ಬೆಂಗಳೂರು ಟೆಕ್‌ ಶೃಂಗಸಭೆ–2025 ನಾಳೆಯಿಂದ ಆರಂಭ

Date:

28ನೇ ಆವೃತ್ತಿಯ ‘ಬೆಂಗಳೂರು ಟೆಕ್ ಶೃಂಗಸಭೆ’ ಇದೇ 18ರಿಂದ (ಮಂಗಳವಾರ) ಆರಂಭವಾಗಲಿದ್ದು, ಒಟ್ಟು ಮೂರು ದಿನ ನಡೆಯಲಿದೆ.

- Advertisement -

ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಇದೇ ಮೊದಲ ಬಾರಿಗೆ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು (ಬಿಟಿಎಸ್‌) ಆಯೋಜಿಸಲಾಗುತ್ತಿದೆ. ಈ ಹಿಂದೆಂದಿಗಿಂತ ದೊಡ್ಡ ಮಟ್ಟದಲ್ಲಿ ಬಿಟಿಎಸ್‌ ಆಯೋಜಿಸಲು ಮಾಹಿತಿ ತಂತ್ರಜ್ಞಾನ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಮಾಹಿತಿ ತಂತ್ರಜ್ಞಾನ ಮತ್ತು ಡೀಪ್‌ಟೆಕ್‌, ಎಐ ಬ್ರಹ್ಮಾಂಡ, ಸೆಮಿಕಾನ್‌, ಡಿಜಿ–ಆರೋಗ್ಯ ಮತ್ತು ಜೈವಿಕ ತಂತ್ರಜ್ಞಾನ, ನವೋದ್ಯಮ ಪರಿಸರ, ರಕ್ಷಣೆ ಮತ್ತು ಬಾಹ್ಯಾಕಾಶ ಎಂಬ ಪರಿಕಲ್ಪನೆಗಳ ಅಡಿಯಲ್ಲಿ ಪ್ರದರ್ಶನ ಹಾಗೂ ಗೋಷ್ಠಿಗಳನ್ನು ರೂಪಿಸಲಾಗಿದೆ.

ಕೃತಕ ಬುದ್ಧಿಮತ್ತೆ (ಎಐ) ಎಂಬುದೇ ಮಾಹಿತಿ ತಂತ್ರಜ್ಞಾನ ಎಂದು ಸಂವಾದಿಯಾಗಿ ಬಳಕೆಯಾಗುತ್ತಿರುವ ಹೊತ್ತಿದು. ಬಿಟಿಎಸ್‌ ಎಐಗೆ ಹೆಚ್ಚು ಒತ್ತು ನೀಡಿದ್ದು, ಅದರ ಹತ್ತಾರು ಸ್ವರೂಪಗಳನ್ನು ತೆರೆದಿಡುವಂತಹ ಗೋಷ್ಠಿಗಳನ್ನು ರೂಪಿಸಲಾಗಿದೆ. ಜತೆಗೆ ಎಐ ಕ್ಷೇತ್ರಕ್ಕೆ ಸಂಬಂಧಿಸಿದ ನೂರಕ್ಕೂ ಹೆಚ್ಚು ಮಳಿಗೆಗಳುಬಿಟಿಎಸ್‌ನಲ್ಲಿ ಇರಲಿವೆ.

1,200ಕ್ಕೂ ಹೆಚ್ಚು ಮಳಿಗೆಗಳಲ್ಲಿ ಪ್ರದರ್ಶನಗಳು ನಡೆಯಲಿವೆ. ದೇಶ–ವಿದೇಶಗಳ ತಂತ್ರಜ್ಞಾನ ಕ್ಷೇತ್ರದ 10,000ಕ್ಕೂ ಹೆಚ್ಚು ಪ್ರತಿನಿಧಿಗಳು, 50,000ಕ್ಕೂ ಅಧಿಕ ವೀಕ್ಷಕರು ಬಿಟಿಎಸ್‌ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.ನವೋದ್ಯಮಗಳು, ಸಂಶೋಧಕರು, ಹೂಡಿಕೆದಾರರನ್ನು ಒಂದೆಡೆ ಸೇರಿಸಿ ಮುಖಾಮುಖಿಯಾಗಿಸುವ ಹಲವು ವೇದಿಕೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ನವೋದ್ಯಮ, ತಂತ್ರಜ್ಞಾನ ಉದ್ಯಮಗಳು ತಮ್ಮ ಉತ್ಪನ್ನಗಳನ್ನು ಬಿಟಿಎಸ್‌ನಲ್ಲಿಯೇ ಅನಾವರಣ ಮಾಡಲು ಮತ್ತು ಮಾರುಕಟ್ಟೆಗೆ ಬಿಡುಗಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಆತ್ಮಾವಲೋಕನದ ಕಾಲ ಮಾತ್ರವಲ್ಲ, ಪ್ರಬಲವಾಗಿ ಸಜ್ಜುಗೊಳ್ಳುವ ಸಮಯ!

