ನೈರುತ್ಯ ರೈಲ್ವೆ | ಟಿಕೆಟ್ ರಹಿತ ಪ್ರಯಾಣದ 6,27,014 ಪ್ರಕರಣ ದಾಖಲು: ₹46.31 ಕೋಟಿ ದಂಡ ಸಂಗ್ರಹ

Date:

“ಈ ಹಣಕಾಸು ವರ್ಷದಲ್ಲಿ ಅಂದರೆ, 2023 ರ ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ ಟಿಕೆಟ್ ರಹಿತ ಪ್ರಯಾಣದ 6,27,014 ಪ್ರಕರಣಗಳು ದಾಖಲಾಗಿದ್ದು, ₹46.31 ಕೋಟಿ ದಂಡ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 9.95% ಹೆಚ್ಚಳವಾಗಿದೆ. ಇದು ನೈರುತ್ಯ ರೈಲ್ವೆ ಪ್ರಾರಂಭವಾದಾಗಿನಿಂದ ಅತಿ ಹೆಚ್ಚು ವಸೂಲಿಯಾದ ದಂಡವಾಗಿದೆ” ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ನೈರುತ್ಯ ರೈಲ್ವೆ ಇಲಾಖೆ, “ನೈರುತ್ಯ ರೈಲ್ವೆಯ ಟಿಕೆಟ್ ತಪಾಸಣಾ ಸಿಬ್ಬಂದಿ ಶ್ಲಾಘನೀಯ ಕೆಲಸ ಮಾಡಿದ್ದು, ಟಿಕೆಟ್ ರಹಿತ ಮತ್ತು ಅನಿಯಮಿತ ಪ್ರಯಾಣವನ್ನು ತಡೆಯಲು ಎಕ್ಸ್‌ಪ್ರೆಸ್, ವಿಶೇಷ ರೈಲುಗಳು ಸೇರಿದಂತೆ ಪ್ರಯಾಣಿಕರ ರೈಲು ಸೇವೆಗಳಲ್ಲಿ ಎಲ್ಲ ಅಧಿಕೃತ ರೈಲು ಬಳಕೆದಾರರಿಗೆ ಆರಾಮದಾಯಕ ಪ್ರಯಾಣ ಮತ್ತು ಉತ್ತಮ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ವಿಶೇಷ ಟಿಕೆಟ್ ತಪಾಸಣಾ ಕಾರ್ಯವನ್ನು ನಿಯಮಿತವಾಗಿ ನಡೆಸಲಾಗುತ್ತಿದೆ” ಎಂದು ಹೇಳಿದೆ.

ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು 3,68,205 ಪ್ರಕರಣಗಳನ್ನು ದಾಖಲಿಸಿದ್ದು, ₹28.26 ಕೋಟಿ ದಂಡ ಸಂಗ್ರಹವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

2023ರ ಡಿಸೆಂಬರ್ ತಿಂಗಳಲ್ಲಿ ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ 72,041 ಪ್ರಕರಣಗಳನ್ನು ದಾಖಲಿಸಿ ₹5.13 ಕೋಟಿ ದಂಡ ಸಂಗ್ರಹಿಸಲಾಗಿದೆ.

ಏಪ್ರಿಲ್ 1 ರಿಂದ ಡಿಸೆಂಬರ್ 31 ರವರೆಗೆ ವಿಭಾಗವಾರು ದಂಡ ಸಂಗ್ರಹ

  • ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು 96,790 ಪ್ರಕರಣಗಳನ್ನು ದಾಖಲಿಸಿ, ₹6.36 ಕೋಟಿ ದಂಡ ಸಂಗ್ರಹಿಸಿದೆ.
  • ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು 3,68,205 ಪ್ರಕರಣ ದಾಖಲಿಸಿ, ₹28.26 ಕೋಟಿ ದಂಡ ಸಂಗ್ರಹಿಸಿದೆ.
  • ನೈರುತ್ಯ ರೈಲ್ವೆಯ ಮೈಸೂರು ವಿಭಾಗವು 1,00,538 ಪ್ರಕರಣ ದಾಖಲಿಸಿ, ₹5.91 ಕೋಟಿ ದಂಡ ಸಂಗ್ರಹಿಸಿದೆ.
  • ನೈರುತ್ಯ ರೈಲ್ವೆಯ ಫ್ಲೈಯಿಂಗ್ ಸ್ಕ್ವಾಡ್ (ಕೇಂದ್ರ ಕಚೇರಿ) ವಿಭಾಗವು 61,481 ಪ್ರಕರಣ ದಾಖಲಿಸಿ, ₹5.77 ಕೋಟಿ  ದಂಡ ಸಂಗ್ರಹಿಸಿದೆ.

“ರೈಲ್ವೆ ಕಾಯ್ದೆ, 1989ರ ಸೆಕ್ಷನ್ 138ರ ಪ್ರಕಾರ, ಯಾವುದೇ ಪ್ರಯಾಣಿಕರು ಸರಿಯಾದ ಪಾಸ್ ಅಥವಾ ಟಿಕೆಟ್ ಇಲ್ಲದೆ ಪ್ರಯಾಣಿಸುವುದು ಕಂಡುಬಂದರೆ, ಅಂತಹವರಿಗೆ ₹250 ದಂಡ ವಿಧಿಸಲಾಗುತ್ತದೆ. ಪ್ರಯಾಣಿಕರು ಪ್ರಯಾಣಿಸಿದ ದೂರಕ್ಕೆ ಅಥವಾ ರೈಲು ಪ್ರಾರಂಭವಾದ ನಿಲ್ದಾಣದಿಂದ ಸಾಮಾನ್ಯ ಏಕ ಶುಲ್ಕ ಮತ್ತು ಹೆಚ್ಚುವರಿ ಶುಲ್ಕಗಳು ಅಂದರೆ ₹250 ಯಾವುದು ಹೆಚ್ಚಿದೆಯೋ ಅದನ್ನು ವಿಧಿಸಲಾಗುತ್ತದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ನಾಮಫಲಕದಲ್ಲಿ ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ 20,977 ನೋಟಿಸ್‌ ಜಾರಿ

ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಸಂಜೀವ್ ಕಿಶೋರ್ ಅವರು ಟಿಕೆಟ್ ತಪಾಸಣೆಯಲ್ಲಿ ಶ್ಲಾಘನೀಯ ಪ್ರಯತ್ನಗಳಿಗಾಗಿ ಟಿಕೆಟ್ ತಪಾಸಣಾ ಸಿಬ್ಬಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1...

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...