ಬೆಂಗಳೂರು | ಲಿಫ್ಟ್‌ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವು

Date:

Advertisements

ಲಿಫ್ಟ್‌ಗೆಂದು ತೆಗೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ಕಾಡುಗೋಡಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಶ್ರೀಕನ್ಯಾ ಹಾಗೂ ಮುನಿರಾಜು ದಂಪತಿ ಪುತ್ರ ಸುಹಾಸ್ ಗೌಡ ಎಂದು ಗುರುತಿಸಲಾಗಿದೆ.

ಕಾಮಗಾರಿ ಹಂತದಲ್ಲಿದ್ದ ಕಟ್ಟಡವೊಂದರಲ್ಲಿ ಲಿಫ್ಟ್‌ಗೆಂದು ಗುಂಡಿಯೊಂದನ್ನು ತೋಡಲಾಗಿದ್ದು ಅದರಲ್ಲಿ ನೀರು ತುಂಬಿಕೊಂಡಿತ್ತು. ಆಟವಾಡುತ್ತಿದ್ದ ಬಾಲಕ ಈ ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಬಳ್ಳಾರಿ | ಲಿಫ್ಟ್ ಕುಸಿದು ಕಾರ್ಮಿಕ ಸಾವು

Advertisements

ಕನ್ನಮಂಗಲದಲ್ಲಿ ಹಾಲಿನ ಡೇರಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು ಇಲ್ಲಿ ಲಿಫ್ಟ್‌ಗಾಗಿ ಗುಂಡಿ ಅಗೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಿ ಅಧ್ಯಕ್ಷ ಸೊಣ್ಣಪ್ಪ, ಸೆಕ್ರೆಟರಿ ಸುನೀಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಟ್ಟಡ ನಿರ್ಮಿಸುವವರ ಬೇಜವಾಬ್ದಾರಿಯಿಂದಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X