500 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದ ತಹಶೀಲ್ದಾರ್ ಅಜಿತ್ ರೈ 7 ದಿನ ಪೊಲೀಸ್ ವಶಕ್ಕೆ

Date:

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆ ಆರ್ ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ಅಜಿತ್ ರೈ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದ್ದರು. ಈ ಶೋಧ ಕಾರ್ಯ ಗುರುವಾರ ತಡ ರಾತ್ರಿಯವರೆಗೂ ನಡೆದಿತ್ತು.

ತನಿಖೆ ವೇಳೆ ಆರೋಪಿ ಅಜಿತ್ ರೈ ₹500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಯನ್ನು ಹೊಂದಿರುವುದು ತಿಳಿದುಬಂದಿತ್ತು. ಬಳಿಕ, ಅಜಿತ್ ರೈ ಅವರನ್ನು ಗುರುವಾರ ಲೋಕಾಯುಕ್ತ ತನಿಖಾ ತಂಡ ಬಂಧನ ಮಾಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶುಕ್ರವಾರ ಆರೋಪಿಯನ್ನು ಸಿಟಿ ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಳಿಕ ಲೋಕಾಯುಕ್ತ ಪೊಲೀಸರು ನ್ಯಾಯಲಯದ ಮುಂದೆ ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.

ಲೋಕಾಯುಕ್ತ ಪೊಲೀಸರ ಮನವಿಗೆ ಒಪ್ಪಿಗೆ ಸೂಚಿಸಿದ ನ್ಯಾಯಾಧೀಶರು ಏಳು ದಿನಗಳ ವಿಚಾರಣೆಗೆ ಅವಕಾಶ ನೀಡಿ ಆದೇಶ ಹೊಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...