ಗಣತಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ: ಇಲಾಖೆಗಳಿಗೆ ಪಾಲಿಕೆ ಆಯುಕ್ತರಿಂದ ಕ್ರಮದ ಎಚ್ಚರಿಕೆ

Date:

ರಾಷ್ಟ್ರೀಯ ಜನಗಣತಿ-2027ರ ಅಂಗವಾಗಿ ನಡೆಯುತ್ತಿರುವ ಮನೆ ಪಟ್ಟಿ ಹಾಗೂ ಜನ ಗಣತಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದೆ.

- Advertisement -

ಪಾಲಿಕೆಯ ವ್ಯಾಪ್ತಿಯಲ್ಲಿ ಏಪ್ರಿಲ್ 16ರಿಂದ ಆರಂಭಗೊಂಡಿರುವ ಈ ಗಣತಿ ಕಾರ್ಯಕ್ಕೆ ವಿವಿಧ ಇಲಾಖೆ ಹಾಗೂ ನಿಗಮ ಮಂಡಳಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಆದರೆ ಹಲವರು ಕರ್ತವ್ಯಕ್ಕೆ ಹಾಜರಾಗದೇ ಇರುವುದರಿಂದ ಗಣತಿ ಕಾರ್ಯ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ ಎನ್ನುವುದು ಗಮನಕ್ಕೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಹಿನ್ನೆಲೆ, ಗಣತಿ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಸಿಬ್ಬಂದಿಯನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಸಂಬಂಧಿತ ಇಲಾಖೆಗಳ ಮುಖ್ಯಸ್ಥರಿಗೆ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಪತ್ರ ಬರೆದಿದ್ದಾರೆ.

ಬೆಸ್ಕಾಂ, ಬೆಂಗಳೂರು ಜಲಮಂಡಳಿ, ಶಾಲಾ ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆಗೆ ಈ ಸಂಬಂಧ ಸೂಚನೆ ನೀಡಲಾಗಿದೆ.

ನಿಗದಿತ ಸಿಬ್ಬಂದಿಯನ್ನು ಬಿಡುಗಡೆಗೊಳಿಸದಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಜನಗಣತಿ ಕಾಯ್ದೆ 1948 ಹಾಗೂ ಭಾರತೀಯ ನ್ಯಾಯ ಸಂಹಿತೆ 2023ರಡಿ ಎಫ್‌ಐಆರ್ ದಾಖಲಿಸುವ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.

ಗಣತಿ ಕಾರ್ಯವನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಪೂರ್ಣಗೊಳಿಸಲು ಎಲ್ಲ ಇಲಾಖೆಗಳಿಂದ ಸಹಕಾರ ಅಗತ್ಯವೆಂದು ಆಯುಕ್ತರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...