ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ | ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

Date:

  • ವಿರೋಧದ ನಡುವೆಯೂ ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ
  • ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗೆ ಹಾಜರಾಗುವವರಿಗೆ ಪ್ರಯಾಣ ಉಚಿತ

ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ ಆಗಸ್ಟ್‌ 21ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ಬೆನ್ನಲ್ಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ, “ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಅಂದರೆ ಆಗಸ್ಟ್‌ 21 ರಿಂದ ಸೆಪ್ಟೆಂಬರ್ 2 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದೆ.

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿಯೂ ಉಚಿತ ಪ್ರಯಾಣ

“ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ, ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು” ಎಂದು ಕೆಎಸ್‌ಆರ್‌ಟಿಸಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ | ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಉಪನ್ಯಾಸಕರ ವಿರೋಧದ ನಡುವೆಯೂ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2ನೇ ಪೂರಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ.

2ನೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ

ಆ. 21ರಂದು ಕನ್ನಡ, ಅರೇಬಿಕ್

ಆ. 22 ಐಚ್ಛಿಕ ಕನ್ನಡ, ಕೆಮಿಸ್ಟ್ರಿ, ಬೇಸಿಕ್ ಮ್ಯಾಥ್ಸ್

ಆ. 23 ಸಮಾಜ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್

ಆ. 24 ಲಾಜಿಕ್, ಹಿಂದೂಸ್ಥಾನಿ ಮ್ಯೂಸಿಕ್, ಬ್ಯುಸಿನೆಸ್ ಸ್ಟಡೀಸ್

ಆ. 25 ಇತಿಹಾಸ, ಸ್ಟಾಟಸ್ಟಿಕ್ಸ್

ಆ. 26 ಇನರ್ಮೇಷನ್ ಟೆಕ್ನಾಲಜಿ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇಸ್, ಬ್ಯೂಟಿ ಆಂಡ್ ವೆಲ್ನೆಸ್

ಆ. 28 ಜಿಯೋಗ್ರಾಫಿ, ಸೈಕಾಲಜಿ, ಫಿಜಿಕ್ಸ್

ಆ. 29 ಅಕೌಂಟ್ಸ್, ಜಿಯಾಲಜಿ, ಎಜುಕೇಷನ್, ಹೋಂ ಸೈನ್ಸ್

ಆ. 30 ಪೊಲಿಟಿಕಲ್ ಸೈನ್ಸ್, ಮ್ಯಾಥಮೆಟಿಕ್ಸ್

ಆ. 31 ಹಿಂದಿ

ಸೆಪ್ಟೆಂಬರ್.​ 1ರಂದು ಎಕನಾಮಿಕ್ಸ್, ಬಯಾಲಜಿ

ಸೆ. 2ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...