ಹಿಂದೆ ಸರಿದ ಮಳೆ; ‘ಬೆವರು’ತ್ತಿರುವ ಬೆಂಗಳೂರು

Date:

ಮೇ ತಿಂಗಳ ಆರಂಭದಲ್ಲಿ ಒಂದು ವಾರ ಪ್ರತಿ ಸಂಜೆ ನಿರಂತರವಾಗಿ ಮಳೆ ಕಂಡ ಬೆಂಗಳೂರಿಗೆ ಈಗ ಧಗೆಯ ಬೇಗೆ ಕಾಡಲಾರಂಭಿಸಿದೆ. ನಗರದಲ್ಲಿ 33.1 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ನಾಶವಾಗುತ್ತಿರುವ ಸಸ್ಯ ಸಂಕುಲ, ಎಗ್ಗಿಲ್ಲದೆ ಓಡುತ್ತಿರುವ ನಗರೀಕರಣದ ಪರಿಣಾಮದಿಂದ ನಗರದಲ್ಲಿ ಶಾಖ ಹೆಚ್ಚುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

- Advertisement -

“ವರ್ಷದಿಂದ ವರ್ಷಕ್ಕೆ ಮರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮರಗಳನ್ನು ಕಡಿಯುವುದರಿಂದ ಸಸ್ಯ ವ್ಯವಸ್ಥೆ ಹಿಡಿದಿಡುತ್ತಿದ್ದ ಶಾಖ ನೇರವಾಗಿ ನಮ್ಮನ್ನು ತಲುಪುತ್ತಿದೆ. ಮರಗಳಿಗಿಂತ ಎತ್ತರಕ್ಕೆ ಕಟ್ಟಡಗಳೇ ಬೆಳೆಯುತ್ತಿವೆ. ಭೂಮಿ ಮತ್ತು ಕಟ್ಟಡಗಳು ಬಿಸಿಯಾಗುತ್ತಿವೆ. ಮನೆಗಳ ಗೋಡೆಗಳು ಹೊರಗಿನ ಗಾಳಿಗಿಂತ ಹೆಚ್ಚು ಬಿಸಿಯಾಗುತ್ತಿವೆ ಮತ್ತು ಅವುಗಳ ಶಾಖವನ್ನು ಮರು-ಹೊರಸೂಸುತ್ತವೆ ಎಂದು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ಹವಾಮಾನ ವಿಭಾಗದ ಮುಖ್ಯಸ್ಥ ಎಂ.ಎನ್ ತಿಮ್ಮೇಗೌಡ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ದಶಕಗಳ ಹಿಂದೆ ನಾವೆಲ್ಲರೂ 8 ಕಿ.ಮೀ ನಡೆದುಕೊಂಡು ಶಾಲೆಗೆ ಹೋಗುತ್ತಿದ್ದೆವು. ಎಂದಿಗೂ ಬೆವರು ಸುರಿಯುತ್ತಿರಲಿಲ್ಲ. ಆದರೆ, ಈಗ 500 ಮೀ. ನಡೆಯುವುದೇ ಕಷ್ಟವಾಗಿದೆ. ಕೆಲವು ವರ್ಷಗಳ ಹಿಂದೆಯೂ ತಾಪಮಾನ 35 ಡಿಗ್ರಿ ಸೆಲ್ಸಿಯಸ್‌ ಮುಟ್ಟಿತ್ತು. ಆಗಲೂ ಇಷ್ಟು ಶಾಖವಿರಲಿಲ್ಲ” ಎಂದು ಅವರು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು ಅಂದು-ಇಂದು – 1 | ಬದಲಾಗುತ್ತಿರುವ ಬೆಂದಕಾಳೂರು ಹಿಂದೆ ಹೇಗಿತ್ತು; ಇಲ್ಲಿ ನೋಡಿ!

“ಬೃಹತ್ ಕಾಂಕ್ರೀಟೀಕರಣದಿಂದಾಗಿ ನಗರಗಳು ಶಾಖ ದ್ವೀಪಗಳಾಗುತ್ತಿವೆ. ಇದು ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳಿಂದ ಮತ್ತಷ್ಟು ಶಾಖ ಹೆಚ್ಚುತ್ತಿದೆ. ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾದರೆ, ಮನುಷ್ಯರು ಅಸ್ವಸ್ಥತೆಯನ್ನು ಅನುಭವಿಸಬೇಕಾಗುತ್ತದೆ” ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಹ್ಯೂಮನ್ ಸೆಟ್ಲ್‌ಮೆಂಟ್‌ನ ಪರಿಸರ ಮತ್ತು ಸುಸ್ಥಿರತೆಯ ಡೀನ್ ಜಗದೀಶ್ ಕೃಷ್ಣಸ್ವಾಮಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕವನ್ನು ಪರಿಚಯಿಸುವ ಸಾಮರ್ಥ್ಯ ಗ್ರಂಥಪಾಲಕರಿಗೆ ಇದೆ: ಡಾ. ರಾಘವೇಂದ್ರ ಪತ್ತೇಪುರ

"ನಾನು ಓದುವ ಕಾಲದಲ್ಲಿ ಗ್ರಂಥಾಲಯದಲ್ಲಿ ಓದುವಾಗ,  ಸಂಶೋದನೆಗೆ ಸಂಬಂಧಿಸಿ ಪುಸ್ತಕಗಳು ಕಡಿಮೆ...

ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?

ಎರಡು ದಿನದ ಕ್ರೀಡೆಗೆ ಕೋಟ್ಯಂತರ ರೂಪಾಯಿ; ಅನ್ನದಾತನಿಗೆ ಅಲ್ಪ ಪರಿಹಾರ! ದಸರಾ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ ಕೆಫೆ’: 44 ಲಕ್ಷ ರೂ. ವಹಿವಾಟು!

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ...

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...