ಹಿರಿಯ ಪತ್ರಕರ್ತ ಡಿ. ಉಮಾಪತಿ ಅವರಿಗೆ ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ ಪ್ರದಾನ

Date:

- ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಪ್ರಶಸ್ತಿ ವಿತರಣೆ
- 'ಪರಿಸರ ಮತ್ತು ಅಭಿವೃದ್ಧಿ' ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ

ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ‘ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ‘ಯನ್ನು ಹಿರಿಯ ಪತ್ರಕರ್ತ ಮತ್ತು ಈ ದಿನ.ಕಾಮ್‌ನ ಸಂಪಾದಕೀಯ ಸಲಹೆಗಾರರಾದ ಡಿ ಉಮಾಪತಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ (ಸೆ.19) ಪ್ರಶಸ್ತಿ ಪ್ರದಾನ ಮಾಡಿದರು.

- Advertisement -

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆದಿದ್ದು, ಇದೇ ವೇಳೆ 2017ರಿಂದ 2023ರವರೆಗಿನ ‘ಪರಿಸರ ಮತ್ತು ಅಭಿವೃದ್ಧಿ’ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ಮುಖ್ಯಮಂತ್ರಿಗಳು ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ನ್ಯಾ.ಅಶೋಕ ಬಿ ಹಿಂಚಿಗೇರಿ, ಸಚಿವರಾದ ಭೈರತಿ ಸುರೇಶ್‌, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್‌, ವಿಧಾನ ಪರಿಷತ್‌ನ ಸರ್ಕಾರದ ಕಾರ್ಯದರ್ಶಿ ಬಿ ಬಿ ಕಾವೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್‌ ನಿಂಬಾಳ್ಕರ್‌, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷಾ ಖಾನಂ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಮಾಜದ ವಂಚನೆಯ ಜಾಲಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ವಡ್ಡರ್ಸೆ ರಘುರಾಮ ಶೆಟ್ಟಿ ಅವರು 1984ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ‘ಮುಂಗಾರು’ ದಿನಪತ್ರಿಕೆಯನ್ನು ಪ್ರಾರಂಭಿಸಿ, ನಿರ್ಭೀತ ಬರಹಗಳ ಮೂಲಕ ಪತ್ರಿಕಾ ವೃತ್ತಿಯಲ್ಲಿ ಬದಲಾವಣೆಯನ್ನು ತಂದವರು. ಕನ್ನಡ ಪತ್ರಿಕೋದ್ಯಮದಲ್ಲಿ ದೀನದಲಿತರ ಹಾಗೂ ದುರ್ಬಲ ವರ್ಗದವರ ಪರವಾಗಿ ಧ್ವನಿ ಎತ್ತುವ, ದನಿ ಇಲ್ಲದವರ ದನಿಯಾಗಿದ್ದರು. ಇವರ ಸ್ಮರಣಾರ್ಥವಾಗಿ ರಾಜ್ಯ ಸರ್ಕಾರ 2024ರಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಶಸ್ತಿಯನ್ನು ಸ್ಥಾಪಿಸಿದೆ.

ಪತ್ರಕರ್ತನ ಅಕ್ಷರದಲ್ಲಿ ಧ್ವನಿ ಇರಬೇಕು, ಧ್ವನಿಯಲ್ಲಿ ನಂಬಿಕೆ ಇರಬೇಕು, ನಂಬಿಕೆಯಲ್ಲಿ ಸಮಾಜ ಬದಲಿಸುವ ಶಕ್ತಿ ಇರಬೇಕು. ಈ ನಂಬಿಕೆಯನ್ನು ಜೀವಂತಗೊಳಿಸಿ ತಮ್ಮ ಬರವಣಿಗೆಯ ಮೂಲಕ ಜನಮನಗಳನ್ನು ಪ್ರಭಾವಿಸಿದ, ಹಿರಿಯ ಪತ್ರಕರ್ತ ಮತ್ತು ಈ ದಿನ.ಕಾಮ್‌ನ ಸಂಪಾದಕೀಯ ಸಲಹೆಗಾರರಾದ ಡಿ ಉಮಾಪತಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಚೊಚ್ಚಲ ಪ್ರಶಸ್ತಿ ಲಭಿಸಿದೆ.

parisara
ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರು

ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರು

ವಿಜಯಲಕ್ಷ್ಮಿ ಶಿಬರೂರು -2017
ಬಿಎಂಟಿ ರಾಜೀವ್-‌ 2018
ವಿನೋದಕುಮಾರ್‌ ಬಿ ನಾಯ್ಕ್‌ – 2019
ಮಾಲತೇಶ ಅಂಗೂರ – 2020
ಸುಧೀರ್‌ ಶೆಟ್ಟಿ – 2021
ಮಲ್ಲಿಕಾರ್ಜುನ ಹೊಸಪಾಳ್ಯ -2022
ಆರ್‌ ಮಂಜುನಾಥ್‌ – 2023

abhivruddi
ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರು

ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರು

ಚೀ. ಜ ರಾಜೀವ್- 2017
ದೇವಯ್ಯ ಗುತ್ತೇದಾರ್-‌ 2018
ಗಿರೀಶ್‌ ಲಿಂಗಣ್ಣ – 2019
ಯೋಗೇಶ್‌ ಎಂ ಎನ್‌ – 2020
ನೌಶಾದ್‌ ಬಿಜಾಪುರ – 2021
ಸತೀಶ್‌ ಜಿ ಟಿ – 2022
ಎಂ ಗಿರೀಶ್‌ ಬಾಬು- 2023

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...