ಪ್ಯಾಲೆಸ್ತೀನ್‌ ಸಿನಿಮಾಗಳನ್ನು ಪ್ರದರ್ಶನ ಮಾಡುವ ನಿಲುವು ತೆಗೆದುಕೊಳ್ಳಿ- ಸಿಎಂ ಗೆ ಪ್ರಕಾಶ್‌ ರೈ ಒತ್ತಾಯ

Date:

“ಈ ವರ್ಷದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಜಕೀಯ ಪ್ರವೇಶ ಮಾಡಿದೆ. ಯಾಕೆಂದರೆ ಈ ಬಾರಿ ಪ್ಯಾಲೆಸ್ತೀನಿನ ಸಿನಿಮಾಗಳ ಪ್ರದರ್ಶನ ನಡೆಯುತ್ತಿಲ್ಲ. ಇದುವರೆಗೆ ಅದ್ಭುತವಾಗಿ ನಡೆಯುತ್ತಿದ್ದ ಉತ್ಸವದಲ್ಲಿ ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ನ ಸಿನಿಮಾ ಪ್ರದರ್ಶನ ಮಾಡಲು ಬಿಡುತ್ತಿಲ್ಲ. ಇದರ ಪ್ರತಿರೋಧವಾಗಿ ಮುಖ್ಯಮಂತ್ರಿಗಳು, ಸರ್ಕಾರ ದೊಡ್ಡ ನಿಲುವು ತೆಗೆದುಕೊಳ್ಳಬೇಕು. ನಿಮ್ಮ ರಾಜಕೀಯ ಹುನ್ನಾರ ನಡೆಯಲ್ಲ ಎಂದು ಹೇಳಬೇಕು. ರಾಯಭಾರಿಯಾಗಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸುತ್ತೇನೆ ” ಎಂದು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ ಪ್ರಕಾಶ್‌ ರೈ ಹೇಳಿದರು.

- Advertisement -

ಗುರುವಾರ ಸಂಜೆ ವಿಧಾನಸೌಧದ ಮುಂದೆ ಆಯೋಜಿಸಿದ್ದ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ನಮ್ಮ ನಾಡಿನ, ಮಣ್ಣಿನ ಕಣ್ಣೀರಿನ ಸಂತಸದ ಕತೆಯಾದ ಹೃದಯದ ಹಣತೆ ಎಂಬ ಒಂದು ಪುಸ್ತಕ ಬೇರೆ ಭಾಷೆಗೆ ತರ್ಜುಮೆಯಾಗಿ ಬೂಕರ್‌ ಪ್ರಶಸ್ತಿ ಬಂದಾಗ ಸಂಭ್ರಮಿಸುವ ನಾವು, ನಮ್ಮ ನೆಲಕ್ಕೆ ಇನ್ನೊಬ್ಬರ ಕತೆಗಳನ್ನು ತರಲು ಆಗಲ್ಲ ಅಂದ್ರೆ ಹೇಗೆ ಒಪ್ಪಲು ಸಾಧ್ಯ?” ಎಂದು ಪ್ರಶ್ನಿಸಿದರು.

“ನಮ್ಮ ಕಷ್ಟಗಳಿಗೆ, ನಮ್ಮ ನೋವುಗಳುಗೆ ನಾವು ಸುರಿಸುವ ಕಣ್ಣೀರಿನ ಪರಿಚಯ ನಮ್ಮ ಕೆನ್ನೆಗಳಿಗೆ ಇದ್ದರೆ ಸಾಲದು, ಇನ್ನೊಬ್ಬರ ನೋವಿಗೂ ನಾವು ಅಳುವ ಕಣ್ಣೀರಿನ ಪರಿಚಯ ನಮ್ಮ ಕೆನ್ನೆಗಳಿಗೆ ಮಾಡಿದರೆ ಮಾತ್ರ ನಾವು ಮನುಷ್ಯರು. ಕೇರಳದಲ್ಲಿ ಸರ್ಕಾರವೇ ನಿಂತು ಪ್ಯಾಲೆಸ್ತೀನ್‌ ಚಲನಚಿತ್ರ ಪ್ರದರ್ಶನ ಮಾಡಿಸಿದೆ. ತಾವೂ ಗಟ್ಟಿ ನಿಲುವು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಪ್ರತಿರೋಧವಾಗಿ ಪ್ಯಾಲೆಸ್ತೀನಿನ ನೋವಿನ ಪದ್ಯ ಓದಿದರು.

ಯುದ್ಧಗಳು ಕೊನೆಗೊಳ್ಳುತ್ತದೆ
ನಾಯಕರು ಕೈ ಕುಲುಕಿ ತೆರಳುತ್ತಾರೆ
ಆದರೆ, ಆ ವೃದ್ಧೆ ಮಗನಿಗಾಗಿ ಕಾಯುತ್ತಾಳೆ
ಆ ಮಹಿಳೆ ಅವಳ ಗಂಡನಿಗಾಗಿ ಕಾಯುತ್ತಾಳೆ
ಮಕ್ಕಳು ವೀರನಾದ ಅಪ್ಪನಿಗಾಗಿ ಕಾಯುತ್ತಾರೆ

ನನ್ನ ಮಾತೃಭೂಮಿಯನ್ನು ಮಾರಿದವರು ಯಾರೆಂದು ಗೊತ್ತಿಲ್ಲ
ಆದರೆ, ಬೆಲೆ ತೆತ್ತವರು ಯಾರೆಂದು ನನಗೆ ಗೊತ್ತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿದರು.

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬಹುಭಾಷಾ ನಟ ಪ್ರಕಾಶ್ ರಾಜ್, ಖ್ಯಾತ ನಟಿ ರುಕ್ಮಿಣಿ ವಸಂತ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯರಾದ ಚಿದಾನಂದ ಪಟೇಲ್ ಸೇರಿ ಹಲವರು ಉಪಸ್ಥಿತರಿದ್ದರು.

ಈ ವರ್ಷದ ಘೋಷವಾಕ್ಯ ಸ್ತ್ರೀ ಎಂದರೆ ಅಷ್ಟೇ ಸಾಕೇ! ಎಂಬುದಾಗಿದೆ. ಸುಮಾರು 70ದೇಶಗಳ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಇಂದಿನಿಂದ ಫೆ. 6ರವರೆಗೆ ಬೆಂಗಳೂರಿನ ಲುಲು ಮಾಲ್‌ನಲ್ಲಿ ಚಿತ್ರೋತ್ಸವ ನಡೆಯಲಿದೆ.

WhatsApp Image 2026 01 29 at 7.27.32 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...