ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

Date:

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ಕೈಬಿಡುವ ಕುರಿತು ಉಂಟಾಗಿರುವ ಆತಂಕಗಳು ಹಾಗೂ ಹೆಚ್ಚುತ್ತಿರುವ ದ್ವೇಷಪೂರಿತ ಅಪರಾಧಗಳ ವಿರುದ್ಧ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ ಭಾಗವಹಿಸುವುದನ್ನು ತಡೆಯುವ ಉದ್ದೇಶದಿಂದ ಸಾಮಾಜಿಕ ಕಾರ್ಯಕರ್ತ, ಎಪಿಸಿಆರ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಮಾನಿಟರಿಂಗ್ ಕಮಿಟಿ ಆಫ್ ಇಂಡಿಯನ್ ಮುಸ್ಲಿಮ್ಸ್‌ನ ಸದಸ್ಯರೂ ಆದ ನದೀಮ್ ಖಾನ್ ಅವರನ್ನು ದೆಹಲಿ ಪೊಲೀಸರು ಗೃಹಬಂಧನದಲ್ಲಿರಿಸಿರುವ ಕ್ರಮವನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಸಂಘಟನೆ ತೀವ್ರವಾಗಿ ಖಂಡಿಸಿದೆ.

- Advertisement -

ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ. ನಸೀಂ ಅಹ್ಮದ್ “ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು ಮತ್ತು SIR ಮೂಲಕ ಮತದಾರರ ಪಟ್ಟಿಯಿಂದ ಹೆಸರುಗಳು ಕೈಬಿಡುವ ಕುರಿತು ವ್ಯಕ್ತವಾಗುತ್ತಿರುವ ಆತಂಕಗಳ ವಿರುದ್ಧ ಧ್ವನಿ ಎತ್ತುವುದಕ್ಕಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ಮಂಗಳವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ನಡುವೆ ಸೆಪ್ಟೆಂಬರ್ 29ರಂದು ಬೆಳಿಗ್ಗೆ ದೆಹಲಿಯಲ್ಲಿರುವ ನದೀಮ್ ಖಾನ್ ಅವರ ಮನೆಗೆ ತೆರಳಿದ್ದ ದೆಹಲಿ ಪೊಲೀಸರು, ಪ್ರತಿಭಟನೆಯಲ್ಲಿ ಭಾಗವಹಿಸಲು ಅವರು ಹೊರಗೆ ತೆರಳದಂತೆ ಅವರನ್ನು ಅಲ್ಲಿಯೇ ನಿರ್ಬಂಧಿಸಿದ್ದಾರೆ. ಶಾಂತಿಯುತ ಪ್ರತಿಭಟನೆ ಮಾಡಲು ದೇಶದ ಸಂವಿಧಾನ ನೀಡಿರುವ ಹಕ್ಕನ್ನೂ ಕಸಿದುಕೊಂಡಿದ್ದಾರೆ” ಎಂದು ನದೀಮ್ ಖಾನ್ ಗೃಹಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಭಾರತದ ಸಂವಿಧಾನದ 19(1)(a) ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಅಭಿವ್ಯಕ್ತಿ ಮತ್ತು ಮಾತಿನ ಸ್ವಾತಂತ್ರ್ಯದ ಹಕ್ಕು ಇದೆ. ಅದೇ ರೀತಿ 19(1)(b) ಅಡಿಯಲ್ಲಿ ಶಸ್ತ್ರಾಸ್ತ್ರವಿಲ್ಲದೆ ಶಾಂತಿಯುತವಾಗಿ ಸಭೆ ಸೇರುವ ಹಕ್ಕನ್ನು ಸಂವಿಧಾನ ಖಾತರಿಪಡಿಸಿದೆ. ಸಂವಿಧಾನದ 19(1)(c) ಸಂಘಟನೆಗಳನ್ನು ರಚಿಸುವ ಹಕ್ಕನ್ನೂ ನೀಡುತ್ತದೆ. ಸುಪ್ರೀಂ ಕೋರ್ಟ್ ಕೂಡ ಶಾಂತಿಯುತ ಪ್ರತಿಭಟನೆ ಮತ್ತು ಪ್ರದರ್ಶನಗಳು ಸಂವಿಧಾನದ Article 19(1)(a) ಮತ್ತು 19(1)(b) ಅಡಿಯಲ್ಲಿ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕುಗಳಾಗಿವೆ ಎಂದು ಸ್ಪಷ್ಟಪಡಿಸಿದೆ. ಆದರೂ ಕೂಡ ನದೀಮ್ ಖಾನ್ ಅವರನ್ನು ಗೃಹಬಂಧನದಲ್ಲಿಸಿರುವುದು ಒಪ್ಪುವಂಥದ್ದಲ್ಲ. ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸುವ ವ್ಯಕ್ತಿಯನ್ನು ಯಾವುದೇ ಕಾನೂನುಬದ್ಧ ಆಧಾರವನ್ನು ಸ್ಪಷ್ಟಪಡಿಸದೆ ನಿರ್ಬಂಧಿಸುವುದು ಪ್ರಜಾಪ್ರಭುತ್ವದ ಹಕ್ಕುಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

“ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅರ್ಹ ನಾಗರಿಕರ ಹೆಸರುಗಳು ತಪ್ಪಾಗಿ ಕೈಬಿಡದಂತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವುದು ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಅತ್ಯಂತ ಮುಖ್ಯವಾಗಿದೆ. ಆದರೆ, ಚುನಾವಣಾ ಆಯೋಗದ ನಡೆಯನ್ನು ಹಾಗೂ ಕೇಂದ್ರ ಸರ್ಕಾರವು ನಡೆದುಕೊಳ್ಳುತ್ತಿರುವ ಕ್ರಮವನ್ನು ಪ್ರಶ್ನಿಸಿದರೆ ತಪ್ಪೇನಿದೆ? ಹೋರಾಟದ ಧ್ವನಿಗಳನ್ನು ಇಂದು ವ್ಯವಸ್ಥಿತವಾಗಿ ಹತ್ತಿಕ್ಕಲಾಗುತ್ತಿರುವುದಕ್ಕೆ ನದೀಮ್ ಖಾನ್ ಅವರ ಗೃಹಬಂಧನವು ಉದಾಹರಣೆಯಾಗಿದೆ” ಎಂದು ಸೋಲಿಡಾರಿಟಿ ಪರವಾಗಿ ತಿಳಿಸಿದ್ದಾರೆ.

Advertisements

“ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯದ ಭರವಸೆ ನೀಡಿದೆ. ಶಾಂತಿಯುತವಾಗಿ ಪ್ರಶ್ನಿಸುವುದು, ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸುವ ಹಕ್ಕುಗಳು ಪ್ರಜಾಪ್ರಭುತ್ವದ ಮೂಲಭೂತ ಅಂಶಗಳಾಗಿವೆ. ಈ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರ ಮತ್ತು ಕಾನೂನು ಜಾರಿ ಸಂಸ್ಥೆಗಳ ಕರ್ತವ್ಯವಾಗಿದೆ. ಹಾಗಾಗಿ, ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಅವರನ್ನು ಗೃಹ ಬಂಧನದಲ್ಲಿರಿಸಿರುವ ಕ್ರಮವು ಖಂಡನೀಯ” ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಸಂಘಟನೆ ಪರವಾಗಿ ಆಕ್ಷೇಪಿಸಿದ್ದಾರೆ.

ಇದನ್ನೂ ಓದಿದ್ದೀರಾ? ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಇದೇ ವೇಳೆ, “ಇಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯದ ನಾನಾ ಮುಖಂಡರನ್ನು ಪೊಲೀಸರು ಬಂಧಿಸಿ, ವಶಕ್ಕೆ ತೆಗೆದುಕೊಂಡ ಕ್ರಮ ಕೂಡ ಸಮರ್ಥನೀಯವಲ್ಲ. ಕೂಡಲೇ ಎಲ್ಲರನ್ನೂ ಬಿಡುಗಡೆಗೊಳಿಸಬೇಕು” ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ. ನಸೀಂ ಅಹ್ಮದ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...