‘ಶಕ್ತಿ’ ಯೋಜನೆಗೆ ತಿಂಗಳು: ಲಾಭ ಪಡೆದ 16.73 ಕೋಟಿ ಮಹಿಳೆಯರು, 402 ಕೋಟಿ ಟಿಕೆಟ್ ಮೊತ್ತ

Date:

  • ನಾಲ್ಕು ಸಾರಿಗೆ ನಿಗಮಗಳ ಪೈಕಿ ಬಿಎಂಟಿಸಿಯಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣ
  • ಸಾರಿಗೆ ನಿಗಮದ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಜತೆಗೆ ಪುರುಷ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ

2023ನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್‌ ಸರ್ಕಾರ ತನ್ನ ಐದು ಗ್ಯಾರಂಟಿಗಳ ಪೈಕಿ ಮೊದಲಿಗೆ ‘ಶಕ್ತಿ ಯೋಜನೆ’ಯನ್ನು ಜೂನ್ 11ರಂದು ಜಾರಿಗೆ ತಂದಿತ್ತು. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಯೋಜನೆ ಇದಾಗಿದೆ. ಇದೀಗ ಜುಲೈ 11ಕ್ಕೆ ಯೋಜನೆ ಅನುಷ್ಠಾನಕ್ಕೆ ಬಂದು ಒಂದು ತಿಂಗಳು ಕಳೆದಿದೆ.

ಸಾರಿಗೆ ಸಂಸ್ಥೆಗಳಲ್ಲಿ ಮಹತ್ತರವಾದ ಬದಲಾವಣೆಗೆ ಕಾರಣವಾಗಿರುವ ಈ ಶಕ್ತಿ ಯೋಜನೆಯೂ ಮಹಿಳಾ ಪ್ರಯಾಣಿಕರಿಂದ ಅಭೂತಪೂರ್ವ ಯಶಸ್ಸನ್ನು ಕಂಡಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸಂತಸ ವ್ಯಕ್ತಪಡಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “ಸಾರ್ವಜನಿಕರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ನಿತ್ಯ ಪ್ರಯಾಣಿಸಿ ಸಾರಿಗೆ ಬಸ್‌ಗಳು ಜನರ ಜೀವನಾಡಿ ಹಾಗೂ ಮಹಿಳೆಯರ ಪಯಣದ ಸಾರಥಿಯಾಗಿವೆ ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದರು. ಜೂನ್ 11 ರಿಂದ ಜುಲೈ 10 ರವರೆಗೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಬರೋಬ್ಬರಿ 16.73 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿ ಈ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಶೇ. 50.86ರಷ್ಟು ಮಹಿಳೆಯರು ಪ್ರಯಾಣಿಸಿದ್ದು, ಟಿಕೆಟ್‌ಗಳ ಒಟ್ಟು ಮೌಲ್ಯ ₹401.94 ಕೋಟಿ ಆಗಿದೆ” ಎಂದು ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜುಲೈ 4ರಂದು ಒಟ್ಟು 1,20,04,725 ಪ್ರಯಾಣಿಕರು ಸಂಚರಿಸಿದ್ದು, ಈ ಪೈಕಿ ದಾಖಲೆ ಪ್ರಮಾಣದಲ್ಲಿ ಅಂದರೆ 70,15,397 ಮಹಿಳಾ ಪ್ರಯಾಣಿಕರು ಶೇ.58.43 ಪ್ರಮಾಣದಲ್ಲಿ ನಿಗಮದ ಬಸ್‌ಗಳಲ್ಲಿ ಸಂಚರಿಸಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಜೂನ್ 11 ರಿಂದ ಜುಲೈ 10ರವರೆಗೆ ಒಟ್ಟು 11.17 ಕೋಟಿ ಜನ ಪ್ರಯಾಣಿಸಿದ್ದು, ಈ ಪೈಕಿ ಶಕ್ತಿ ಯೋಜನೆಯನ್ನು 5.38 ಕೋಟಿ ಮಹಿಳೆಯರು ಬಳಸಿಕೊಂಡಿದ್ದಾರೆ. ಶೇ. 48.16 ಮಹಿಳಾ ಪ್ರಯಾಣಿಕರ ಪ್ರಮಾಣವಾಗಿದೆ. ನಾಲ್ಕು ಸಾರಿಗೆ ನಿಗಮಗಳ ಪೈಕಿ ಬಿಎಂಟಿಸಿಯಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಒಟ್ಟು 9.69 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದು, ಈ ಪೈಕಿ 5.09 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಶೇ. 52.52 ಮಹಿಳಾ ಪ್ರಯಾಣಿಕರ ಪ್ರಮಾಣವಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಒಟ್ಟು 7.24 ಕೋಟಿ ಪ್ರಯಾಣಿಕರಲ್ಲಿ 4.02 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಶೇ. 55.52 ಮಹಿಳಾ ಪ್ರಯಾಣಿಕರ ಪ್ರಮಾಣವಾಗಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ)ದ ಬಸ್‌ಗಳಲ್ಲಿ ಒಟ್ಟು 4.77 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಈ ಪೈಕಿ 2.23 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಶೇ. 46.75 ಮಹಿಳಾ ಪ್ರಯಾಣಿಕರ ಪ್ರಮಾಣವಾಗಿದೆ.

