ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಡುವೆ ವಿಶೇಷ ರೈಲು ಸಂಚಾರ

Date:

Advertisements

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

(ರೈಲು ಸಂಖ್ಯೆ-06577/06578) ಎಸ್ಎಂವಿಟಿ ಬೆಂಗಳೂರು-ತಿರುಚ್ಚಿರಾಪಳ್ಳಿ-ಎಸ್ಎಂವಿಟಿ ಬೆಂಗಳೂರು ನಡುವೆ ವಿಶೇಷ ಎಕ್ಸ್ ಪ್ರೆಸ್ (ಟಿಒಡಿ) ಒಂದು ಟ್ರಿಪ್ ಸಂಚರಿಸಲಿದೆ.

(ರೈಲು ಸಂಖ್ಯೆ-06577) ಎಸ್ಎಂವಿಟಿ ಬೆಂಗಳೂರು-ತಿರುಚಿರಾಪಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಜ.12 ರಂದು ಮಧ್ಯಾಹ್ನ 2:30 ಗಂಟೆಗೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು ಅದೇ ದಿನ ರಾತ್ರಿ 11.30 ಗಂಟೆಗೆ ತಿರುಚ್ಚಿರಾಪಳ್ಳಿ ನಿಲ್ದಾಣವನ್ನು ತಲುಪಲಿದೆ.

Advertisements

ಈ ರೈಲು ಬಂಗಾರಪೇಟೆ, ಸೇಲಂ, ನಮಕ್ಕಲ್, ಕರೂರ್ ಮತ್ತು ತಿರುಚಿರಾಪಳ್ಳಿ ಕೋಟೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

ಇದೆ ರೈಲು (06578 ತಿರುಚ್ಚಿರಾಪಳ್ಳಿ-ಎಸ್ಎಂವಿಟಿ ಬೆಂಗಳೂರು) ಪುನಃ ಜನವರಿ 13ರಂದು ತಿರುಚ್ಚಿರಾಪಳ್ಳಿ ನಿಲ್ದಾಣದಿಂದ ಬೆಳಗಿನ ಜಾವ 4.45 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 12 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಕರೂರ್, ನಮಕ್ಕಲ್, ಸೇಲಂ ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

ಈ ಸುದ್ದಿ ಓದಿದ್ದೀರಾ? ಜ.10ರಂದು 201 ಜನರಿಗೆ ಕೊರೋನಾ ದೃಢ: ಮೈಸೂರು ಜಿಲ್ಲೆಯಲ್ಲಿ ಓರ್ವ ಸಾವು

ಈ ರೈಲು ಎಸಿ ಟು ಟೈರ್ (2), ಎಸಿ ತ್ರಿ ಟೈರ್ (6), ಸ್ಲೀಪರ್ ಕ್ಲಾಸ್ (8), ಸಾಮಾನ್ಯ ದ್ವಿತೀಯ ದರ್ಜೆ (2) ಮತ್ತು ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ (2) ಸೇರಿದಂತೆ 20 ಬೋಗಿಗಳು ಒಳಗೊಂಡಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು ಅಧಿಕೃತ ವೆಬ್‌ಸೈಟ್‌ (https://enquiry.indianrail.gov.in) ಅಥವಾ 139ಗೆ ಡಯಲ್ ಮಾಡಿ ಅಥವಾ ತಮ್ಮ ಹತ್ತಿರದ ರೈಲ್ವೆ ನಿಲ್ದಾಣವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದೆ. ಹಾಗೂ ಎಸಿ ಬೋಗಿಗಳಲ್ಲಿ ಬೆಡ್ ಶೀಟು ಮತ್ತು ಹೊದಿಕೆಯ ಸೌಲಭ್ಯ ಒದಗಿಸಲಾಗುವುದಿಲ್ಲ ಎಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X