ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಯೋಗದಿಂದ ಶಾಸಕ ಎನ್ ಎ ಹ್ಯಾರಿಸ್ ಭೇಟಿ: ಹಲವು ವಿಚಾರಗಳ ಬಗ್ಗೆ ಚರ್ಚೆ

Date:

ರಾಜ್ಯದಲ್ಲಿ ಯುವಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ ಆಯೋಗವನ್ನು ಶೀಘ್ರವಾಗಿ ಸ್ಥಾಪಿಸುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ನಿಯೋಗವು ಶಾಸಕ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್ ಎ ಹ್ಯಾರಿಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

- Advertisement -

ರಾಜ್ಯದ ಯುವಜನತೆ ಎದುರಿಸುತ್ತಿರುವ ಶೈಕ್ಷಣಿಕ, ಉದ್ಯೋಗ, ಆರ್ಥಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಣಾಮಕಾರಿ ಸ್ಪಂದನೆಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಯುವಜನರ ಸಮಸ್ಯೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಸರ್ಕಾರಕ್ಕೆ ಸೂಕ್ತ ಸಲಹೆ ಮತ್ತು ಶಿಫಾರಸುಗಳನ್ನು ನೀಡುವ ಕರ್ನಾಟಕ ರಾಜ್ಯ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು ಎಂದು ನಿಯೋಗವು ಒತ್ತಾಯಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ(SIR) ಪ್ರಕ್ರಿಯೆಯ ಸಂದರ್ಭದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಶಾಸಕರ ಗಮನಕ್ಕೆ ತರಲಾಯಿತು. ವಿಶೇಷವಾಗಿ ವೃದ್ಧರು, ವಿಕಲಚೇತನರು, ಅನಿವಾಸಿ ಭಾರತೀಯರು ಹಾಗೂ ಇತರ ದುರ್ಬಲ ವರ್ಗದ ನಾಗರಿಕರು ದಾಖಲೆ ಪರಿಶೀಲನೆ ಮತ್ತು ನೇರ ಹಾಜರಾತಿ ಪ್ರಕ್ರಿಯೆಯಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ವಿವರಿಸಲಾಯಿತು.

SIR ಪ್ರಕ್ರಿಯೆಯಲ್ಲಿ ಅರ್ಹ ಮತದಾರರಿಗೆ ಅನಗತ್ಯ ತೊಂದರೆಯಾಗದಂತೆ, ಅಗತ್ಯವಿರುವವರಿಗೆ ನೇರ ಹಾಜರಾತಿಯಿಂದ ಸೂಕ್ತ ವಿನಾಯಿತಿ, ಹೆಚ್ಚುವರಿ ನೋಡಲ್ ಅಧಿಕಾರಿಗಳ ನೇಮಕ ಹಾಗೂ ಜನಸ್ನೇಹಿ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರ ಮತ್ತು ಚುನಾವಣಾ ಆಯೋಗದ ಗಮನ ಸೆಳೆಯಬೇಕು ಎಂದು ನಿಯೋಗವು ಮನವಿ ಮಾಡಿತು.

ಇದರೊಂದಿಗೆ ಯುವಕರಿಗೆ ಸಂಬಂಧಿಸಿದ ವಿವಿಧ ಉದ್ಯೋಗಾವಕಾಶಗಳು, ಶಿಕ್ಷಣ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದಲ್ಲಿ ಯುವಕರ ಭಾಗವಹಿಸುವಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಿತು.

ಇದನ್ನೂ ಓದಿದ್ದೀರಾ? ರಾಯಚೂರು | ಶಾಲೆ ತೊರೆದ 413 ಎಸ್‌ಟಿ ವಿದ್ಯಾರ್ಥಿಗಳು; ವಿಶೇಷ ಕಾರ್ಯಪಡೆ ರಚನೆಗೆ ಒತ್ತಾಯ

ನಿಯೋಗದ ಮನವಿಯನ್ನು ಆಲಿಸಿದ ಶಾಸಕ ಎನ್ ಎ ಹ್ಯಾರಿಸ್ ಅವರು ಪ್ರಸ್ತಾಪಿಸಲಾದ ವಿಚಾರಗಳ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಡಾ. ನಸೀಂ ಅಹ್ಮದ್, ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ತೀರ್ಥಹಳ್ಳಿ, ರಾಜ್ಯ ಪದಾಧಿಕಾರಿಗಳಾದ ರೆಹಾನ್ ಉಡುಪಿ, ಮಾಧ್ಯಮ ಸಂಯೋಜಕ ಇರ್ಷಾದ್ ವೇಣೂರು ನಿಯೋಗದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...