ಶಕ್ತಿ ಯೋಜನೆ | ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ ಬದಲಿಗೆ ಸಾಮಾನ್ಯ ಬಸ್‌ ಪಾಸ್ ವಿತರಣೆ

Date:

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ತನ್ನ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಜೂನ್‌ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೆ ತಂದರು. ಇದೇ ವೇಳೆ, ಕೆಲವು ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್‌ಗಳನ್ನು ನೀಡಲಾಗಿತ್ತು. ಇನ್ನುಳಿದಂತೆ ರಾಜ್ಯದ ಮಹಿಳೆಯರಿಗೆ ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಲು ಮುಂದಿನ ದಿನಗಳಲ್ಲಿ ಸ್ಮಾರ್ಟ್‌ ಕಾರ್ಡ್‌ ನೀಡಲಾಗುವುದು ಎಂದು ಹೇಳಲಾಗಿತ್ತು. ಇದೀಗ, ಸ್ಮಾರ್ಟ್‌ ಕಾರ್ಡ್‌ಗಳ ಬದಲಿಗೆ ಸಾಮಾನ್ಯ ಬಸ್‌ ಪಾಸ್‌ ನೀಡಲು ನಿಗಮ ಯೋಜಿಸಿದೆ ಎಂದು ತಿಳಿದು ಬಂದಿದೆ.

- Advertisement -

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿದ ನಂತರ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ನಿಗಮಗಳಿಗೆ ಅಧಿಕ ಆದಾಯ ಬರುತ್ತಿದೆ. ನಾಲ್ಕು ನಿಗಮದ ಬಸ್‌ಗಳಲ್ಲಿ ನಿತ್ಯ 56 ಸಾವಿರಕ್ಕೂ ಹೆಚ್ಚು ಮಹಿಳೆಯರು ಸಂಚರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸುಮಾರು ಮೂರು ಕೋಟಿ ಸ್ಮಾರ್ಟ್ ಕಾರ್ಡ್‌ಗಳನ್ನು ತಯಾರಿಸುವ ಕುರಿತು ಸೆಂಟರ್‌ ಫಾರ್ ಇ-ಆಡಳಿತ (ಸಿಇಜಿ)ವನ್ನು ಸಾರಿಗೆ ನಿಗಮ ಸಂಪರ್ಕಿಸಿತ್ತು. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿತ್ತು. ಇಷ್ಟು ಪ್ರಮಾಣದ ಸ್ಮಾರ್ಟ್‌ ಕಾರ್ಡ್‌ಗಳನ್ನು ತಯಾರಿಸಲು ಸಿಇಜಿ ಹಿಂದೇಟು ಹಾಕಿದೆ. ಹಾಗಾಗಿ, ಸಾರಿಗೆ ನಿಗಮಗಳು ಸಾಮಾನ್ಯ ಬಸ್ ಪಾಸ್‌ಗಳನ್ನು ಹೋಲುವ ಶಕ್ತಿ ಪಾಸ್‌ಗಳನ್ನು ಪರಿಚಯಿಸಲು ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, “ಸ್ಮಾರ್ಟ್ ಕಾರ್ಡ್ ಅಭಿವೃದ್ಧಿಯ ಪ್ರಸ್ತಾವನೆಯನ್ನು ಸಿಇಜಿ ತಿರಸ್ಕರಿಸಿದೆ. ಹಾಗಾಗಿ, ಶಕ್ತಿ ಯೋಜನೆಯ ಸಾಮಾನ್ಯ ಬಸ್ ಪಾಸ್‌ ಪರಿಚಯಿಸಲು ನಿರ್ಧರಿಸಲಾಗಿದೆ. ಪಾಸ್ ಪ್ರಿಂಟಿಂಗ್ ಮತ್ತು ವಿತರಣೆಗೆ ಅಸ್ತಿತ್ವದಲ್ಲಿರುವ ವ್ಯವಸ್ಥೆ ಬಳಸಿಕೊಳ್ಳಬೇಕು” ಎಂದು ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಟ್‌ ಕಾಯಿನ್ ಪ್ರಕರಣ | ತನಿಖೆ ನಡೆಸಿದ್ದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್‌ ದಾಖಲು

“ಈ ಬಸ್‌ಪಾಸ್‌ಗಳು ಸಾಮಾನ್ಯ ಬಸ್‌ಪಾಸ್‌ಗಳಂತೆ ಇರುತ್ತವೆ. ಈಗಾಗಲೇ ಪಾಸ್‌ಗಳನ್ನು ನೀಡುವ ವ್ಯವಸ್ಥೆಯನ್ನು ಹೊಂದಿರುವುದರಿಂದ ಈ ಕಾರ್ಯ ಸುಲಭವಾಗಲಿದೆ. ಈ ಯೋಜನೆಯ ಲಾಭ ಪಡೆಯಲು ಮಹಿಳೆಯರು ಅಧಿಕೃತ ಪೋರ್ಟಲ್‌ನಲ್ಲಿ ಅರ್ಜಿ ಹಾಕಬೇಕು. ನಂತರ ಈ ಪಾಸ್‌ಗಳನ್ನು ಬಸ್‌ ನಿಲ್ದಾಣಗಳು ಮತ್ತು ಡಿಪೋಗಳಲ್ಲಿ ವಿತರಣೆ ಮಾಡಲಾಗುವುದು” ಎಂದು ಹೇಳಿದ್ದಾರೆ.

ಈಗ ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳಿಗೆ ನೋಂದಣಿ ನಡೆಯುತ್ತಿರುವುದರಿಂದ ಶಕ್ತಿ ಸಾಮಾನ್ಯ ಕಾರ್ಡ್‌ಗಳ ನೋಂದಣಿ ಪ್ರಾರಂಭಕ್ಕೆ ವಿಳಂಬವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...