ಇನ್ನೂ ಎರಡು ತಿಂಗಳು ನೂರರ ಗಡಿಯಲ್ಲಿಯೇ ಮುಂದುವರೆಯಲಿದೆ ಟೊಮೆಟೊ ದರ

Date:

  • ಇತರೆ ರಾಜ್ಯಗಳಿಗೆ ರಫ್ತಾಗುತ್ತಿರುವ ನಮ್ಮ ರಾಜ್ಯದ ಟೊಮೆಟೊ
  • ಮಳೆಯ ಕೊರತೆಯಿಂದ ಕಡಿಮೆಯಾದ ಟೊಮೆಟೊ ಬೆಳೆ

ರಾಜ್ಯದಲ್ಲಿ ಈಗಾಗಲೇ ಟೊಮೆಟೊ ಬೆಲೆ ಗಗನಕ್ಕೇರಿದ್ದು, ಈ ಬೆಲೆ ಇನ್ನೂ ಎರಡು ತಿಂಗಳು ಮುಂದುವರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ತರಕಾರಿ ಹಣ್ಣುಗಳ ದರ ದುಪ್ಪಟ್ಟಾಗಿದೆ. ಇದರಿಂದ ಗ್ರಾಹಕರು ಕಂಗೆಟ್ಟಿದ್ದು, ಕೆಜಿ ತರಕಾರಿ ತೆಗೆದುಕೊಳ್ಳುತ್ತಿದ್ದವರು ಇದೀಗ ಅರ್ಧಕೆಜಿಗೆ ಬಂದಿಳಿದಿದ್ದಾರೆ. ಇನ್ನೂ ಕೆಲವರು ಅಡಿಗೆ ಸಾಂಬಾರ್‌ಗೆ ಟೊಮೆಟೊ ಬಳಸುವುದನ್ನು ಬಿಟ್ಟು ಹುಣಸೆ ಮತ್ತು ಇನ್ನಿತರ ಪದಾರ್ಥಗಳನ್ನು ಬಳಸುತ್ತಿದ್ದಾರೆ.

ರಾಜ್ಯಕ್ಕೆ ಮುಂಗಾರು ತಡವಾಗಿ ಆಗಮಿಸಿದ್ದು, ಜೂನ್‌ನಲ್ಲಿ ಆರಂಭವಾಗಬೇಕಿದ್ದ ಮಳೆ ಇದೀಗ ಜುಲೈಗೆ ಪ್ರಾರಂಭವಾಗಿದೆ. ಸರಿಯಾದ ಸಮಯಕ್ಕೆ ಮಳೆ ಬರದ ಕಾರಣ ರೈತರು ಬೆಳೆದ ಬೆಳೆ ನಾಶವಾಗಿದೆ. ಇದೇ ವೇಳೆ, ಎಲೆರೋಗ ಕಾಣಿಸಿಕೊಂಡು ಟೊಮೆಟೊ ನಾಶವಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವರ್ಷ ಮಳೆಯ ಕೊರತೆ ಹಿನ್ನೆಲೆ, ಉತ್ತರ ಪ್ರದೇಶ, ಚತ್ತೀಸ್‌ಘಡ್, ದೆಹಲಿಯಲ್ಲಿ ಟೊಮೆಟೊ ಬೆಳೆ ಕಡಿಮೆಯಾಗಿದೆ. ಹಾಗಾಗಿ, ನಮ್ಮ ರಾಜ್ಯದ ಟೊಮೆಟೊಗೆ ಬೇಡಿಕೆ ಇದ್ದು, ಇತರ ರಾಜ್ಯಗಳಿಗೆ ಟೊಮೆಟೊ ರಫ್ತು ಮಾಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಇಂದಿರಾ ಕ್ಯಾಂಟೀನ್ | ಆಹಾರ, ಸ್ವಚ್ಛತೆ ನೋಡಿಕೊಳ್ಳಲು ಬಿಬಿಎಂಪಿ ಅಧಿಕಾರಿ ನೇಮಕ

ಈ ವರ್ಷ ಬೇಡಿಕೆಗೆ ತಕ್ಕಂತೆ ಟೊಮೆಟೊ ಸಿಗದ ಕಾರಣ ಹೆಚ್ಚಿನ ಬೆಲೆ ನಿಗದಿ ಮಾಡಿ ರೈತರು ವ್ಯಾಪಾರ ಮಾಡುತ್ತಿದ್ದಾರೆ. ಪ್ರತಿಬಾರಿ ರಾಜ್ಯಕ್ಕೆ ನಾಸಿಕ್‌ನಿಂದ ಟೊಮೆಟೊ ಸರಬರಾಜು ಆಗುತ್ತಿತ್ತು. ಈ ಬಾರಿ ಅಲ್ಲಿಯೂ ಕೂಡ ಸರಿಯಾಗಿ ಬೆಳೆ ಬಂದಿಲ್ಲ. ಹೀಗಾಗಿ ನಾಸಿಕ್, ತಮಿಳುನಾಡು, ಚೆನೈಗೆ ಕರ್ನಾಟಕದಿಂದ ಟೊಮೆಟೊ ರಫ್ತು ಮಾಡಲಾಗುತ್ತಿದೆ. ಇದರಿಂದ ಬೆಲೆ ಏರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣ: ಹತ್ಯೆಯ ಸಮರ್ಥನೆಗಿಳಿದ ಅಭಿಮಾನಿಗಳು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದರ್ಶನ್...

ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣ: ತನಿಖಾಧಿಕಾರಿ ಬದಲಾವಣೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 14...

ನಟ ದುನಿಯಾ ವಿಜಯ್​​​​​​ ವಿಚ್ಛೇದನ ಅರ್ಜಿ ವಜಾಗೊಳಿಸಿದ ಕೋರ್ಟ್

ನಟ ದರ್ಶನ್​​ ವಿವಾದದ ನಡುವೆ ಇದೀಗ ಸ್ಯಾಂಡಲ್​​​​ವುಡ್‌ನ ಮತ್ತೋಬ್ಬ​​​​​ ನಟ ದುನಿಯಾ...

ಬೆಂಗಳೂರು | ಗಗನಕ್ಕೇರಿದ ದಿನಸಿ, ತರಕಾರಿ ಬೆಲೆ; ₹50ಕ್ಕೇರಿದ ಟೊಮೆಟೊ ದರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಸೇರಿದಂತೆ ನಿತ್ಯ...