ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 225ಕ್ಕೆ ಇಳಿಸಿದ ರಾಜ್ಯ ಸರ್ಕಾರ; ಈ ವರ್ಷದ ಅಂತ್ಯದಲ್ಲಿ ಚುನಾವಣೆ

Date:

  • 2021ರಲ್ಲಿ ವಾರ್ಡ್‌ ಮರುವಿಂಗಡಣೆ ಮಾಡಿದ್ದ ಹಿಂದಿನ ಬಿಜೆಪಿ ಸರ್ಕಾರ
  • ವಾರ್ಡ್ ಜನಸಂಖ್ಯೆಯ ಪ್ರಮಾಣದಲ್ಲಿಯೂ ಹೆಚ್ಚಳವಾಗುವ ಸಾಧ್ಯತೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಾರ್ಡ್‌ಗಳ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಕೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ಈ ಹಿಂದೆ 198 ವಾರ್ಡ್‌ ಹೊಂದಿತ್ತು. ಈ ಹಿಂದಿನ ಬಿಜೆಪಿ ಸರ್ಕಾರ 2021ರ ಜನವರಿ 29ರಂದು ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು ಮರುವಿಂಗಡಣೆ ಮಾಡಿ 198 ರಿಂದ 243ಕ್ಕೆ ಏರಿಕೆ ಮಾಡಿ ಅಧಿಸೂಚನೆ ಹೊರಡಿಸಿತ್ತು. ಇದೀಗ ಕಾಂಗ್ರೆಸ್‌ ಸರ್ಕಾರ ತಕ್ಷಣ ಜಾರಿಗೆ ಬರುವಂತೆ ಈ ಅಧಿಸೂಚನೆಯನ್ನು ಹಿಂಪಡೆದಿದೆ.

ಬಿಬಿಎಂಪಿ ಕಾಯಿದೆ-2020ರ 7ನೇ ಪ್ರಕರಣದ (3)ನೇ ಉಪಪ್ರಕರಣದ ಖಂಡ (ಎ)ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ತಕ್ಷಣಕ್ಕೆ ಜಾರಿಗೆ ಬರುವಂತೆ ವಾರ್ಡ್‌ಗಳ ಸಂಖ್ಯೆಯನ್ನು ಇಳಿಕೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.  

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ ವಾರ್ಡ್‌ ವಿಂಗಡಣೆ ಅವೈಜ್ಞಾನಿಕವಾಗಿದೆ ಎಂದು ಹಲವು ಆರೋಪಗಳು ಬಂದಿದ್ದವು. ಕಾಂಗ್ರೆಸ್‌ನ ಮಾಜಿ ಮೇಯರ್ ಮಂಜುನಾಥರೆಡ್ಡಿ ಸೇರಿದಂತೆ ಮತ್ತಿತರು ಹೈಕೋರ್ಟ್‌ಗೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಕಳೆದ ಜೂನ್ 19ರಂದು ಹಳೆಯ ವಾರ್ಡ್‌ ವಿಂಗಡಣೆ ರದ್ದು ಮಾಡಿ, ಹೊಸದಾಗಿ ಬಿಬಿಎಂಪಿ ವಾರ್ಡ್‌ಗಳನ್ನು ವಿಂಗಡಣೆ ಮಾಡುವಂತೆ ಆದೇಶಿಸಿತ್ತು. 12 ವಾರಗಳ ಒಳಗಾಗಿ ಈ ವಿಂಗಡಣೆ ಮಾಡುವಂತೆ ನಿದೇಶಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೆಂ-ಮೈ ಹೆದ್ದಾರಿ| ಕಟ್ಟುನಿಟ್ಟಿನ ಕ್ರಮಗಳ ಬಳಿಕ ಅಪಘಾತಗಳ ಸಂಖ್ಯೆಯಲ್ಲಿ ಇಳಿಕೆ

