ಬಿಬಿಎಂಪಿ ಪುನರ್ ರಚನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

Date:

Advertisements
  • 2014ರಲ್ಲಿ ರಚಿಸಲಾಗಿದ್ದ ‘ತಜ್ಞರ ಸಮಿತಿ’ಯನ್ನೇ ಪುನರ್‌ ರಚಿಸಿದ ಸರ್ಕಾರ
  • ಬೆಂಗಳೂರು ಸಮಗ್ರ ಆಡಳಿತವನ್ನು ಒಂದೇ ವೇದಿಕೆಗೆ ತರುವ ಉದ್ದೇಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪುನರ್ ರಚಿಸಲು ರಾಜ್ಯ ಸರ್ಕಾರ ತಿರ್ಮಾನಿಸಿದ್ದು, ತಜ್ಞರ ಸಮಿತಿ ರಚನೆ ಮಾಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಆಡಳಿತ ಹಾಗೂ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಒದಗಿಸುವ ದೃಷ್ಟಿಯಿಂದ ನಿಗದಿತ ಸಮಯದಲ್ಲಿ ವರದಿ ತರಿಸಿಕೊಂಡು ಅದರ ಆಧಾರದ ಮೇಲೆ ಪಾಲಿಕೆಯನ್ನು ಪುನರ್ ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ.

2014ರಲ್ಲಿ ಬಿಬಿಎಂಪಿ ವಿಭಜಿಸಲು ವರದಿ ನೀಡಲು ರಚಿಸಲಾಗಿದ್ದ ‘ತಜ್ಞರ ಸಮಿತಿ’ಯನ್ನೇ ಸರ್ಕಾರ ಪುನರ್‌ ರಚಿಸಿದೆ.

Advertisements

ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್‌. ಪಾಟೀಲ್‌ ನೇತೃತ್ವದಲ್ಲಿ ಸರ್ಕಾರ ‘ತಜ್ಞರ ಸಮಿತಿ’ ರಚಿಸಿದ್ದು, ಬಿಬಿಎಂಪಿ ಮತ್ತು ಬಿಡಿಎ ಆಯುಕ್ತರಾಗಿದ್ದ ಸಿದ್ದಯ್ಯ ಮತ್ತು ಹಿಂದಿನ ಬೆಂಗಳೂರು ಅಜೆಂಡಾ ಕಾರ್ಯಪಡೆಯ ಸದಸ್ಯ ರವಿಚಂದರ್‌ ಅವರು ಸದಸ್ಯರಾಗಿದ್ದಾರೆ.

ಸರ್ಕಾರ ರಚಿಸಲಾದ ಸಮಿತಿಯೂ ಬಿಬಿಎಂಪಿ ಪುನರ್ ರಚನೆ ಸಂಬಂಧ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿಯನ್ನು ನೀಡಬೇಕು. ಈ ಸಮಿತಿಗೆ ಬೇಕಾದ ಅಗತ್ಯ ಸೌಲಭ್ಯ ಹಾಗೂ ಮಾಹಿತಿಯನ್ನು ಪಾಲಿಕೆಯ ವಿಶೇಷ ಆಯುಕ್ತರು (ಆಡಳಿತ) ಒದಗಿಸಬೇಕು. ಹಾಗೂ ಕರೆದಿರುವ ಸಭೆಗಳಿಗೆ ಸೂಕ್ತವಾಗಿ ಸಮನ್ವಯ ಕಾರ್ಯ ನಿರ್ವಹಿಸಬೇಕು.

ಈ ಸುದ್ದಿ ಓದಿದ್ದೀರಾ? ತಾಯಿ ಕೊಂದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿಟ್ಟು ಪೊಲೀಸ್‌ ಠಾಣೆಗೆ ತಂದ ಮಗಳು

ಸಮಿತಿಗೆ ಉತ್ತಮ ಕಚೇರಿ, ಕೊಠಡಿ, ಅಗತ್ಯ ಸಿಬ್ಬಂದಿ, ಪೀಠೋಪಕರಣಗಳು, ವಾಹನ ಸೌಲಭ್ಯ ಸೇರಿದಂತೆ ಇನ್ನಿತರ ಅವಶ್ಯಕ ಸೌಲಭ್ಯ ಒದಗಿಸುವಂತೆ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್​ ಎಸ್​ ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ವನ್ನು ರಚಿಸಿ ಅದರ ಅಡಿ ಬೆಂಗಳೂರು ನಗರದ ಸಮಗ್ರ ಆಡಳಿತವನ್ನು ಒಂದೇ ವೇದಿಕೆಯಲ್ಲಿ ತರುವುದು ಈ ಆದೇಶದ ಉದ್ದೇಶವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

Download Eedina App Android / iOS

X