ಮೊದಲ ಬಾರಿಗೆ ನಮ್ಮ ಮೆಟ್ರೋದಲ್ಲಿ ಯಶಸ್ವಿಯಾಗಿ ಅಂಗಾಂಗ ಸಾಗಣೆ

Date:

ಪ್ರಥಮ ಬಾರಿಗೆ, ನಮ್ಮ ಮೆಟ್ರೋ ದೇಣಿಗೆಯಾದ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ. ಶುಕ್ರವಾರ, ಆಗಸ್ಟ್ 1ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ ಆಸ್ಪತ್ರೆಯಿಂದ ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣಕ್ಕೆ ಆಂಬ್ಯುಲೆನ್ಸ್ ಮೂಲಕ ಸುರಕ್ಷಿತವಾಗಿ ಸಾಗಿಸಲಾಯಿತು.

- Advertisement -

ಮೆಟ್ರೋ ನಿಲ್ದಾಣಕ್ಕೆ ತಲುಪಿದ ತಕ್ಷಣ, ಸಹಾಯಕ ಭದ್ರತಾ ಅಧಿಕಾರಿ (ASO) ಮತ್ತು ಮೆಟ್ರೋ ಸಿಬ್ಬಂದಿ ತಂಡವನ್ನು ಸ್ವೀಕರಿಸಿ, ದಾಖಲೆ ಕಾರ್ಯ ಮತ್ತು ಭದ್ರತಾ ಪರಿಶೀಲನೆಗಳನ್ನು ಸಂಯೋಜಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ‘ನಮ್ಮ ಮೆಟ್ರೋ’ ಪ್ರಯಾಣ ದರ ಏರಿಕೆ | ಕೇಂದ್ರ ಸರ್ಕಾರದ ಸಮಿತಿಯಿಂದಲೇ ದರ ನಿಗದಿ: ಸಿಎಂ ಸ್ಪಷ್ಟನೆ

ಆ ಬಳಿಕ, ಯಕೃತ್ತನ್ನು ಹೊತ್ತ ಮೆಟ್ರೋ ರೈಲು ರಾತ್ರಿ 8:42ಕ್ಕೆ ವೈಟ್‌ಫೀಲ್ಡ್ ನಿಲ್ದಾಣದಿಂದ ಹೊರಟು, ರಾತ್ರಿ 9.48ಕ್ಕೆ ರಾಜರಾಜೇಶ್ವರಿ ನಗರ (ಆರ್‌ಆರ್‌ ನಗರ) ಮೆಟ್ರೋ ನಿಲ್ದಾಣಕ್ಕೆ ತಲುಪಿತು. ಅಲ್ಲಿ ಮತ್ತೊಬ್ಬ ASO ಮತ್ತು ಮೆಟ್ರೋ ಸಿಬ್ಬಂದಿ ವೈದ್ಯಕೀಯ ತಂಡವನ್ನು ಸ್ವಾಗತಿಸಿ, ಕಾಯುತ್ತಿರುವ ಆಂಬ್ಯುಲೆನ್ಸ್‌ ವರ್ಗಾವಣೆ ಮಾಡುವಲ್ಲಿ ನೆರವಾಯಿತು. ಅಂಗಾಂಗ ಶಸ್ತ್ರಚಿಕಿತ್ಸೆಗೆ ಅಗತ್ಯವಾದ ಸಮಯಕ್ಕೆ ಅಂಗವನ್ನು ಸ್ಪರ್ಶ ಆಸ್ಪತ್ರೆಗೆ ಸುರಕ್ಷಿತವಾಗಿ ತಲುಪಿಸಲಾಯಿತು.

ಈ ಜೀವ ಉಳಿಸುವ ಕಾರ್ಯಾಚರಣೆಯಲ್ಲಿ ಸಮಯೋಚಿತ ಸಹಕಾರ ಮತ್ತು ಜವಾಬ್ದಾರಿ ತೋರ್ಪಡಿಸಿದ ಸಹಾಯಕ ಭದ್ರತಾ ಅಧಿಕಾರಿಗಳು, ಹೋಮ್ ಗಾರ್ಡುಗಳು ಮತ್ತು ಮೆಟ್ರೋ ಸಿಬ್ಬಂದಿಗೆ ವೈದ್ಯಕೀಯ ತಂಡದವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಾಚರಣೆ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA) ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ಸಂಯುಕ್ತ ಕಾರ್ಯವಿಧಾನ ಆದೇಶ (JPO)ದ ಮಾರ್ಗಸೂಚಿಗಳಡಿ ನೆರವೇರಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...