ಅದರಂತೆ, ಜೂನ್‌ನಲ್ಲಿ ಕಾಂಗ್ರೆಸ್ ಸರ್ಕಾರ ಬಿಬಿಎಂಪಿ ವಾರ್ಡ್​ ಪುನರ್​ ವಿಂಗಡಣೆಗೆ ಆಯೋಗ ರಚನೆ ಮಾಡಿ ಅಧಿಸೂಚನೆ ಹೊರಡಿಸಿತ್ತು. ಬಿಬಿಎಂಪಿ ಮುಖ್ಯ ಆಯುಕ್ತರು, ಬಿಡಿಎ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಆಯುಕ್ತರು (ಕಂದಾಯ) ಒಳಗೊಂಡ ಆಯೋಗ ರಚಿಸಿ ಅಧಿಸೂಚನೆ ಹೊರಡಿಸಲಾಗಿತ್ತು.

ರಾಜ್ಯಪತ್ರ

243 ವಾರ್ಡ್‌ಗೆ ಸುಮಾರು 36 ಸಾವಿರ ಜನಸಂಖ್ಯೆಯ ಆಸುಪಾಸಿನಲ್ಲಿ ವಾರ್ಡ್‌ ಮರುವಿಂಗಡಣೆ ಮಾಡಲಾಗಿತ್ತು. ಇದೀಗ, ವಾರ್ಡ್ ಸಂಖ್ಯೆ ಕಡಿತಗೊಳಿಸಿರುವುದರಿಂದ ವಾರ್ಡ್ ಜನಸಂಖ್ಯೆಯ ಪ್ರಮಾಣದಲ್ಲಿಯೂ ಹೆಚ್ಚಳವಾಗುವ ಸಾಧ್ಯತೆ ಇದೆ.

ಈ ವರ್ಷದ ಅಂತ್ಯದಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಬಂಜಾರ ಸಂಸ್ಕೃತಿ, ಕಲೆಗೆ ರಾಷ್ಟ್ರೀಯ ಮಹತ್ವವಿದೆ: ಡಾ. ಎ ಆರ್ ಗೋವಿಂದಸ್ವಾಮಿ

ಬಂಜಾರ ಸಂಸ್ಕೃತಿ ಮತ್ತು ಕಲೆಗೆ ರಾಷ್ಟ್ರಮಟ್ಟದಲ್ಲಿ ಮಹತ್ವವಿದೆ ಎಂದು ಬಂಜಾರ ಸಂಸ್ಕೃತಿ...

ಸೆ. 5 | ಗೌರಿ ಲಂಕೇಶ್‌ಗೆ 7ನೇ ವರ್ಷದ ನುಡಿನಮನ: ಬೆಂಗಳೂರಿನಲ್ಲಿ ‘ಗೌರಿ ನೆನಪು’ ಕಾರ್ಯಕ್ರಮ

ಸಾಮಾಜಿಕ ಹೋರಾಟಗಾರ್ತಿ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ನಾಳೆ(ಸೆ.5)ಗೆ ಏಳು...

ಬೆಂಗಳೂರು | DRDO-CABSನಲ್ಲಿ ಮಹಿಳಾ‌ ಕಾರ್ಮಿಕರ ವಜಾ: ಪ್ರತಿಭಟನಾ ಸ್ಥಳಕ್ಕೆ ಸಫಾಯಿ ಕರ್ಮಚಾರಿ ಆಯೋಗ ಭೇಟಿ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗವು ಇಂದು ಡಿಆರ್‌ಡಿಒ-ಸಿಎಬಿಎಸ್‌ಗೆ ಭೇಟಿ ನೀಡಿದ್ದು,...

ಸಮಗ್ರ ಕೊಳಗೇರಿ ಅಭಿವೃದ್ಧಿ ನೀತಿ ಅನುಷ್ಠಾನಕ್ಕೆ ತ್ವರಿತ ನಿಯಮಾವಳಿ: ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ

"ಕರ್ನಾಟಕ ಸಮಗ್ರ ಕೊಳಗೇರಿ ಅಭಿವೃದ್ಧಿ ನೀತಿ-2016ಕ್ಕೆ ತ್ವರಿತವಾಗಿ ನಿಯಮಾವಳಿ ರೂಪಿಸಿ ಜಿಲ್ಲಾ...