ಬೆಂಗಳೂರಿನ ಲಾಲ್‌ಬಾಗ್‌ ಬಳಿ ಸರಣಿ ಅಪಘಾತ

ರಸ್ತೆ ಅಪಘಾತ

ಬೆಂಗಳೂರಿನ ಲಾಲ್‌ಬಾಗ್‌ ಮೆಟ್ರೋ ಪಿಲ್ಲರ್‌ ಬಳಿ ಗುರುವಾರ ಸರಣಿ ಅಪಘಾತ ನಡೆದಿದೆ.

ಗುರುವಾರ ಮೆಟ್ರೋ ಪಿಲ್ಲರ್‌ನ ಸಿಗ್ನಲ್ ಬಳಿ ನಿಂತಿದ್ದ ವಾಹನಗಳಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿಯಲ್ಲಿ ಭೀಕರ ಅಪಘಾತ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗೋಳಿಹಳ್ಳಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಕಡತನ ಬಾಗೇವಾಡಿಯ ನಿವಾಸಿ ಯಲ್ಲಪ್ಪ ವಣ್ಣೂರು ಅವರು ಮೃತಪಟ್ಟಿದ್ದಾರೆ. ಉಳಿದವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಯಲ್ಲಪ್ಪ ವಣ್ಣೂರು ಮತ್ತು ಅವರ ಸಂಬಂಧಿಗಳಾದ ಭೀಮಪ್ಪ ವಣ್ಣೂರ, ಪಲ್ಲವಿ ವಣ್ಣೂರ ಹಾಗೂ ಐಶ್ವರ್ಯ ವಣ್ಣೂರು – ನಾಲ್ವರೂ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿವೆ. ಯಲ್ಲಪ್ಪ ಅವರ ಕಾಲು ತುಂಡಾಗಿ ಬಿದ್ದಿದೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here