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ನೀಡಲಾದ ಒಟ್ಟು ಟಿಕೆಟ್ ಮೌಲ್ಯದಲ್ಲಿ ಕೆಎಸ್‌ಆರ್‌ಟಿಸಿ ₹151.25 ಕೋಟಿ ಆದಾಯದೊಂದಿಗೆ ಅಗ್ರಸ್ಥಾನದಲ್ಲಿದೆ. ಎನ್‌ಡಬ್ಲ್ಯೂಕೆಆರ್‌ಟಿಸಿ ₹103.51 ಕೋಟಿ, ಕೆಕೆಆರ್‌ಟಿಸಿ ₹77.62 ಕೋಟಿ ಹಾಗೂ ಬಿಎಂಟಿಸಿ ₹69.56 ಕೋಟಿ ಆದಾಯ ಪಡೆದು ನಂತರದ ಸ್ಥಾನದಲ್ಲಿವೆ.

ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಕಳೆದ ಒಂದು ತಿಂಗಳಿನಲ್ಲಿ ನಿತ್ಯ ಕೆಎಸ್‌ಆರ್‌ಟಿಸಿ 423, ಎನ್‌ಡಬ್ಲ್ಯೂಕೆಆರ್‌ಟಿಸಿ 986, ಕೆಕೆಆರ್‌ಟಿಸಿ 1500 ಹಾಗೂ ಬಿಎಂಟಿಸಿ 238 ಹೆಚ್ಚುವರಿ ಟ್ರಿಪ್‌ಗಳನ್ನು ಕಾರ್ಯಾಚರಣೆ ಮಾಡಿವೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಾಡಹಗಲೇ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಜೋಡಿ ಕೊಲೆ

ಪ್ರತಿನಿತ್ಯ ಸಾರಿಗೆ ಬಸ್‌ಗಳಲ್ಲಿ 55.77 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದು, ಸರಾಸರಿ ಟಿಕೆಟ್‌ ಮೌಲ್ಯ ₹13.40 ಕೋಟಿ ಆಗಿದೆ.

2022ರಲ್ಲಿ ಬಿಎಂಟಿಸಿಯ ಸರಾಸರಿ ದೈನಂದಿನ ಪ್ರಯಾಣಿಕರ ಸಂಖ್ಯೆ 27.34 ಲಕ್ಷ ಮತ್ತು ಕೆಎಸ್‌ಆರ್‌ಟಿಸಿ 23.59 ಲಕ್ಷ ಇದ್ದು, ಶಕ್ತಿ ಯೋಜನೆಯನ್ನು ಪರಿಚಯಿಸಿದ ನಂತರ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯನ್ನು ಕಂಡಿದೆ ಎಂದು ಮೂಲಗಳು ತಿಳಿಸಿವೆ.

ಶಕ್ತಿ ಯೋಜನೆಯ ಅನುಷ್ಠಾನದ ಬಳಿಕ ಸಾರಿಗೆ ನಿಗಮದ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಜತೆಗೆ ಪುರುಷ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ನಿಗಮಗಳ ಆದಾಯವೂ ಹೆಚ್ಚಳವಾಗಿದೆ. ಬಿಎಂಟಿಸಿಯ ದೈನಂದಿನ ಸರಾಸರಿ ಪ್ರಯಾಣಿಕರ ಸಂಖ್ಯೆ 38 ಲಕ್ಷ ಮತ್ತು ಕೆಎಸ್‌ಆರ್‌ಟಿಸಿ 30 ಲಕ್ಷ ದಾಟಿದೆ ಎಂದು ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...

ನೇಹಾ ಹತ್ಯೆ | ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಿದೆ ಎಂದ ಆರೋಪಿ ಫಯಾಜ್ – ವರದಿ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ....

ಬೆಂಗಳೂರು | ಗನ್ ಇಟ್ಕೊಂಡು ಸಿಎಂಗೆ ಹಾರ : ಪಿಎಸ್​ಐ ಸೇರಿ ನಾಲ್ವರು ಅಮಾನತು

ಪ್ರಚಾರದ ವೇಳೆ ಓರ್ವ ಗನ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಾರ...