BREAKING NEWS | ಜಿಬಿಎ ಚುನಾವಣೆ; ಆಗಸ್ಟ್ 31ರವರೆಗೆ ಗಡುವು ವಿಸ್ತರಿಸಿದ ಸುಪ್ರೀಂ ಕೋರ್ಟ್

Date:

ಬೆಂಗಳೂರಿನ ಐದು ಮಹಾನಗರ ಪಾಲಿಕೆಗಳಿಗೆ (ಜಿಬಿಎ) ಚುನಾವಣೆ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಗಡುವು ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಆಗಸ್ಟ್ 31ರವರೆಗೆ ಸುಪ್ರೀಂ ಕೋರ್ಟ್ ಬುಧವಾರ ಹೆಚ್ಚುವರಿ ಸಮಯ ನೀಡಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಂಚೋಲಿ ಅವರನ್ನು ಒಳಗೊಂಡ ಪೀಠವು ಈ ಹಿಂದೆ ಜೂನ್ 30ರವರೆಗೆ ಗಡುವು ನೀಡಿತ್ತು. ಆದರೆ ಇದೀಗ ಗಡುವು ವಿಸ್ತರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಜಿಬಿಎ ಚುನಾವಣೆ ನಡೆಸಲು ರಾಜ್ಯ ಸರ್ಕಾರದಿಂದ ಹಣ ಕೊಡಿಸಿ: ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ

ರಾಜ್ಯ ಸಿಬ್ಬಂದಿ ಜನಗಣತಿ, ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ, ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಯ ಮಂಡಳಿ ಪರೀಕ್ಷೆಗಳನ್ನು ನಡೆಸುವಲ್ಲಿ ನಿರತರಾಗಿರುವುದರಿಂದ, ಮೂರು ತಿಂಗಳ ಹೆಚ್ಚುವರಿ ಸಮಯವನ್ನು ನೀಡಬೇಕೆಂದು ಅರ್ಜಿಗಳನ್ನು ಸಲ್ಲಿಸಿದ್ದವು.

ಜೂನ್ 30 ರೊಳಗೆ ಚುನಾವಣೆಗಳನ್ನು ಪೂರ್ಣಗೊಳಿಸಲು ನಿರ್ದೇಶಿಸಿದ ಸುಪ್ರೀಂ ಕೋರ್ಟ್‌ನ ಜನವರಿ 12ರ ಆದೇಶವನ್ನು ಬದಲಾಯಿಸುವಂತೆ ಮನವಿ ಮಾಡಿದ್ದವು. ಈ ಮನವಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ಗಡುವು ವಿಸ್ತರಿಸಿದೆ.

ಈ ಹಿಂದೆ ನಗರ ನಿಗಮವಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅವಧಿ 2020ರ ಸೆಪ್ಟೆಂಬರ್ 10ರಂದೇ ಮುಕ್ತಾಯವಾಗಿದೆ. ಐದು ವರ್ಷ ಕಳೆದರೂ ಚುನಾವಣೆ ನಡೆದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...