷೆ ಜುಲೈನಲ್ಲಿ ನಡೆಯಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು. ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭಕ್ಕೂ ಮೊದಲೇ ಮೂರು ಪರೀಕ್ಷೆ ನಡೆಸಿ ಮಂಡಳಿ ಫಲಿತಾಂಶ ಪ್ರಕಟಿಸಬೇಕಿದೆ.

ಅನುತ್ತೀರ್ಣರಾದವರು ಪೂರಕ ಪರೀಕ್ಷೆಯನ್ನು ಇದೇ ಸಮಯದಲ್ಲಿ ಬರೆಯಬಹುದು. ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಕೂಡ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಪ್ರತಿದಿನ ಬೆಳಗ್ಗೆ 10.15ರಿಂದ 1.30ರವರೆಗೆ ಪರೀಕ್ಷೆ ನಡೆಯಲಿದೆ. ಎಲ್ಲ ವಿಷಯಗಳಿಗೆ ತಲಾ 80 ಅಂಕಗಳಿವೆ.

ಈ ಸುದ್ದಿ ಓದಿದ್ದೀರಾ? ಮೋದಿ ಫೋಟೋ ಬಳಕೆ | ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ದ್ವಿತೀಯ ಪಿಯುಸಿ ಪರೀಕ್ಷೆ-2ವೇಳಾಪಟ್ಟಿ

ಏ.29ರಂದು – ಕನ್ನಡ
ಏ 30ರಂದು – ಇತಿಹಾಸ, ಭೌತಶಾಸ್ತ್ರ
ಮೇ 2ರಂದು –  ಇಂಗ್ಲಿಷ್
ಮೇ 3ರಂದು – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 4ರಂದು – ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮೇ 9ರಂದು – ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮೇ 11ರಂದು – ಭೂಗೋಳಶಾಸ್ತ್ರ, ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 13ರಂದು – ಅರ್ಥಶಾಸ್ತ್ರ
ಮೇ 14ರಂದು – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಮೇ 15ರಂದು – ಹಿಂದಿ
ಮೇ 16ರಂದು – ತಮಿಳು ಇತರೆ ಭಾಷಾ ವಿಷಯಗಳ ಪರೀಕ್ಷೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮಹಿಳೆ ಮೇಲೆ ಆಟೋ ಚಾಲಕನಿಂದ ಹಲ್ಲೆ; ವಿಡಿಯೋ ವೈರಲ್

ರೈಡ್ ಹೇಲಿಂಗ್ ಆ್ಯಪ್ ಮೂಲಕ ಬುಕ್ ಮಾಡಿದ್ದ 'ಆಟೋ ರೈಡ್'ಅನ್ನು ಕ್ಯಾನ್ಸಲ್...

ಬೆಂಗಳೂರು | ಗಣೇಶ ಹಬ್ಬ: ಶನಿವಾರ ಮಾಂಸ ಮಾರಾಟ ನಿಷೇಧ

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರ ಶನಿವಾರ ಬೆಂಗಳೂರಿನಲ್ಲಿ ಮಾಂಸ...

ಭಾರತ ಕೇಂದ್ರೀಯ ವ್ಯವಸ್ಥೆಯಲ್ಲ, ಒಕ್ಕೂಟ ವ್ಯವಸ್ಥೆ: ರಹಮತ್ ತರೀಕೆರೆ

ಕವಿರಾಜಮಾರ್ಗದ ಪದ್ಯದಲ್ಲಿ ಕಾವೇರಿಯಿಂದ ಗೋದಾವರಿವರೆಗೆ ಕರ್ನಾಟಕ ನಾಡು ಇದೆ ಎಂದು ಹೇಳುತ್ತದೆ....

ಗಣೇಶ ಚತುರ್ಥಿ | ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ಕಲ್ಯಾಣಿ ವ್ಯವಸ್ಥೆ, ಮಾಂಸ ಮಾರಾಟ ನಿಷೇಧ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ...