5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

Date:

ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ, 5, 8, 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿ ಶಾಲಾ ಶಿಕ್ಣಣ ಇಲಾಖೆ ಆಯುಕ್ತೆ ಕಾವೇರಿ ಆದೇಶ ಹೊರಡಿಸಿದ್ದಾರೆ.

- Advertisement -

ಕಳೆದ ಬುಧವಾರ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸತ್ತು. ಸರ್ಕಾರದ ಮೇಲ್ಮನಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠವು ಏಕಸದಸ್ಯ ಪೀಠದ (ಮಾರ್ಚ್‌ 6ರ) ಆದೇಶಕ್ಕೆ ಮಧ್ಯಂತರ ತಡೆ ನೀಡಿ, 5, 8, 9ನೇ ತರಗತಿಯ ಬೋರ್ಡ್‌ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠವು 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಖಾಸಗಿ ಅನುವಾದ ರಹಿತ ಶಾಲೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಮಂಗಳವಾರ ವಿಚಾರಣೆ ನಡೆಸಿದ್ದು, ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿದೆ.

ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ, 5, 8 ಮತ್ತು 9ನೇ ತರಗತಿಯ ಇನ್ನುಳಿದ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. ಆದರೆ, 11ನೇ ತರಗತಿ ಪರೀಕ್ಷೆಗಳು ಪೂರ್ಣಗೊಂಡಿರುವುದರಿಂದ, 11ನೇ ತರಗತಿ ಪರೀಕ್ಷೆ ಬಗ್ಗೆ ನ್ಯಾಯಪೀಠವು ಯಾವುದೇ ಆದೇಶ ನೀಡಿಲ್ಲ.

ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆ | ಮಕ್ಕಳ ಪ್ರಣಾಳಿಕೆ ಸಿದ್ದಪಡಿಸಿದ ಮಹಸ; ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಲು ಪಕ್ಷಗಳಿಗೆ ಕರೆ

ಖಾಸಗಿ ಶಾಲೆಗಳಿಂದಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರಿದೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ ಎಂದು ಹೈಕೋರ್ಟ್‌ನ ವಿಭಾಗಿಯ ಪೀಠದ ಮುಂದೆ ವಾದ ಮಂಡಿಸಿದೆ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆ ಎಂದೂ ಸರ್ಕಾರ ಅಭಿಪ್ರಾಯ ಪಟ್ಟಿದೆ. ವಾದವನ್ನು ಆಲಿಸಿದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿತ್ತು. ಆದರೀಗ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...