ಹೊಸ ಬಸ್‌ ಖರೀದಿಗೆ ಮುಂದಾದ ಸಾರಿಗೆ ನಿಗಮ

Date:

  • ಲಕ್ಸುರಿ ಬಸ್‌ ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
  • ದಿನಕ್ಕೆ ಸರಾಸರಿ 65.02 ಲಕ್ಷ ಕಿ.ಮೀ ಸಂಚರಿಸುತ್ತಿರುವ ನಾಲ್ಕು ನಿಗಮದ ಬಸ್‌ಗಳು

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ತನ್ನ ಮಹಾತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಜೂನ್ 11ರಂದು ಜಾರಿಗೆ ತಂದಿದೆ. ಇದರ ಬೆನ್ನಲ್ಲೇ, ಈ ವರ್ಷ 1894 ಹೊಸ ಬಸ್‌ಗಳನ್ನು ಖರೀದಿಸಲು ಸಾರಿಗೆ ನಿಗಮ ಮುಂದಾಗಿದೆ ಎಂದು ತಿಳಿದುಬಂದಿದೆ.

- Advertisement -

ರಾಜ್ಯ ಸಾರಿಗೆ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲೂಕೆಎಸ್‌ಆರ್‌ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ದ ಲಕ್ಸುರಿ ಬಸ್‌ಗಳನ್ನು ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಈ ಹಿನ್ನೆಲೆ, ಬೇಡಿಕೆಗೆ ಅನುಗುಣವಾಗಿ ಬಸ್‌ಗಳನ್ನು ಖರೀದಿ ಮಾಡಲು ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಹೆಚ್ಚಿನ ಬಸ್‌ಗಳ ಅಗತ್ಯವಿರುವ ಕೆಲವು ಮಾರ್ಗಗಳಲ್ಲಿ ಮಹಿಳಾ ಪ್ರಯಾಣಿಕರು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಹಾಗಾಗಿ, ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಸಾರಿಗೆ ನಿಗಮ ಮುಂದಾಗಿದೆ.

ನಾಲ್ಕು ನಿಗಮಗಳು 1,04,450 ಸಿಬ್ಬಂದಿ ಹೊಂದಿವೆ. ನಾಲ್ಕು ನಿಗಮಗಳು ರಾಜ್ಯದ್ಯಂತ 23,989 ಬಸ್‌ಗಳನ್ನು ಹೊಂದಿದ್ದು, ಒಂದು ದಿನಕ್ಕೆ ಸರಾಸರಿ 65.02 ಲಕ್ಷ ಕಿಲೋಮೀಟರ್ ಸಂಚರಿಸುತ್ತವೆ.

ಶೂನ್ಯ ಟಿಕೆಟ್ ಅಥವಾ ಶಕ್ತಿ ಸ್ಮಾರ್ಟ್ ಕಾರ್ಡ್ ನೀಡಿದ ಡೇಟಾದ ಆಧಾರದ ಮೇಲೆ ನಿಗಮಗಳಿಗೆ ಉಚಿತ ಪ್ರಯಾಣದ ವೆಚ್ಚವನ್ನು ಸರ್ಕಾರ ನೀಡುತ್ತದೆ. ಶಕ್ತಿ ಯೋಜನೆಗೆ ವಾರ್ಷಿಕ ಸುಮಾರು ₹4,051. 56 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಲೆಕ್ಕ ಹಾಕಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿದ್ಯುತ್ ದರ ಹೆಚ್ಚಳಕ್ಕೆ ಸ್ಪಷ್ಟನೆ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

ವಿಶೇಷ ಅನುದಾನ ಮತ್ತು ಹಣಕಾಸಿನ ನೆರವಿನ ಹೊರತಾಗಿ ಬಸ್ ಪಾಸ್‌ಗಳಿಗೆ ಒದಗಿಸಲಾದ ಸಬ್ಸಿಡಿಯನ್ನು ಸರ್ಕಾರವು ವಾಡಿಕೆಯಂತೆ ಮರುಪಾವತಿ ಮಾಡುತ್ತದೆ. ಸರ್ಕಾರವು ಏಪ್ರಿಲ್ 2022 ರಿಂದ ಮಾರ್ಚ್-2023 ರವರೆಗೆ ಎಲ್ಲಾ ನಾಲ್ಕು ನಿಗಮಗಳಿಗೆ ₹ 3,606.52 ಕೋಟಿ ಮರುಪಾವತಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...