ಸರ್ಕಾರವು ಮುಂದಿನ ದಿನಗಳಲ್ಲಿ ವೆಂಚರ್ ಕ್ಯಾಪಿಟಲ್ ಸಂಸ್ಥೆಗಳ ಸಹಕಾರದೊಂದಿಗೆ ಈ ನಿಧಿಯನ್ನು 1,000 ಕೋಟಿ ರೂ.ಗೆ ವಿಸ್ತರಿಸಲು ಯೋಜಿಸಿದೆ. 150 ಕೋಟಿ ರೂ.– ಡೀಪ್ ಟೆಕ್ ಎಲೆವೇಟ್ ಫಂಡ್, 80 ಕೋಟಿ ರೂ. ಎಲೆವೇಟ್ ಬಿಯಾಂಡ್ ಬೆಂಗಳೂರು ಫಂಡ್,75 ಕೋಟಿ ರೂ. ಕಿಟ್ವಿನ್ ಫಂಡ್ ಮೂಲಕ ಡೀಪ್ ಟೆಕ್ ಮತ್ತು ಎಐ ಸ್ಟಾರ್ಟ್‌ಅಪ್‌ಗಳಿಗೆ ಈಕ್ವಿಟಿ ಹೂಡಿಕೆ, 48 ಕೋಟಿ ರೂ. – ಐಐಟಿ ಮತ್ತು ಐಐಐಟಿ ಧಾರವಾಡ ಹಾಗೂ ಕಲಬುರಗಿಯಲ್ಲಿ ಹೊಸ ಇಂಕ್ಯೂಬೇಟರ್‌ಗಳಿಗೆ 110 ಕೋಟಿ ರೂ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬಿಸಿನೆಸ್ ಇಂಕ್ಯೂಬೇಟರ್ ಸ್ಥಾಪನೆಗೆ ಮೀಸಲಿಡಲಾಗಿದೆ

60 ದೇಶಗಳ ಪ್ರತಿನಿಧಿಗಳು ಭಾಗಿ

100+ತಂತ್ರಜ್ಞಾನ ಗೋಷ್ಠಿಗಳು 1200+ಪ್ರದರ್ಶನ ಮಳಿಗೆಗಳು 10000+ತಂತ್ರಜ್ಞಾನ ಕ್ಷೇತ್ರದ ಪರಿಣಿತರು ಮತ್ತು ಪ್ರತಿನಿಧಿಗಳು ಭಾಗಿ. 50000+ಆಸಕ್ತರು ವಿದ್ಯಾರ್ಥಿಗಳು ವೀಕ್ಷಕರು ಭೇಟಿ ನೀಡುವ ನಿರೀಕ್ಷೆ.

ನವೆಂಬರ್ 18 19 ಮತ್ತು 20ರಂದು ಮೂರು ದಿನಗಳ ತಂತ್ರಜ್ಞಾನ ಶೃಂಗಸಭೆ

ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜನೆ

ನವೋದ್ಯಮ ಪುರಸ್ಕಾರ ಸುಸ್ಥಿರ ಮಳಿಗೆ ಪುರಸ್ಕಾರ ಟಿಸಿಎಸ್‌ ಗ್ರಾಮೀಣ ರಸಪ್ರಶ್ನೆ ಕಾರ್ಯಕ್ರಮ

9 ಭಿನ್ನ ಪರಿಕಲ್ಪನೆಗಳ ಅಡಿಯಲ್ಲಿ ಪ್ರದರ್ಶನ ಗೋಷ್ಠಿ ಆಯೋಜನೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...