ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಂಗಳೂರು ನಗರದ ವಿಧಾನಸೌಧದ ಬಳಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ವೇದಿಕೆ ಮೇಲೇರಲು ವ್ಯಕ್ತಿಯೋರ್ವ ಯತ್ನಿಸಿದ್ದು, ಆತನನ್ನು ಭದ್ರತಾ ಸಿಬ್ಬಂದಿಗಳು ತಡೆದು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್ ಮತ್ತಿತರ ಗಣ್ಯರಿದ್ದ ವೇದಿಕೆ ಮೇಲೇರಲು ವ್ಯಕ್ತಿಯೋರ್ವ ಯತ್ನಿಸಿದ್ದು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಬಳಿಕ ಆತನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿದ್ದೀರಾ? ಸಂಸತ್ ಭದ್ರತಾ ವೈಫಲ್ಯ | ಸಂಸದ ಪ್ರತಾಪ್ ಸಿಂಹ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ
ಕನ್ನಡ ಬಾವುಟವನ್ನು ಕೈಯಲ್ಲಿ ಹಿಡಿದು ವೇದಿಕೆಗೆ ನುಗ್ಗುವ ಯತ್ನ ಮಾಡಿದ್ದ ಬಂಧಿತ ಯುವಕನನ್ನು ಮಹದೇವ್ ನಾಯಕ್ ಎಂದು ಗುರುತಿಸಲಾಗಿದೆ
ಕನ್ನಡ ಬಾವುಟದ ಶಾಲು ಧರಿಸಿ, ಕೈಯಲ್ಲಿ ಶಾಲು ಹಿಡಿದಿದ್ದ ವ್ಯಕ್ತಿಯೊಬ್ಬ ಮುಂಭಾಗದಿಂದ ಜಿಗಿದು ವೇದಿಕೆ ಮೇಲೇರಲು ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಆ ಯುವಕನನ್ನು ತಡೆದು, ವಶಕ್ಕೆ ಪಡೆದಿದ್ದಾರೆ.
VIDEO | A man tried to approach Karnataka CM Siddaramaiah during an event in Bengaluru. Security officials apprehended him. More details are awaited.
— Press Trust of India (@PTI_News) September 15, 2024
(Source: Third Party)
(Full video available on PTI Videos – https://t.co/n147TvqRQz) pic.twitter.com/vM7VdgoHB0
