ʼಗ್ರಾಮೀಣ ಮಹಿಳೆಯರ ಜೀವನೋಪಾಯಕ್ಕಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆಯ ಉತ್ತೇಜನ-ಕರ್ನಾಟಕ ರಾಜ್ಯದ, ಕಲಬುರಗಿ ಜಿಲ್ಲೆಯ, ಚಿಂಚೋಳಿ ತಾಲೂಕಿನ ಅಣವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಿತು ಒಂದು ಅಧ್ಯಯನʼ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಅದ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಸುಜಾತ ಅವರಿಗೆ ಪಿಹೆಚ್‌ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವ ವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಣವಾರ ಗ್ರಾಮದ ಡಾ. ಸಿದ್ಧಲಿಂಗಪ್ಪ ಎಸ್. ದೇಶಮುಖ್ ಅವರ ಪತ್ನಿ ಹಾಗೂ ಕಲಬುರಗಿ ಜಿಲ್ಲೆಯ ಜಯನಗರದ ಪಾರ್ವತಿ ಮತ್ತು ದಿ. ಶ್ರೀ ರೇವಣಸಿದ್ಧಪ್ಪ ನಾಗಶೆಟ್ಟಿ ಪಾಟೀಲ್ ಹಾವನೂರು ದಂಪತಿಯ ಪುತ್ರಿ ಸುಜಾತ ಅವರು ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಗ್ರಾಮೀಣ ಅಭಿವೃದ್ಧಿ ಅದ್ಯಯನ ಕೇಂದ್ರದಲ್ಲಿ, ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ನಿವೃತ್ತ ಪ್ರಾಧ್ಯಾಪಕ ಪ್ರೊ. ಟಿ ಎಚ್ ಮೂರ್ತಿಯವರ ಮಾರ್ಗದರ್ಶನದೊಂದಿಗೆ ಸಂಶೋಧನೆ ಮಂಡಿಸಿದ್ದರು.
ಇದೇ ಸಂದರ್ಭದಲ್ಲಿ ಪಿಹೆಚ್‌ಡಿ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಹಾಗೂ ಕಲಬುರಗಿ ಜಿಲ್ಲೆ, ಚಿಂಚೋಳಿ ತಾಲೂಕು ಹಾಗೂ ಬೆಂಗಳೂರಿನ ಹಿತೈಷಿಗಳು ಶುಭಕೋರಿ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಸುಷ್ಮ ಬಿ. ಎಸ್. ಅವರಿಗೆ ಪಿಎಚ್.ಡಿ. ಪ್ರಧಾನ
ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಸುಷ್ಮ ಬಿ ಎಸ್ ಅವರ Infrastructural Upgradation of Public Primary Healthcare in Karnataka – A Case Study of Magadi Taluk, Ramanagara District(ಕರ್ನಾಟಕದಲ್ಲಿ ಸಾರ್ವಜನಿಕ ಪ್ರಾಥಮಿಕ ಆರೋಗ್ಯ ಸೇವೆಯ ಮೂಲಸೌಕರ್ಯ ಉನ್ನತೀಕರಣ – ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಒಂದು ಪ್ರಕರಣ ಅಧ್ಯಯನ) ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಯದ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ತುಂಗಭದ್ರಾ ಕಾಲುವೆಗಳಿಗೆ 90 ದಿನ ನೀರು ಹರಿಸಲು ನಿರ್ಧಾರ: ರೈತರ ಮೊಗದಲ್ಲಿ ಮಂದಹಾಸ
ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ತಾಲೂಕಿನ ಸೋಮನಹಳ್ಳಿಯ ಚಲುವರಾಜ ಎಸ್. ಆರ್ ಅವರ ಪತ್ನಿ ಹಾಗೂ ವಿಶಾಲಾಕ್ಷಿ ಮತ್ತು ನಿವೃತ್ತ ಮುಖ್ಯ ಶಿಕ್ಷಕ ಸ್ವಾಮಿ ಜಿ. ಎನ್ ಅವರ ಪುತ್ರಿ ಸುಷ್ಮ ಬಿ ಎಸ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ನಿವೃತ್ತ ಪ್ರಾಧ್ಯಾಪಕ ಪ್ರೊ. ಟಿ ಎಚ್. ಮೂರ್ತಿಯವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರಬಂಧಕ್ಕೆ ಡಾಕ್ಟರೇಟ್ ಲಭಿಸಿದೆ.

ಡಾ. ಸುಷ್ಮ ಬಿ. ಎಸ್ ಅವರ ಈ ಶೈಕ್ಷಣಿಕ ಸಾಧನೆಗೆ ಕುಟುಂಬದವರು, ಗುರು-ಹಿರಿಯರು, ಸ್ನೇಹಿತರು, ಬಂಧುಗಳು ಹಾಗೂ ಹಿತೈಷಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಶುಭ ಹಾರೈಸಿದ್ದಾರೆ.




