ತೆಲಂಗಾಣ | ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಸಿಎಂ ಕೆಸಿಆರ್

Date:

ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನತ್ತ ಸಾಗುತ್ತಿದೆ. ಬಹುತೇಕ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಲುಗೈ ಸಾಧಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಮತ ಎಣಿಕೆ ಅಂತಿಮ ಹಂತ ತಲುಪಿದೆ. ಚುನಾವಣೋತ್ತರ ಸಮೀಕ್ಷೆಗಳ ಭವಿಷ್ಯ ಇದೀಗ ನಿಜವಾಗುವಂತಿದ್ದು, ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸುತ್ತಿದೆ.

- Advertisement -

ತೆಲಂಗಾಣದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ 60 ಮ್ಯಾಜಿಕ್ ನಂಬರ್‌ ಅನ್ನು ಕಾಂಗ್ರೆಸ್‌ ದಾಟಿ ಮುನ್ನುಗ್ಗುತ್ತಿದೆ. ಎರಡು ವರ್ಷಗಳ ಕಾಲ ತೆಲಂಗಾಣವನ್ನು ಆಳಿದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಭದ್ರಕೋಟೆಯನ್ನು ಕಾಂಗ್ರೆಸ್‌ ಧ್ವಂಸಗೊಳಿಸಿದೆ. ಮೊದಲ ಸುತ್ತಿನಿಂದಲೇ ಕಾಂಗ್ರೆಸ್‌ ಅಭ್ಯರ್ಥಿಗಳು ಭಾರೀ ಮುನ್ನಡೆ ಸಾಧಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ ಸೇರಿದಂತೆ ಹಲವು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕೊಡಂಗಲ್‌ನಲ್ಲಿ ಬಿಆರ್‌ಎಸ್‌ ಪಟ್ನಂ ನರೇಂದ್ರ ರೆಡ್ಡಿ ಅವರನ್ನು ಸೋಲಿಸಿ ರೇವಂತ್ ಗೆದ್ದಿದ್ದಾರೆ. ಅಶ್ವರಾವ್ ಪೇಟೆ ಮತ್ತು ರಾಮಗುಂಡಂನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಆದಿನಾರಾಯಣ ಮತ್ತು ರಾಜ್ ಠಾಕೂರ್ ಗೆಲುವು ಸಾಧಿಸಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರು ಗೆಲುವಿನ ನಗೆ ಬೀರಿದ್ದಾರೆ.

ಬಿಆರ್‌ಎಸ್ ಈ ಸೋಲನ್ನು ಒಪ್ಪಿಕೊಂಡಿದೆ. ಎರಡು ಬಾರಿ ಅಧಿಕಾರ ನೀಡಿದ ತೆಲಂಗಾಣದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇವೆ. ಈ ಫಲಿತಾಂಶವನ್ನು ಪಾಠವಾಗಿ ಪರಿಗಣಿಸುತ್ತೇವೆ. ಮತ್ತೆ ಮೇಲೇರುತ್ತೇವೆ ಎಂದು ಬಿಆರ್‌ಎಸ್‌ ಮುಖಂಡರು ತಿಳಿಸಿದ್ದಾರೆ.

ಈಗಾಗಲೇ, ಕೆಸಿಆರ್ ಸಂಪುಟದ ಆರು ಸಚಿವರು ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಕೆಸಿಆರ್ ಅವರು ಸ್ವಂತ ವಾಹನದಲ್ಲಿ ರಾಜಭವನಕ್ಕೆ ತೆರಳಿದ್ದಾರೆ. ಕೆಸಿಆರ್ ಯಾವುದೇ ಸಂಚಾರ ನಿಯಮಗಳಿಲ್ಲದೆ ಸಾಮಾನ್ಯ ವ್ಯಕ್ತಿಯಂತೆ ಪ್ರಗತಿ ಭವನದಿಂದ ರಾಜಭವನಕ್ಕೆ ತೆರಳಿ, ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲ ತಮಿಳಿಸೈ ಸೌಂದರ್ ರಾಜನ್ ಅವರಿಗೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷ 60ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಪ್ರಮಾಣ ವಚನ ಸ್ವೀಕರಿಸುವ ಕುರಿತು ಚರ್ಚೆ: ಡಿಜಿಪಿ

ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧವಾಗಿದೆ. ಇದೀಗ ಪ್ರಮಾಣ ವಚನ ಸ್ವೀಕಾರದ ಕುರಿತು ರೇವಂತ್ ಅವರೊಂದಿಗೆ ಚರ್ಚಿಸಿರುವುದಾಗಿ ಡಿಜಿಪಿ ಅಂಜನಿಕುಮಾರ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಸಿಎಂ ಸಿದ್ಧರಾಮಯ್ಯ ಪ್ರಚಾರ ನಡೆಸಿದ್ದ ಕಾಮರೆಡ್ಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆ

“ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ನಾಳೆಯಿಂದ 9ರವರೆಗೆ ಎಲ್ಲ ಕ್ಷೇತ್ರಗಳಲ್ಲಿ ವ್ಯವಸ್ಥೆ ಕಲ್ಪಿಸಬೇಕು ಎಂದು ರೇವಂತ್ ಹೇಳಿದರು. ಎಲ್.ಬಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ” ಎಂದು ಡಿಜಿಪಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....